Priyanka Gandhi: ನಾಳೆ ರಾಜ್ಯಕ್ಕೆ ಪ್ರಿಯಾಂಕ ಗಾಂಧಿ ಆಗಮನ; ಹಳೇ ಮೈಸೂರು ಭಾಗದಲ್ಲಿ ಚುನಾವಣಾ ಅಬ್ಬರ ಜೋರು!!

Share the Article

Priyanka Gandhi:ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಹೀಗಾಗಿ ರಾಜಕೀಯ ಚಟುವಟಿಕೆಗಳು ರಂಗೇರಿದೆ. ಈಗಾಗಲೇ ರಾಜಕೀಯ ನಾಯಕರ ಚುನಾವಣೆ ಕಾವು ಹೆಚ್ಚಾಗಿತ್ತಿದೆ. ಅಧಿಕಾರಿ ಚುಕ್ಕಾಣಿ ಹಿಡಿಯಲು ರಾಜಕೀಯ ನಾಯಕರು ಕಸರತ್ತು ನಡೆಸಿದ್ದಾರೆ. ಮತದಾರರನ್ನು ಸೆಳೆಯಲು ಮೂರು ಪಕ್ಷದ ನಾಯಕರು ಕಸರತ್ತು ನಡೆಸಿದ್ದಾರೆ. ಮತದಾರರಿಗೆ ಆಮಿಷವೊಡ್ಡಲು ಕುಕ್ಕರ್‌, ಹಣ, ಮದ್ಯ ಹಂಚುತ್ತಿದ್ದಾರೆ.
ಇದೀಗ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನೆಲ್ಲೆ ಮೊದಲ ಬಾರಿಗೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಗಾಂಧಿ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

ಹೌದು ನಾಳೆ ಪ್ರಿಯಾಂಕ ಗಾಂಧಿ(Priyanka Gandhi) ಅವರು ರಾಜ್ಯಕ್ಕೆ ಬರುತ್ತಿದ್ದು, ಹಳೇ ಮೈಸೂರು ಭಾಗದಲ್ಲಿ ಪ್ರಚಾರಕ್ಕೆ ಇಳಿಯಲಿದ್ದಾರೆ. ಮಹಿಳೆಯರ ಮತಗಳನ್ನು ಗಣನೀಯ ಪ್ರಮಾಣದಲ್ಲಿ ಸೆಳೆಯಲು ಪ್ರಿಯಾಂಕ ಗಾಂಧಿ ಅವರು ನಾನಾ ಕಸರತ್ತು ನಡೆಸುತ್ತಿದ್ದಾರೆ. ಕಳೆದ ಬಾರಿ ಪ್ರಿಯಾಂಕ ಗಾಂಧಿ ರಾಜ್ಯಕ್ಕೆ ಭೇಟಿ ನೀಡಿದಾಗ ಗೃಹ ಲಕ್ಷ್ಮಿ ಗ್ಯಾರಂಟಿ ಘೋಷಣೆ ಮಾಡಿದ್ದರು. ಆದರೆ ಈ ಬಾರಿ ಯಾವ ಹೊಸ ಭರವಸೆಯನ್ನು ಜನರಿಗೆ ನೀಡಲಿದ್ದಾರೆ ಎಂಬುದು ಕಾದು ನೋಡಬೇಕಿದೆ.

ಇತ್ತೀಚೆಗೆ ರಾಜ್ಯದಲ್ಲಿ ಸಹೋದರ ರಾಹುಲ್‌ ಗಾಂಧಿಯವರು ಮೂರು ದಿನ ಪ್ರವಾಸ ಕೈಗೊಂಡಿದ್ದರು. ಇದೀಗ ಅವರ ನಿರ್ಗಮನದ ನಂತರ ರಾಜ್ಯಕ್ಕೆ ಸಹೋದರಿ ಪ್ರಿಯಾಂಕ ಗಾಂಧಿ ಆಗಮಿಸುತ್ತಿದ್ದಾರೆ. ಇದೀಗ ಕಾಂಗ್ರೆಸ್‌ ಪ್ರಿಯಾಂಕ ಗಾಂಧಿ ಪ್ರಚಾರಕ್ಕೆ ಸಖತ್‌ ಪ್ಲ್ಯಾನ್‌ ಮಾಡಿಕೊಂಡಿದೆ.

 

ಇದನ್ನು ಓದಿ: Weather Latest News: ಅಬ್ಬರಿಸಲಿದೆ ಗಾಳಿ, ಮಳೆ ಮುಂದಿನ 24 ಗಂಟೆಗಳಲ್ಲಿ! ಯಾವೆಲ್ಲ ಸ್ಥಳಗಳಲ್ಲಿ? ಇಲ್ಲಿದೆ ರಿಪೋರ್ಟ್‌ 

Leave A Reply