Home Education Siddaramaiah-DK Shivakumar oath: ನಾಳೆ ಸಿಇಟಿ ವಿದ್ಯಾರ್ಥಿಗಳಿಗೆ ತಟ್ಟಲಿದ್ಯಾ ಟ್ರಾಫಿಕ್‌ ಬಿಸಿ? ಪರೀಕ್ಷಾ ದಿನವೇ...

Siddaramaiah-DK Shivakumar oath: ನಾಳೆ ಸಿಇಟಿ ವಿದ್ಯಾರ್ಥಿಗಳಿಗೆ ತಟ್ಟಲಿದ್ಯಾ ಟ್ರಾಫಿಕ್‌ ಬಿಸಿ? ಪರೀಕ್ಷಾ ದಿನವೇ ಸಿದ್ದು-ಡಿಕೆಶಿ ಪ್ರಮಾಣ ವಚನ

Siddaramaiah-DK Shivakumar oath

Hindu neighbor gifts plot of land

Hindu neighbour gifts land to Muslim journalist

Siddaramaiah-DK Shivakumar oath:  ಸಿಇಟಿ ಪರೀಕ್ಷೆ ದಿನವೇ ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಪ್ರಮಾಣ ವಚನ (Siddaramaiah-DK Shivakumar oath) ಸಮಾರಂಭ ನಡೆಯಲಿದ್ದು, ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಟ್ರಾಫಿಕ್‌ ಬಿಸಿ ತಟ್ಟುವ ಸಾಧ್ಯತೆಯಿದೆ. ಮೇ 20 ಮತ್ತು 21ರಂದು ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ಧತೆ ಮಾಡಿಕೊಂಡಿದ್ದು ಈ ಬೆನ್ನಲ್ಲೆ ಇದೀಗ ಮೇ20ರಂದು ಕಂಠೀರವ ಕ್ರೀಡಾಂಗಣದಲ್ಲಿ ಮಧ್ಯಾಹ್ನ 10.30ಕ್ಕೆ ಕರ್ನಾಟಕ ಸಿಎಂ ಆಗಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ಪ್ರಮಾಣ ವಚನ ಕಾರ್ಯಕ್ರಮಕ್ಕೆ ರಾಜ್ಯ ಬಹುತೇಕ ಜಿಲ್ಲೆಗಳ ಕಾಂಗ್ರೆಸ್‌ ನಾಯಕರು ಆಗಮಿಸುವ ಸಾಧ್ಯತೆಯಿದೆ. ಇನ್ನೂ ಸಿದ್ದರಾಮಯ್ಯ ಹಾಗೂ ಡಿಕೆಶಿವಕುಮಾರ್‌ ಅಭಿಮಾನಿಗಳು ಬರಲಿದ್ದಾರೆ.
ಈ ಕಾರಣದಿಂದಾಗಿ ಪರೀಕ್ಷಾ ಕೇಂದ್ರಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಕೊಂಚ ಮಟ್ಟಿಗೆ ಟ್ರಾಫಿಕ್‌ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ. ನಾಳೆ (ಮೇ 20)ರ ಬೆಳಗ್ಗೆ 10.30ಕ್ಕೆ ಸಿಟಿಇ ಪರೀಕ್ಷೆ ಆರಂಭಗೊಳ್ಳಲಿದ್ದು, ಮೊದಲ ದಿನ ಗಣಿತ ಮತ್ತು ಜೀವಶಾಸ್ತ್ರದ ಪರೀಕ್ಷೆ ನಡೆಯಲಿದೆ ಎಂದು ವರದಿಯಾಗಿದೆ.

ಅಲ್ಲದೇ ಈ ಬಾರಿ ಸಿಇಟಿಗೆ 2.61 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿದ್ದು, ರಾಜ್ಯಾದ್ಯಂತ 562 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತದೆ. ಬೆಂಗಳೂರಿನಲ್ಲೇ 121 ಕೇಂದ್ರಗಳಿದ್ದು ಮೇ.20ರಂದು ಪರೀಕ್ಷೆ ನಡೆಯಲಿದೆ ಈಗಾಗಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾರೀ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ:ಪುತ್ತೂರು ಬ್ಯಾನರ್ ವಿವಾದ: ನನ್ನ ಕ್ಷೇತ್ರಕ್ಕೆ ಬಂದರೆ ಹುಷಾರ್ ಹರೀಶ್ ಪೂಂಜಾಗೆ ಅಶೋಕ್ ಕುಮಾರ್ ರೈ ಎಚ್ಚರಿಕೆ !