BS Yediyurappa: ಕಾಂಗ್ರೆಸ್‌ ಸೋಲುವುದು ನಿಶ್ಚಿತ; ಕಾಂಗ್ರೆಸ್‌ ವಿರುದ್ಧ ಬಿ.ಎಸ್‌ ಯಡಿಯೂರಪ್ಪ ವಾಗ್ದಾಳಿ

BS Yediyurappa: ಶಿವಮೊಗ್ಗ: ಕಾಂಗ್ರೆಸ್‌ ವಿರುದ್ಧ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ (BS Yediyurappa) ವಾಗ್ದಾಳಿ ನಡೆಸಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲುವುದು ನಿಶ್ಚಿತವಾಗಿದೆ. ಈಗಾಗಲೇ ಕಾಂಗ್ರೆಸ್‌ ಮುಳುಗುತ್ತಿರುವ ಹಡಗು ಎಂದು ಬಿ.ಎಸ್‌ ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕ ಅನ್ನೋದನ್ನ ಮರೆತು ಈ ರೀತಿ ಮಾತನಾಡುತ್ತಿರುವುದು ಅವರಿಗೆ ಶೋಭೆ ತರುವುದಿಲ್ಲ. ಅವರು ಬಹಳ ಹಗುರವಾಗಿ ಮಾತನಾಡಿದ್ದಾರೆ. ಅದಕ್ಕೆ ತಕ್ಕ ಉತ್ತರವನ್ನು ಈ ಸಮಾಜದವರು ಕೊಡುತ್ತಾರೆ ಎಂದರು.

ಬಿಎಲ್ ಸಂತೋಷ್ ನಮ್ಮ ಪಕ್ಷದ ಹಿರಿಯ ಮುಖಂಡರು. ಹೀಗಾಗಿ ಅವರು ಪಕ್ಷದ ಸಂಘಟನೆಗಾಗಿ ಹಗಲು ರಾತ್ರಿ ದುಡಿಯುತ್ತಿದ್ದಾರೆ. ಅವರ ಬಗ್ಗೆ ಯಾರಾದರೂ ಹಗುರವಾಗಿ ಮಾತನಾಡಿದರೆ ನಾವ್ಯಾರೂ ಸಹಿಸುವುದಿಲ್ಲ. ಅವರೊಬ್ಬ ಹಿರಿಯ ರಾಜಕೀಯ ಮುತ್ಸದ್ದಿ. ಅವರ ಬಗ್ಗೆ ಟೀಕೆ ಮಾಡಲು ಯಾರಿಗೂ ಯೋಗ್ಯತೆಯಿಲ್ಲ ಹಾಗೂ ಟೀಕೆ ಮಾಡುವುದರಲ್ಲಿ ಅರ್ಥವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ವೀರಶೈವರ ಬಗ್ಗೆ ರಾಹುಲ್ ಗಾಂಧಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರಾಹುಲ್ ಗಾಂಧಿ ಅವರಿಗೆ ವೀರಶೈವರ ಬಗ್ಗೆ ಏನು ಗೊತ್ತಿದೆ? ಬಸವೇಶ್ವರರ ತತ್ವ, ಸಿದ್ಧಾಂತ, ನೀತಿ ಬಗ್ಗೆ ಏನಾದರೂ ಗೊತ್ತಿದೆಯಾ? ಈಗ ಇಲ್ಲಿ ಬಂದು ಎಲ್ಲ ಗೊತ್ತಿರುವ ರೀತಿ ಹುಚ್ಚುಚ್ಚಾಗಿ ಮಾತನಾಡುತ್ತಾರೆ. ನಮ್ಮ ಪ್ರಧಾನಿ ಹಾಗೂ ಅಮಿತ್ ಶಾ ಅವರ ಮುಂದೆ ರಾಹುಲ್ ಗಾಂಧಿ ಯಾವ ಲೆಕ್ಕ ಎಂದು ಟೀಕಿಸಿದ್ದಾರೆ.

ಶಿವಮೊಗ್ಗ: ಕಾಂಗ್ರೆಸ್‌ ವಿರುದ್ಧ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲುವುದು ನಿಶ್ಚಿತವಾಗಿದೆ. ಈಗಾಗಲೇ ಕಾಂಗ್ರೆಸ್‌ ಮುಳುಗುತ್ತಿರುವ ಹಡಗು ಎಂದು ಬಿ.ಎಸ್‌ ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕ ಅನ್ನೋದನ್ನ ಮರೆತು ಈ ರೀತಿ ಮಾತನಾಡುತ್ತಿರುವುದು ಅವರಿಗೆ ಶೋಭೆ ತರುವುದಿಲ್ಲ. ಅವರು ಬಹಳ ಹಗುರವಾಗಿ ಮಾತನಾಡಿದ್ದಾರೆ. ಅದಕ್ಕೆ ತಕ್ಕ ಉತ್ತರವನ್ನು ಈ ಸಮಾಜದವರು ಕೊಡುತ್ತಾರೆ ಎಂದರು.

ಬಿಎಲ್ ಸಂತೋಷ್ ನಮ್ಮ ಪಕ್ಷದ ಹಿರಿಯ ಮುಖಂಡರು. ಹೀಗಾಗಿ ಅವರು ಪಕ್ಷದ ಸಂಘಟನೆಗಾಗಿ ಹಗಲು ರಾತ್ರಿ ದುಡಿಯುತ್ತಿದ್ದಾರೆ. ಅವರ ಬಗ್ಗೆ ಯಾರಾದರೂ ಹಗುರವಾಗಿ ಮಾತನಾಡಿದರೆ ನಾವ್ಯಾರೂ ಸಹಿಸುವುದಿಲ್ಲ. ಅವರೊಬ್ಬ ಹಿರಿಯ ರಾಜಕೀಯ ಮುತ್ಸದ್ದಿ. ಅವರ ಬಗ್ಗೆ ಟೀಕೆ ಮಾಡಲು ಯಾರಿಗೂ ಯೋಗ್ಯತೆಯಿಲ್ಲ ಹಾಗೂ ಟೀಕೆ ಮಾಡುವುದರಲ್ಲಿ ಅರ್ಥವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ವೀರಶೈವರ ಬಗ್ಗೆ ರಾಹುಲ್ ಗಾಂಧಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರಾಹುಲ್ ಗಾಂಧಿ ಅವರಿಗೆ ವೀರಶೈವರ ಬಗ್ಗೆ ಏನು ಗೊತ್ತಿದೆ? ಬಸವೇಶ್ವರರ ತತ್ವ, ಸಿದ್ಧಾಂತ, ನೀತಿ ಬಗ್ಗೆ ಏನಾದರೂ ಗೊತ್ತಿದೆಯಾ? ಈಗ ಇಲ್ಲಿ ಬಂದು ಎಲ್ಲ ಗೊತ್ತಿರುವ ರೀತಿ ಹುಚ್ಚುಚ್ಚಾಗಿ ಮಾತನಾಡುತ್ತಾರೆ. ನಮ್ಮ ಪ್ರಧಾನಿ ಹಾಗೂ ಅಮಿತ್ ಶಾ ಅವರ ಮುಂದೆ ರಾಹುಲ್ ಗಾಂಧಿ ಯಾವ ಲೆಕ್ಕ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ Priyanka Gandhi: ನಾಳೆ ರಾಜ್ಯಕ್ಕೆ ಪ್ರಿಯಾಂಕ ಗಾಂಧಿ ಆಗಮನ; ಹಳೇ ಮೈಸೂರು ಭಾಗದಲ್ಲಿ ಚುನಾವಣಾ ಅಬ್ಬರ ಜೋರು!!

Leave A Reply

Your email address will not be published.