MLA Ajay Singh: ನನಗೂ ಸಚಿವ ಸ್ಥಾನ ಸಿಗುತ್ತೆ ಅನ್ನೋ ವಿಶ್ವಾಸವಿದೆ : ಶಾಸಕ ಅಜಯ್‌ ಸಿಂಗ್‌

MLA Ajay Singh : ದೆಹಲಿ : ನಾನು ಕೂಡಾ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ, ನನಗೂ ಸಚಿವ ಸ್ಥಾನ ಸಿಗುತ್ತೆ ಅನ್ನೋ ವಿಶ್ವಾಸವಿದೆ ಎಂದು ಜೇವರ್ಗಿ ಶಾಸಕ ಶಾಸಕ ಅಜಯ್‌ ಸಿಂಗ್‌ (MLA Ajay Singh) ವಿಶ್ವಾಸ ವ್ಯಕ್ತಪಡಿಸಿದ್ದಾರೆ

 

ಕರ್ನಾಟಕ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಭಾರೀ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದು, ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಈ ನಿಟ್ಟಿನಲ್ಲಿ ಹೈಕಮಾಂಡ್‌ ಅಂಗಳದಲ್ಲಿ ಸಚಿವ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಹಲವು ನಾಯಕರು ತಮ್ಮ ವಿಶ್ವಾಸವನ್ನು ವ್ಯಕ್ತಪಡಿಸುತ್ತಿದ್ದಾರೆ. ಇದೀಗ ದೆಹಲಿಯಲ್ಲಿಮಾಧ್ಯಮಗಳೊಂದಿಗೆ ಜೇವರ್ಗಿ ಶಾಸಕ ಅಜಯ್‌ ಸಿಂಗ್‌ ಮಾತನಾಡಿ, ನಾನು ಕೂಡಾ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ.

ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಅವರಿಗೂ ಮನವಿ ಮಾಡಿದ್ದೇನೆ ನನಗೂ ಸಚಿವ ಸ್ಥಾನ ಸಿಗುತ್ತೆ ಅನ್ನೋ ವಿಶ್ವಾಸವಿದೆ ಎಂದಿದ್ದಾರೆ.

Leave A Reply

Your email address will not be published.