G Parameshwar: ಎಲ್ಲಾ ಗ್ಯಾರಂಟಿಗಳಿಗೆ ಕಂಡೀಷನ್ಸ್‌ ಅಪ್ಲೈ ಎಂದ ಜಿ ಪರಮೇಶ್ವರ!

Conditions apply to guarantees of Congress G Parameshwar

Share the Article

G Parameshwar:ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಹಲವು ಭರವಸೆಗಳನ್ನು ನೀಡಿತ್ತು. ಹಾಗೂ ರಾಹುಲ್‌ ಗಾಂಧಿಯವರು ಕಾಂಗ್ರೆಸ್‌ ಗೆಲುವು ಸಾಧಿಸಿದ ನಂತರ ಮೊದಲ ಕ್ಯಾಬಿನೆಟ್‌ನಲ್ಲಿ ಐದು ಗ್ಯಾರಂಟಿಗಳನ್ನು ಈಡೇರಿಸುವ ಭರವಸೆ ಕೊಟ್ಟಿದೆ. ಹಾಗೆನೇ ಈ ಬಗ್ಗೆ ಈ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರು ಗ್ಯಾರಂಟಿಗಳನ್ನು ಪ್ರಾಕ್ಟಿಕಲ್‌ ಆಗಿ ವರ್ಕ್‌ ಮಾಡಿ ಜಾರಿ ಮಾಡುತ್ತೇವೆ. ಆಯಾ ಇಲಾಖೆಯ ಸಚಿವರು ಕೂತು ಈ ಬಗ್ಗೆ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ. ಹಾಗೆನೇ ಕಾಂಗ್ರೆಸ್‌ ಏನೆಲ್ಲಾ ಭರವಸೆ ನೀಡಿದೆಯೋ ಗ್ಯಾರಂಟಿ ಕಾರ್ಡ್‌ನಲ್ಲಿ ಇವುಗಳಿಗೆಲ್ಲ ಕಂಡಿಷನ್ಸ್‌ ಇದೆ ಎಂದು ಡಾ.ಜಿ.ಪರಮೇಶ್ವರ್‌ (G Parameshwar) ಹೇಳಿದ್ದಾರೆ.

ಕಾಂಗ್ರೆಸ್‌ ತನ್ನ ಗ್ಯಾರಂಟಿಗಳಿಗೆ ಕಂಡೀಷನ್ಸ್‌ ಅಪ್ಲೈ ಎಂದು ಹೇಳಿದ್ದಾರೆ. ನಾನ ಪಕ್ಷದ ವರಿಷ್ಠರನ್ನು ನಂಬಿದ್ದೇನೆ. ನಾನು ಕೂಡಾ ಬೇರೆಯವರ ಹಾಗೆ ಐವತ್ತು ಶಾಸಕರ ಗುಂಪು ಕಟ್ಟಿಕೊಂಡು ಹೋಗಬಹುದು. ಆದರೆ ನಾನು ಹಾಗೆ ಮಾಡುವುದಿಲ್ಲ. ನನಗೆ ಶಿಸ್ತು ಮುಖ್ಯ. ಹೈಕಮಾಂಡ್‌ ಏನಾದರೂ ಜವಾಬ್ದಾರಿ ಕೊಟ್ಟರೆ ಖಂಡಿತ ಮಾಡುತ್ತೇನೆ. ನಾನು ಎಲ್ಲಾ ಜವಾಬ್ದಾರಿಗೆ ಸಮರ್ಥ ಎನ್ನುವ ರೀತಿಯಲ್ಲಿ ಮಾತನಾಡುತ್ತಾ, ಡಿ.ಕೆ.ಶಿವಕುಮಾರ್‌, ಮತ್ತು ಸಿದ್ದರಾಮಯ್ಯಾವರಿಗೆ ಟಾಂಗ್‌ ಕೊಡುತ್ತಾ ಮಾಧ್ಯಮ ಪತ್ರಿನಿಧಿಗಳೊಂದಿಗೆ ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ.

ಸುಸೂತ್ರವಾಗಿ ಮುಖ್ಯಮಂತ್ರಿ ಆಯ್ಕೆ ಆಗಲಿದೆ. ನಮ್ಮ ವರಿಷ್ಠರು ಈಗಾಗಲೇ ಶಾಸಕರ ಅಭಿಪ್ರಾಯ ಪಡೆದಿದ್ದಾರೆ. ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ, ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಚರ್ಚೆ ಮಾಡಿ ನಿರ್ಧರಿಸುತ್ತಾರೆ ಎಂದು ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ.

ಇದನ್ನೂ ಓದಿ:ಬೆಳ್ತಂಗಡಿ: ಜೀಪು ಮತ್ತು ಬೈಕ್‌ ನಡುವೆ ಭೀಕರ ಅಪಘಾತ! ಬೈಕ್‌ ಸವಾರನಿಗೆ ಗಂಭೀರ ಗಾಯ

Leave A Reply