The Kerala Story: ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ಶಾಕ್ ನೀಡಿದ ಸೆನ್ಸಾರ್ ಮಂಡಳಿ! ಬಿತ್ತು 10 ದೃಶ್ಯಗಳಿಗೆ ಕತ್ತರಿ!
The Censor Board gave a shock to the film 'The Kerala Story.
The Kerala story: ಕೇವಲ ಟ್ರೇಲರ್‌ನಿಂದಲೇ ದೇಶಾದ್ಯಂತ ವಿವಾದದ ಕಿಡಿ ಹೊತ್ತಿಸಿರುವ ‘ಲವ್ ಜಿಹಾದ್’ ಕಥೆ ಆಧಾರಿತ ಹಿಂದಿ ಸಿನಿಮಾ ‘ದಿ ಕೇರಳ ಸ್ಟೋರಿ’ಗೆ ಇದೀಗ ಕೇಂದ್ರ ಚಲನಚಿತ್ರ ಸೆನ್ಸಾರ್ ಮಂಡಳಿ (ಸಿಬಿಎಫ್‌ಸಿ) ಶಾಕ್ ನೀಡಿದೆ.
ಬಿಡುಗಡೆಗೂ ಮುನ್ನವೆ ಸಾಕಷ್ಟು ವಿವಾದಕ್ಕೆ (Controversy) ಕಾರಣವಾಗಿರುವ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಇದೇ ಮೇ 5ರಂದು ದೇಶದಾದ್ಯಂತ ರಿಲೀಸ್ ಆಗುತ್ತಿದೆ. ಆದರೀಗ ಸೆನ್ಸಾರ್ ಮಂಡಳಿ (ಸಿಬಿಎಫ್‌ಸಿ)ಯು ಚಿತ್ರತಂಡಕ್ಕೆ ಶಾಕ್ ನೀಡಿದ್ದು ವಿವಾದಕ್ಕೆ ಕಾರಣವಾಗುವಂತಹ ಮತ್ತು ಆಕ್ಷೇಪಕ್ಕೆ ಗುರಿಯಾಗಿರುವ ಹಲವು ದೃಶ್ಯಗಳಿಗೆ ಸೆನ್ಸಾರ್ ಮಂಡಳಿಯು ಕತ್ತರಿ ಹಾಕಿದೆ.
ಹೌದು, ಬರೋಬ್ಬರಿ 10 ದೃಶ್ಯಗಳಿಗೆ ಕತ್ತರಿ ಹಾಕುವ ಮೂಲಕ ಚಿತ್ರತಂಡಕ್ಕೆ ಶಾಕ್ ನೀಡಿದೆ. ಅಲ್ಲದೇ ಚಿತ್ರಕ್ಕೆ ‘ಎ’ ಪ್ರಮಾಣ ಪತ್ರವನ್ನು ನೀಡಿದೆ. ಮಾಜಿ ಸಿಎಂ ಒಬ್ಬರ ಸಂದರ್ಶನ, ಕೆಲ ಸಂಭಾಷಣೆಗಳು ಹಾಗೂ ಕಮ್ಯುನಿಸ್ಟ್ (Communist) ಪಕ್ಷದವರ ಬಗ್ಗೆ ಆಡಿದ ಮಾತುಗಳಿಗೆ ಸೆನ್ಸಾರ್ ಮಂಡಳಿಯು ಕತ್ತರಿ ಹಾಕಿದೆ.
ಮೇ 5ರಂದು ರಿಲೀಸ್ ಆಗಲಿರುವ ‘ದಿ ಕೇರಳ ಸ್ಟೋರಿ’ ಸಿನಿಮಾ ಟ್ರೇಲರ್‌ನಿಂದ ದೊಡ್ಡ ಸೌಂಡು ಮಾಡುತ್ತಲಿದೆ. ಈ ಚಿತ್ರದಲ್ಲಿ ಲವ್ ಜಿಹಾದ್ ತೋರಿಸಲಾಗಿದೆ, ಸಂಘ ಪರಿವಾರದ ಅಜೆಂಡಾ ಹೇಳಲಾಗಿದೆ ಎಂದು ಇನ್ನುಳಿದ ರಾಜಕೀಯ ಪಕ್ಷಗಳು ವಾದ ಮಾಡುತ್ತಿವೆ. ಒಟ್ಟಿನಲ್ಲಿ ಈ ಸಿನಿಮಾ ರಿಲೀಸ್ ಆಗುವ ಮುನ್ನವೇ ರಾಷ್ಟ್ರ ಮಟ್ಟದಲ್ಲಿ ಭಾರೀ ಚರ್ಚೆ ಹುಟ್ಟು ಹಾಕಿದೆ. ಅಲ್ಲದೆ ‘ದಿ ಕೇರಳ ಸ್ಟೋರಿ’ ಚಲನಚಿತ್ರ ಬಿಡುಗಡೆಗೆ ತಡೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದ್ದು, ತಡೆ ಕೋರಿದ್ದ ಅರ್ಜಿಯನ್ನು ಸುಪ್ರಿಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ಈ ನಡುವೆಯೇ ಈ ಸಿನಿಮಾದಲ್ಲಿಯ ಮಾಹಿತಿಯು ನಿಜ ಅಂತ ಸಾಬೀತು ಪಡಿಸಿದರೆ ಒಂದು ಕೋಟಿ ರೂಪಾಯಿ ಬಹುಮಾನ ಕೊಡುವುದಾಗಿ ಮುಸ್ಲಿಂ (Muslim) ಯೂತ್ ಲೀಗ್ ಕೇರಳ ರಾಜ್ಯ ಕಮಿಟಿಯು ಘೋಷಿಸಿದೆ. ಸಿನಿಮಾದಲ್ಲಿ ಸುಳ್ಳುಗಳ ಸರಮಾಲೆಯೇ ಇದೆ. ಅವರು ಹೇಳುತ್ತಿರುವುದು ನಿಜ ಎಂದು ಸಾಬೀತು ಪಡಿಸಲಿ ಎಂದು ಹೇಳಿಕೆ ನೀಡಿದೆ.
ಅಂದಹಾಗೆ ಸಿನಿಮಾದಲ್ಲಿ ವಿರೋಧ ಅನಿಸುವಂತಹ ಅಂಶ ಏನಿದೆ? : ‘ದಿ ಕೇರಳ ಸ್ಟೋರಿ’ ಸಿನಿಮಾದಲ್ಲಿ 32 ಸಾವಿರ ಹಿಂದೂ ಹೆಣ್ಣು ಮಕ್ಕಳನ್ನು ಇಸ್ಲಾಂಗೆ ಮತಾಂತರ ಮಾಡಿ ಮದುವೆ ಮಾಡಿರೋದು, ಅಂಥ ಹೆಣ್ಣು ಮಕ್ಕಳನ್ನು ಐಸಿಸ್ ಉಗ್ರ ಸಂಘಟನೆಗೆ ಸೇರಿಸಲಾಗಿದೆ ಎನ್ನೋದನ್ನು ತೋರಿಸಲಾಗಿತ್ತು. ಇದರಿಂದಲೇ ವಿವಾದ ಸೃಷ್ಟಿ ಆಗಿದೆ.
ವಿಫುಲ್ ಶಾ ನಿರ್ಮಾಣ ಮಾಡಿರುವ ಈ ಸಿನಿಮಾಕ್ಕೆ ಸುದೀಪ್ತೋ ಸೇನ್ ನಿರ್ದೇಶನ ಮಾಡಿದ್ದಾರೆ. ಸಂಘ ಪರಿವಾರದ ಅಜೆಂಡಾವನ್ನು ಈ ಸಿನಿಮಾ ಪ್ರತಿಪಾದಿಸುತ್ತಿದೆ ಎಂದು ಕೂಡ ಹೇಳಲಾಗುತ್ತಿದೆ. ಅದಾ ಶರ್ಮಾ, ಯೋಗಿತಾ ಬಹಾನಿ, ಸೋನಿಯಾ ಬಲಾನಿ, ಸಿದ್ಧಿ ಇದ್ನಾನಿ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.
ಇದನ್ನೂ ಓದಿ: ಕಾಮ ಕೆರಳಿಸೋ ಹಿಮಾಲಯನ್ ವಯಾಗ್ರ ಹುಡುಕಲು ತೆರಳಿದ್ದ ಐವರು ನಾಪತ್ತೆ! ಅಷ್ಟಕ್ಕೂ ಅಲ್ಲಿ ನಡೆದದ್ದೇನು?