PM Kisan: ಯೋಜನೆಯ ಹಣ ದುಪ್ಪಟ್ಟು! ಈ ಸಾರಿ ಖಾತೆಗೆ ಬೀಳಲಿದೆ 4000ರೂ.!

PM-Kisan Scheme Latest News: ದೇಶದ ರೈತರನ್ನು(Farmers)ಆರ್ಥಿಕವಾಗಿ ಸದೃಢವಾಗಿಸುವ ನಿಟ್ಟಿನಲ್ಲಿ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ.. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ(PM Kisan Samman Yojana) ಮೂಲಕ ಆರ್ಥಿಕ ನೆರವನ್ನು ಕೂಡ ನೀಡುತ್ತಿರುವುದು ಗೊತ್ತಿರುವ ಸಂಗತಿ. ಇದೀಗ, ಈ ರೈತರ ಖಾತೆಗೆ ಹೆಚ್ಚುವರಿ ಹಣ ಬೀಳಲಿದೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ(PM-Kisan Scheme Latest News) ಸರ್ಕಾರವು ರೈತರಿಗೆ ವಾರ್ಷಿಕ 6000 ರೂ. ಒದಗಿಸುತ್ತಿದ್ದು, ಯೋಜನೆಯ ಭಾಗವಾಗಿ ವಾರ್ಷಿಕ 6 ಸಾವಿರ ರೂಪಾಯಿ ರೈತರ ಖಾತೆಗೆ ರವಾನೆ ಮಾಡಲಾಗಿದ್ದು, ಇದೀಗ ಪಿಎಂ ಕಿಸಾನ್ (PM Kisan)ಯೋಜನೆಯ 14 ನೇ ಕಂತಿನ ಹಣ ಬಿಡುಗಡೆ ಕುರಿತಂತೆ ಚರ್ಚೆ ನಡೆಯುತ್ತಿದೆ. ಕೇಂದ್ರ ಸರ್ಕಾರದಿಂದ ರೈತರಿಗೆ ಅನೇಕ ಸೌಲಭ್ಯಗಳನ್ನು ಕಲ್ಪಿಸಿದ್ದು, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಪಡೆಯುತ್ತಿರುವ ಫಲಾನುಭವಿ ರೈತರಿಗೆ ಇನ್ನೂ ಮುಂದೆ ಡಬಲ್ ಧಮಾಕಾ! ಈ ಮೊದಲು ಸರ್ಕಾರ ರೈತರ ಖಾತೆಗೆ ಜಮೆ ಆಗುತ್ತಿದ್ದ 2000 ರೂಪಾಯಿ ಬದಲಿಗೆ ಈಗ ನಿಮಗೆ ಸಂಪೂರ್ಣ 4000 ರೂ. ಲಭ್ಯವಾಗಲಿದೆ.

ಪಿಎಂ ಕಿಸಾನ್ ಅವರಿಗೆ ಸಂಬಂಧಿಸಿದ ದೂರುಗಳನ್ನು ಈ ಮೂಲಕ ನೀಡಬಹುದು. ನಿಮ್ಮ ಖಾತೆಗೆ 13 ನೇ ಕಂತಿನ ಹಣ ಇನ್ನೂ ಖಾತೆಗೆ ಜಮೆ ಆಗಿಲ್ಲ ಎಂದಾದರೆ ನೀವು ಸಹಾಯವಾಣಿ ಸಂಖ್ಯೆ 155261 ಅಥವಾ 1800115526 ಅಥವಾ ಈ ಸಂಖ್ಯೆ 011-23381092 ಅನ್ನು ಸಂಪರ್ಕ ಮಾಡಬಹುದು. ಇದರ ಜೊತೆಗೆ pmkisan-ict@gov.in ಇಮೇಲ್ ಐಡಿಗೆ ಮೇಲ್ ಮಾಡುವ ಮೂಲಕ ನಿಮ್ಮ ಸಮಸ್ಯೆಯನ್ನು ನೀವು ಹೇಳಬಹುದು.

ಈ ಯೋಜನೆಯ ಭಾಗವಾಗಿ ಇದುವರೆಗೆ 10 ಕೋಟಿಗೂ ಹೆಚ್ಚು ರೈತರು 12 ಕಂತುಗಳನ್ನು ಪಡೆದಿದ್ದಾರೆ. ಈ ಮೊತ್ತವನ್ನು ಪ್ರತಿ 4 ತಿಂಗಳಿಗೊಮ್ಮೆ ಪ್ರತಿ ವ್ಯಕ್ತಿಗೆ 2,000 ರೂ.ನಂತೆ ಮೂರು ಕಂತುಗಳಲ್ಲಿ ಡಿಬಿಟಿ ಮೂಲಕ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. 2019ರ ಫೆಬ್ರವರಿಯಲ್ಲಿ ಜಾರಿ ಮಾಡಿದ ಅನುಸಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಕೂಡ ಒಂದಾಗಿದ್ದು, ಇತ್ತೀಚೆಗಷ್ಟೇ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 13ನೇ ಕಂತಿನ ಹಣ ರೈತರ ಖಾತೆಗೆ ಬಿಡುಗಡೆ ಮಾಡಿದೆ. ಇದೀಗ, ರೈತರು 14ನೇ ಕಂತಿನ ನಿರೀಕ್ಷೆಯಲ್ಲಿದ್ದಾರೆ.

13ನೇ ಕಂತಿನ ಹಣ ಜಮೆ ಆಗದ ರೈತರಿಗೆ 13 ಮತ್ತು 14ನೇ ಕಂತುಗಳ ಹಣವನ್ನು ಜಂಟಿಯಾಗಿ ನೀಡುವುದಾಗಿ ಭರವಸೆ ನೀಡಿದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿಯ 14ನೇ ಕಂತು ಏಪ್ರಿಲ್ ಮತ್ತು ಜುಲೈ ನಡುವೆ ಬಿಡುಗಡೆಯಾಗುವ ಸಾಧ್ಯತೆ ದಟ್ಟವಾಗಿದೆ.ಅನೇಕ ರೈತರು ತಮ್ಮ ಪರಿಶೀಲನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಾಧ್ಯವಾಗಿರಲಿಲ್ಲ. ಆದರೆ ಈಗ ಹೆಚ್ಚಿನ ಸಂಖ್ಯೆಯ ರೈತರು ತಮ್ಮ ಪ್ರಕ್ರಿಯೆಯನ್ನು ಸದ್ಯ ಪೂರ್ಣಗೊಳಿಸಿದ್ದು, ಹೀಗಾಗಿ 14ನೇ ಕಂತಿನಲ್ಲಿ ಸರಕಾರ ರೈತರಿಗೆ 2000 ರೂ. ಬದಲಿಗೆ 4000 ರೂ. ಒದಗಿಸಲಿದೆ.

 

ಇದನ್ನು ಓದಿ: HD Kumaraswamy: ಜ್ವರದಿಂದ ಬಳಲುತ್ತಿದ್ದ ಮಾಜಿ ಸಿಎಂ ಹೆಚ್‌ಡಿಕೆ ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್

Leave A Reply

Your email address will not be published.