RailTel Recruitment 2023: ಬಿಇ/ಬಿ.ಟೆಕ್, ಡಿಪ್ಲೊಮಾ ಪದವೀಧರರಿಗೆ ಉದ್ಯೋಗವಕಾಶ : ಒಟ್ಟು ಹುದ್ದೆ-23, ಅರ್ಜಿ ಸಲ್ಲಿಸಲು ಕೊನೆ ದಿನ-ಮೇ.16
RailTel Recruitment 2023: ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಅಭ್ಯರ್ಥಿಗಳಿಗೆ ರೈಲ್ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆ : ರೈಲ್ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (RailTel Recruitment 2023 )
ಹುದ್ದೆ : ಗ್ರಾಜುಯೇಟ್/ ಡಿಪ್ಲೊಮಾ ಎಂಜಿನಿಯರ್
ಒಟ್ಟು ಹುದ್ದೆ : 23
ವಿದ್ಯಾರ್ಹತೆ : ಬಿಇ/ಬಿ.ಟೆಕ್, ಡಿಪ್ಲೊಮಾ
ವೇತನ ಮಾಸಿಕ : ₹ 12,000-14,000
ಉದ್ಯೋಗದ ಸ್ಥಳ : ಭಾರತದಲ್ಲಿ ಎಲ್ಲಿ ಬೇಕಾದರೂ
ವಿದ್ಯಾರ್ಹತೆ:
ರೈಲ್ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿವಿಲ್/ ಕಂಪ್ಯೂಟರ್ ಸೈನ್ಸ್/ ಐಟಿ/ ಟೆಲಿಕಮ್ಯುನಿಕೇಷನ್/ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ನಲ್ಲಿ ಬಿಇ/ಬಿ.ಟೆಕ್, ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
ವಯೋಮಿತಿ:
ರೈಲ್ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 25, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 25/04/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 16, 2023
ರೈಲ್ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಬ್ರಾಡ್ಬ್ಯಾಂಡ್ ಮತ್ತು ವಿಪಿಎನ್ ಸೇವೆಗಳನ್ನು ಒದಗಿಸುವ ಭಾರತೀಯ ಸಾರ್ವಜನಿಕ ವಲಯದ ಉದ್ಯಮವಾಗಿದೆ. ಭಾರತೀಯ ರೈಲ್ವೆಯ ರೈಲು ನಿಯಂತ್ರಣ ಕಾರ್ಯಾಚರಣೆ ಮತ್ತು ಸುರಕ್ಷತಾ ವ್ಯವಸ್ಥೆಯನ್ನು ಆಧುನೀಕರಿಸುವ ಉದ್ದೇಶದಿಂದ ಸೆಪ್ಟೆಂಬರ್ 2000 ರಲ್ಲಿ ರೈಲ್ಟೆಲ್ ಅನ್ನು ರಚಿಸಲಾಯಿತು. ಡಿಪ್ಲೊಮೊ ಇಂಜಿನಿಯರಿಂಗ್ ಉದ್ಯೋಗ ಪಡೆಯಲಿಚ್ಚಿಸುವವರು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನು ಓದಿ: Nalin Kumar Kateel: ರಾಹುಲ್ ಗಾಂಧಿ ಯಾವ ಹೋರಾಟದವರು? : ನಳಿನ್ ಕುಮಾರ್ ಕಟೀಲ್ ಪ್ರಶ್ನೆ