

Sharmila Attacked Police Constable : ಇತ್ತೀಚೆಗೆ ನಡೆದ ತೆಲಂಗಾಣ ರಾಜ್ಯ ಸಾರ್ವಜನಿಕ ಸೇವಾ ಆಯೋಗದ ಪರಿಕ್ಷಾ ಪ್ರಶ್ನೆ ಪತ್ರಿಕೆ ಲೀಕ್ ಆಗಿರುವುದು ನಮಗೆಲ್ಲರಿಗೂ ತಿಳಿದಿರುವ ವಿಚಾರ. ಆದರೆ, ಇದೇ ಒಳ್ಳೆ ಟೈಮ್ ಎಂದು ಈ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಿಎಂ ಕೆ.ಚಂದ್ರಶೇಖರ್ ರಾವ್ ಸರ್ಕಾರವೇ ನೇರಹೊಣೆ ಎಂದು ಆರೋಪಿಸಿ ವಿರೋಧ ಪಕ್ಷಗಳು ಬೀದಿಗಿಳಿದು ಪ್ರತಿಭಟಿಸುತ್ತಿವೆ. ಅದಲ್ಲದೆ ಪ್ರಶ್ನೆ ಪತ್ರಿಕೆ ಲೀಕ್ ಕೇಸ್ ಸಂಬಂಧ ಕೂಡಲೇ ಸಿಎಂ ಕೆಸಿಆರ್ ಮತ್ತು ಅವರ ಪುತ್ರ ಕೆಟಿಆರ್ ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷಗಳು ಪಟ್ಟುಹಿಡಿದಿದೆ .
ಮುಖ್ಯವಾಗಿ ವೈಎಸ್‌ಆರ್ ತೆಲಂಗಾಣ ಪಕ್ಷದ ಅಧ್ಯಕ್ಷೆ ವೈಎಸ್ ಶರ್ಮಿಳಾ ನೇತೃತ್ವದಲ್ಲಿ ಇಡೀ ತೆಲಂಗಾಣ ರಾಜ್ಯಾದ್ಯಂತ ಪ್ರತಿಭಟನೆಗಳು ಜೋರಾಗಿದ್ದು, ಇಂದು ಹೈದರಬಾದಿನ ಸ್ಪೆಷಲ್ ಇನ್ವೆಸ್ಟಿಗೇಷನ್ ಟೀಂ (SIT) ಆಫೀಸ್ ಮುಂಭಾಗ ವೈಎಸ್ ಶರ್ಮಿಳಾ ಪ್ರತಿಭಟನೆಗೆ ಮುಂದಾಗಿದ್ದ ಸಂದರ್ಭದಲ್ಲಿ ದೊಡ್ಡ ಹೈಡ್ರಾಮವೇ ನಡೆದು ಹೋಗಿದೆ.
ಹೌದು ವೈಎಸ್‌ಆರ್ ತೆಲಂಗಾಣ ಪಕ್ಷದ ಅಧ್ಯಕ್ಷೆ ವೈಎಸ್ ಶರ್ಮಿಳಾ SIT ಆಫೀಸ್‌ಗೆ ಹೋಗುತ್ತಿದ್ದಾಗ ಆಂಧ್ರ ಸಿಎಂ ಜಗನ್ ಸಹೋದರಿ ವೈಎಸ್ ಶರ್ಮಿಳಾ ಅವರನ್ನು ತೆಲಂಗಾಣ ಪೊಲೀಸರು ತಡೆದಿದ್ದಾರೆ.
ಮೊದಲೇ ವಿರೋಧ ಪಕ್ಷದ ಮೇಲಿದ್ದ ಸಿಟ್ಟಿನಿಂದ ಇದ್ದ ಶರ್ಮಿಳಾ ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಮತ್ತು ಮಹಿಳಾ ಪೇದೆ ಮೇಲೆ ಹಲ್ಲೆ (Sharmila Attacked Police Constable ) ನಡೆಸಿದ್ದಾರೆ. ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.
ಫಟನೆ ಕುರಿತು ಕಾನೂನು ಸುವ್ಯವಸ್ಥೆ ಕಾಪಾಡುವ ಭಾಗವಾಗಿ ಎಸ್‌ಐಟಿ ಕಚೇರಿಗೆ ತೆರಳದಂತೆ ಶರ್ಮಿಳಾ ಅವರನ್ನು ತಡೆಯಲಾಗಿದೆ ಎಂದು ಡಿಸಿಪಿ ಸ್ಪಷ್ಟಪಡಿಸಿದ್ದಾರೆ.
ಸದ್ಯ ಮಹಿಳಾ ಪೇದೆ ಮೇಲೆ ಹಲ್ಲೆ ಕೇಸ್ ಸಂಬಂಧ ಶರ್ಮಿಳಾ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಬಂಜಾರ ಹಿಲ್ಸ್ ಪೊಲೀಸ್ ಠಾಣೆಗೆ ಶರ್ಮಿಳಾ ಅವರನ್ನು ಶಿಫ್ಟ್ ಮಾಡಲಾಗಿದೆ. ಶರ್ಮಿಳಾ ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದು, ಸಂತ್ರಸ್ತರು ದೂರು ನೀಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡೇವಿಸ್ ತಿಳಿಸಿದ್ದಾರೆ.
ಇದನ್ನೂ ಓದಿ: Police Station Bomb Blast : ಪೊಲೀಸ್ ಠಾಣೆಯಲ್ಲಿ ಭೀಕರ ಬಾಂಬ್ ಸ್ಫೋಟ! 12 ಪೊಲೀಸರ ಸಾವು, 40ಕ್ಕೂ ಅಧಿಕ ಮಂದಿ ಗಾಯ!!!













