PM Modi’s security force helicopter stuck in mud field: ಅಯ್ಯಯ್ಯೋ! ಕೆಸರಿನ ಗದ್ದೆಯಲ್ಲಿ ಸಿಲುಕಿದ ಪ್ರಧಾನಿ ಮೋದಿ ಭದ್ರತಾ ಪಡೆಯ ಹೆಲಿಕಾಪ್ಟರ್: ಮುಂದಾದದ್ದೆಲ್ಲಾ ವಿಚಿತ್ರ!

Share the Article

PM Modi security force: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯ ಸಿಂಧನೂರಿಗೆ ಪ್ರಚಾರ ಕಾರ್ಯಕ್ರಮಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭದ್ರತಾ ಸಿಬ್ಬಂದಿಯ ಸೇನಾ ಪಡೆಯ ಹೆಲಿಕಾಪ್ಟರ್‌ (PM Modi security force) ಭತ್ತದ ಗದ್ದೆಯಲ್ಲಿ ಸಿಕ್ಕಿಹಾಕಿಕೊಂಡಿದೆ.

ಹೌದು, ಚುನಾವಣೆ ನಿಮಿತ್ತ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಪಣ ತೊಟ್ಟಿರುವ ಪ್ರಧಾನಿ ಮೋದಿ ಮೇಲಿಂದ ಮೇಲೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಆದರೆ ಅವರು ಬಂದಾಗಲೆಲ್ಲ ಅವರ ಭದ್ರತೆ ವಿಚಾರದಲ್ಲಿ ಅನೇಕ ಲೋಪಗಳಾಗುತ್ತಿವೆ. ಅಂತೆಯೇ ಇದೀಗ ಪ್ರಧಾನಿ ಆಗಮಿಸಿದ ಹೆಲಿಪ್ಯಾಡ್‌ನಲ್ಲಿ ಮತ್ತೊಂದು ಎಡವಟ್ಟು ನಡೆದಿದೆ. ಮೋದಿ ಭದ್ರತೆಗಾಗಿ ಬಂದಿದ್ದ ಸೇನಾ ಹೆಲಿಕಾಪ್ಟರ್‌ ಕೆಸರಿನ ಗದ್ದೆಯಲ್ಲಿ ಸಿಲುಕಿಕೊಂಡ ಘಟನೆ ರಾಯಚೂರಿನಲ್ಲಿ (Raichuru) ನಡೆದಿದೆ.

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪ್ರಚಾರಕ್ಕೆ ಬೃಹತ್‌ ವೇದಿಕೆಯನ್ನು ಸಿದ್ಧಪಡಿಸಲಾಗಿತ್ತು. ಈ ವೇಳೆ ಕಾರ್ಯಕ್ರಮಕ್ಕೆ ಹೆಲಿಕಾಪ್ಟರ್‌ನಲ್ಲಿ ಆಗಮಿಸುತ್ತಿದ್ದ ನರೇಂದ್ರ ಮೋದಿ ಅವರಿಗೆ ಹೆಲಿಪ್ಯಾಡ್‌ ಸಿದ್ಧಪಡಿಸಲಾಗಿತ್ತು. ಆದರೆ, ಅವರ ಭದ್ರತಾ ಸಿಬ್ಬಂದಿಗೂ ಹೆಲಿಪ್ಯಾಡ್‌ ನಿರ್ಮಾಣ ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದರಿಂದ ತರಾತುರಿಯಲ್ಲಿ ಭತ್ತದ ಗದ್ದೆಯಲ್ಲಿ ಮಣ್ಣನ್ನು ಹಾಕಿ ಹೆಲಿಪ್ಯಾಡ್‌ ನಿರ್ಮಿಸಲಾಗಿತ್ತು. ಭಾರತೀಯ ಭದ್ರತಾ ಪಡೆಯ ಹೆಲಿಕಾಪ್ಟರ್‌ ಲ್ಯಾಂಡ್‌ ಆದ ತಕ್ಷಣ ಗದ್ದೆಯಲ್ಲಿ ಸಿಕ್ಕಿಕೊಂಡಿದೆ. ಹೆಲಿಕ್ಯಾಪ್ಟರ್ ಮೇಲೆತ್ತಲು ಸಿಬ್ಬಂದಿ ಹರಸಾಹಸಪಟ್ಟರು. ನಂತರ ಜೆಸಿಬಿ‌ ಮೂಲಕ ಹೆಲಿಕಾಪ್ಟರ್ ಮೇಲೆತ್ತುವ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ಭದ್ರತಾ ಸಿಬ್ಬಂದಿ ಸಹ ಅಲ್ಲೇ ಸಿಲುಕಿಕೊಂಡಿದ್ದರು.

ಮತ್ತೆರಡು ಹೆಲಿಕಾಪ್ಟರ್‌ಗಳು ಸ್ಥಳಕ್ಕೆ ಆಗಮಿಸಿ ಭದ್ರತಾ ಸಿಬ್ಬಂದಿಯನ್ನು ಕರೆದುಕೊಂಡು ಹೋದವು. ಈ ಸಂದರ್ಭದಲ್ಲಿ ಮೋದಿ ಅವರು ಬಂದಿದ್ದ ಹೆಲಿಕಾಪ್ಟರ್‌, ಕಾರ್ಯಕ್ರಮದ ಸಂದರ್ಭದಲ್ಲಿ ವೇದಿಕೆ ಸುತ್ತ ಸುತ್ತು ಹಾಕಿತು. ಇನ್ನೆರಡು ಹೆಲಿಕಾಪ್ಟರ್‌ ಹಾರಾಟ ನಡೆಸುವವರೆಗೂ ಇದು ಸುತ್ತು ಹಾಕಿತ್ತು.

ಅಂದಹಾಗೆ ಇದಕ್ಕೂ ಮೊದಲು ಸಿಂಧನೂರಿಗೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಿಂಧನೂರು ಹೊರವಲಯದ ಹೊಸಳ್ಳಿ ಕ್ಯಾಂಪ್‌ನ ಪ್ರಚಾರ ಸಮಾವೇಶದ ವೇದಿಕೆ ಹಿಂಭಾಗ ನಿರ್ಮಿಸಲಾದ ಹೆಲಿಪ್ಯಾಡ್‌ನಲ್ಲಿ ಇಳಿದರು. ಆದರೆ ಮೋದಿ ಹೆಲಿಕ್ಯಾಪ್ಟರ್ ಲ್ಯಾಂಡಿಗ್ ವೇಳೆ ಗಾಳಿ ರಭಸಕ್ಕೆ ಮೋದಿ ಅವರ ಭದ್ರತಾ ಸಿಬ್ಬಂದಿಗೆ ಹಾಕಲಾಗಿದ್ದ ಟೆಂಟ್‌ ಹಾರಿ ಹೋಗಿ ವೇಳೆಯೂ ಎಡವಟ್ಟು ಆಗಿತ್ತು.

ಇದನ್ನೂ ಓದಿ:BSF seized snake venom worth 13 crores : ಅಬ್ಬಾಬ್ಬಾ! 13 ಕೋಟಿ ಬೆಲೆ ಬಾಳೋ ಹಾವಿನ ವಿಷ ವಶಕ್ಕೆ ಪಡೆದ ಬಿಎಸ್‌ಎಫ್‌! ಭಾರತ-ಬಾಂಗ್ಲ ಗಡಿಯಲ್ಲಿ ಇದು ಸಿಕ್ಕಿದ್ದಾದ್ರೂ ಹೇಗೆ?

Leave A Reply