Siddaramaiah’s swearing-in ceremony : ಸಿದ್ದರಾಮಯ್ಯ ಪ್ರಮಾಣವಚನ ಸಮಾರಂಭಕ್ಕೆ ಬರುತ್ತಿದ್ದಾರೆ ಗಣ್ಯಾತಿಗಣ್ಯರು! ಯಾರಿಗೆಲ್ಲಾ ಆಹ್ವಾನ?.. ಇಲ್ಲಿದೆ ನೋಡಿ ಲಿಸ್ಟ್

Other state CM's invited for Siddaramaiha swearing

Siddaramaiah’s swearing: ಕರ್ನಾಟಕ(Karnataka)ದ ಮುಂದಿನ ಸಿಎಂ(CM) ಆಯ್ಕೆ ವಿಚಾರವೀಗ ಸಿದ್ದರಾಮಯ್ಯ(Siddaramaiah) ಸಿಎಂ ಹಾಗೂ ಡಿ ಕೆ ಶಿವಕುಮಾರ್(D K Shivkumar) ಡಿಸಿಎಂ(DCM) ಆಗೋದ್ರು ಮೂಲಕ ಕ್ಲೈಮಾಕ್ಸ್(Climax) ಹಂತ ತಲುಪಿದ್ದು, ಪದಗ್ರಹಣ ಒಂದೇ ಭಾಕಿ ಇದೆ. ಇದೇ ಶನಿವಾರ ಅದೂ ಕೂಡ ನಡೆದು ಕರ್ನಾಟಕದಲ್ಲಿ ನೂತನ ಸರ್ಕಾರ ಆಡಳಿತ ನಡೆಸಲಿದೆ. ಅಂದಹಾಗೆ ಸಿದ್ದು ಪ್ರಮಾಣವಚನ ಕಾರ್ಯಕ್ರಮಕ್ಕೆ ಬೇರೆ ಬೇರೆ ರಾಜ್ಯಗಳ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಗುತ್ತದೆ ಅನ್ನೋ ಸುದ್ದಿ ಹೊರಬಿದ್ದಿದೆ.

 

ಹೌದು, ಕರ್ನಾಟಕದ ಮುಖ್ಯಮಂತ್ರಿಯಾಗಿ ಕಾಂಗ್ರೆಸ್(Congress) ನಾಯಕ ಸಿದ್ದರಾಮಯ್ಯ(Siddaramaiah)ಅವರ ಪ್ರಮಾಣ ವಚನ (Siddaramaiah’s swearing) ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ಹಲವಾರು ನಾಯಕರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಈಗಾಗಲೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun kharge) ಅವರು ಕರ್ನಾಟಕದ ನೂತನ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪಕ್ಷದ ಪ್ರಬಲ ನಾಯಕರನ್ನು ಹಾಗೂ ಇತರ ರಾಜ್ಯಗಳ ಮುಖ್ಯಮಂತ್ರಿಗಳನ್ನು ಆಹ್ವಾನಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಅಂದಹಾಗೆ ಪ್ರಮಾಣ ವಚನ ಸಮಾರಂಭಕ್ಕೆ ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ(Soinia Gandhi), ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಛತ್ತೀಸಗಢದ ಮುಖ್ಯಮಂತ್ರಿ ಭೂಪೇಶ್ ಬಗೇಲ್, ಬಿಹಾರ್‌ ಸಿಎಂ ನಿತೀಶ್ ಕುಮಾರ್, ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್, ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್‌ ಸಿಂಗ್‌ ಸುಖು, ಪುದಿಚೆರಿ ಸಿಎಂ ಎನ್.ರಂಗಸ್ವಾಮಿ, ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೆನ್‌ ಅವರನ್ನು ಆಹ್ವಾನಿಸಲಾಗಿದೆ.

ಬಿಜೆಪಿ(BJP) ನೇತೃತ್ವದ ಕೇಂದ್ರ ಸರ್ಕಾರಕ್ಕೆ ವಿಪಕ್ಷಗಳ ಒಗ್ಗಟ್ಟಿನ ಬಲ ಪ್ರದರ್ಶನಕ್ಕೆ ಕರ್ನಾಟಕದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕರ್ನಾಟಕ ಸಿಎಂ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಅದ್ಧೂರಿಯಾಗಿ ಆಯೋಜಿಸಲು ತಯಾರಿ ನಡೆಸಲಾಗಿದೆ. ಇನ್ನು 2018ರಲ್ಲಿ ಸಮ್ಮಿಶ್ರ ಸರಕಾರ ರಚನೆಯಾಗಿ ಎಚ್ ಡಿ ಕುಮಾರಸ್ವಾಮಿ ಅವರು ಪ್ರಮಾಣವಚನ ಸ್ವೀಕರಿಸುವಾಗಲೂ ಹೀಗೆ ಎಲ್ಲಾ ಪಕ್ಷಗಳ ನಾಯಕರು ಒಟ್ಟಾಗಿ ಮಹಾ ಘಟಬಂಧವನ್ನು ಪ್ರದರ್ಶಿಸಿದ್ದರು.

ಇದನ್ನೂ ಓದಿ:New Parliament building: ಉದ್ಘಾಟನೆಗೆ ಸಿದ್ಧವಾಯ್ತು ನೂತನ ಸಂಸತ್ ಭವನ! ಇದೇ ಮೇ 28ಕ್ಕೆ ಪ್ರಧಾನಿಯಿಂದ ಲೋಕಾರ್ಪಣೆ!!

Leave A Reply

Your email address will not be published.