Liquor in Office: ಮದ್ಯಪ್ರಿಯರಿಗೆ ಗುಡ್ ನ್ಯೂಸ್: ಬಂತು ನೋಡಿ ಹೊಸ ರೂಲ್ಸ್, ಇನ್ಮುಂದೆ ಆಫೀಸ್ ನಲ್ಲೂ ‘ಎಣ್ಣೆ’ ಹಾಕಬಹುದು!

New liquor policy employees will be able to drink liquor in office

Liquor in Office: ಹರ್ಯಾಣದ (Haryana) ಸರ್ಕಾರ ಎಣ್ಣೆ ಪ್ರಿಯರಿಗೆ ಒಂದು ಸಿಹಿ ಸುದ್ದಿ ನೀಡಿದೆ. ಸಾಮಾನ್ಯವಾಗಿ ಕಚೇರಿ, ಸಾರ್ವಜನಿಕ ಸ್ಥಳ ಹೀಗೆ ಕೆಲವೆಡೆ ಮದ್ಯಪಾನ ಮಾಡೋದು ನಿಷೇಧ. ಆದರೆ ಹರ್ಯಾಣದ (Haryana) ಕಾರ್ಪೊರೇಟ್ ಕಚೇರಿಯಲ್ಲಿ (Corporate Office) ಕೆಲಸ ಮಾಡುತ್ತ ಸಹೋದ್ಯೋಗಿಗಳೊಂದಿಗೆ ಮದ್ಯಪಾನ ಮಾಡಬಹುದಾದಂತಹ (Liquor in Office)ಹೊಸ ನಿಯಮವನ್ನು ಸರ್ಕಾರ ತಂದಿದೆ.

ಹರಿಯಾಣ ಮದ್ಯ ನೀತಿಯ ಪ್ರಕಾರ ಕ್ಯಾಬಿನೆಟ್ ಸಭೆಯಲ್ಲಿ ಜೂನ್ 12 ರಿಂದ ರಾಜ್ಯಾದ್ಯಂತ ದೊಡ್ಡ ಕಾರ್ಪೋರೇಟ್ ಕಚೇರಿಗಳಲ್ಲಿ ಕಡಿಮೆ ಕಂಟೆಂಟ್ ಆಸ್ಕೋಹಾಲ್ ಪಾನೀಯಗಳಾದ ಬಿಯರ್, ವೈನ್ ಮತ್ತು ರೆಡಿ ಟು ಡ್ರಿಂಕ್ ಪಾನೀಯಗಳನ್ನು ಸೇವಿಸಲು ಸರ್ಕಾರವು ಅನುಮತಿ ನೀಡುತ್ತಿದೆ.

ಹರಿಯಾಣ ಮದ್ಯ ನೀತಿಯ ಈ ಹೊಸ ನಿಯಮವನ್ನು ಮೇ 9 ರಂದು ಕ್ಯಾಬಿನೆಟ್ ಸಭೆಯಲ್ಲಿ ನಿರ್ಧರಿಸಲಾಗಿದೆ. ಕನಿಷ್ಠ 5,000 ಉದ್ಯೋಗಿಗಳನ್ನು ಹೊಂದಿರುವ ಕಾರ್ಪೊರೇಟ್ ಕಚೇರಿಯಲ್ಲಿ ಉದ್ಯೋಗಿಗಳು ಬಿಯರ್ (Beer) ಹಾಗೂ ವೈನ್‌ನಂತಹ (Wine) ಪಾನೀಯಗಳನ್ನು ಸೇವಿಸಬಹುದು.
ಇದರರ್ಥ ನೀವು ದೊಡ್ಡ ಕಾರ್ಪೊರೇಟ್ ಕಚೇರಿಯಲ್ಲಿ ಉದ್ಯೋಗಿಯಾಗಿದ್ದರೆ ಕಚೇರಿಯ ಆವರಣದಲ್ಲಿ ಬಿಯರ್ ಅಥವಾ ವೈನ್ ಕುಡಿಯಬಹುದು.

ಇದನ್ನೂ ಓದಿ: Fathima Babu: ಯಾವ ಕಾಂಡೋಮ್ ಬಳಸ್ತೇನೆ ಅಂತಾನೂ ಕೇಳ್ತೀರಾ? ನಟಿ ಫಾತಿಮಾ ಬಾಬುಗೆ ಕೇಳಿದ ಪ್ರಶ್ನೆಗೆ ತಿರುಗೇಟು!

Leave A Reply

Your email address will not be published.