ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನಕ್ಕೆ ಕ್ಷಣಗಣನೆ! ಅಧಿಕೃತ ಘೋಷಣೆಯೊಂದೇ ಬಾಕಿ!!

Karnataka next CM is Siddaramaiha

Share the Article

Karnataka new CM : ಕರ್ನಾಟಕ ಮುಖ್ಯಮಂತ್ರಿ (Karnataka new CM) ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಫಿಕ್ಸ್‌ ಆಗಿದ್ದು, ಕಾಂಗ್ರೆಸ್‌ ಹೈಕಮಾಂಡ್‌ ಘೋಷಣೆಯೊಂದಿಗೆ ಬಾಕಿ ಇದೆ ಎಂದು ವರದಿಯಾಗಿದೆ.

ಮೇ.10ರಂದು ಕರ್ನಾಟಕ ವಿಧಾನ ಸಭೆ ಚುನಾವಣೆ ನಡೆದಿದ್ದು, ಮೇ 13ರಂದು ಫಲಿತಾಂಶ ಹೊರ ಬಂದಿದ್ದು, ಕಾಂಗ್ರೆಸ್‌ ಭಾರೀ ಬಹು ಮತದೊಂದಿಗೆ ಗೆಲುವನ್ನು ಸಾಧಿಸಿದೆ. ಈ ಬೆನ್ನಲ್ಲೆ ಸಿಎಂ ಹುದ್ದೆಗಾಗಿ ಸಿದ್ದರಾಮಯ್ಯ ‍& ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸರ್ಕಸ್‌ ನಡೆದಿದೆ.

ಸಿದ್ದರಾಮಯ್ಯ ಇಂದು ರಾಹುಲ್‌ ಗಾಂಧಿ ಭೇಟಿ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಘೋಷಣೆ ಸಾಧ್ಯತೆಯಿದೆ ವರದಿಯಾಗುತ್ತಿದ್ದು, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಪಕ್ಕಾ ಕಾಂಗ್ರೆಸ್‌ ಹೈಕಮಾಂಡ್‌ ಘೋಷಣೆಯೊಂದಿಗೆ ಬಾಕಿ ಇದೆ.

ನಾಳೆ ಸಿದ್ದರಾಮಯ್ಯ ಸಿಎಂ ಆಗಿ ಪ್ರಮಾಣ ವಚನ ಸಾಧ್ಯತೆಯಿದ್ದು, ನಾಳೆ ಬೆಂಗಳೂರಿನ ಕಂಠೀರವ ಸ್ಟೇಡಿಯಂ ಮಧ್ಯಾಹ್ನ3.30ಕ್ಕೆ ಪ್ರಮಾಣ ವಚನ ಸಾಧ್ಯತೆಯಿದೆ. ಈಗಾಗಲೇ ಕಂಠೀರವ ಸ್ಟೇಡಿಯಂ ಸುತ್ತಮುತ್ತ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ ಎಂದು ತಿಳಿಯಲಾಗಿದೆ. ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಫಿಕ್ಸ್‌ ಆಗುತ್ತಿದ್ದಂತೆ ಸಿದ್ದರಾಮಯ್ಯ ನಿವಾಸಕ್ಕೂ ಹೆಚ್ಚಿನ ಪೊಲೀಸ್‌ ಬಂದೋಬಸ್ತ್‌ ಒದಗಿಸಲಾಗಿದೆ. ಇಂದು ಮತ್ತು ನಾಳೆ ಬೆಂಗಳೂರಿನ ನಗರದಲ್ಲಿ ಪೊಲೀಸರು ಫುಲ್‌ ಅಲರ್ಟ್‌ ಆಗಲಿದ್ದಾರೆ.

Leave A Reply