ಇಂದು 8 ಮಂದಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕಾರ : ಇಲ್ಲಿದೆ ಮಾಹಿತಿ
Karnataka new ministers oath :ಕರ್ನಾಟಕದ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಸಿದ್ಧರಾಮಯ್ಯ 2ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದರು. ಅಜ್ಜಯ್ಯನ ಹೆಸರಿನಲ್ಲಿಉಪ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು ಬಳಿಕ 8 ಮಂದಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ (Karnataka new ministers oath). ಈ ಕುರಿತ ಕಂಪ್ಲೀಟ್ ಮಾಹಿತಿ ಇಲ್ಲಿದೆ ಓದಿ..
8 ಮಂದಿ ನೂತನ ಸಚಿವರು :
ಡಾ.ಜಿ.ಪರಮೇಶ್ವರ್ :
ಕೆ.ಹೆಚ್. ಮುನಿಯಪ್ಪ
ಕೆ.ಜೆ. ಜಾರ್ಜ್
ಎಂ.ಬಿ.ಪಾಟೀಲ್
ಸತೀಶ್ ಜಾರಕಿಹೊಳಿ
ಪ್ರಿಯಾಂಕ್ ಖರ್ಗೆ
ರಾಮಲಿಂಗ ರೆಡ್ಡಿ
ಜಮೀರ್ ಅಹ್ಮದ್ ಖಾನ್
ಸಂವಿಧಾನದ ಹೆಸರಿನಲ್ಲಿ ಸಚಿವರಾಗಿ ಡಾ.ಜಿ.ಪರಮೇಶ್ವರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧನೆ ಮಾಡಿದ್ದಾರೆ.
ಇನ್ನೂ ದೇವರ ಹೆಸರಿನಲ್ಲಿ ಸಚಿವರಾಗಿ ಕೆ.ಹೆಚ್.ಮುನಿಯಪ್ಪ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧನೆ ಮಾಡಿದ್ದರು.
ದೇವರ ಹೆಸರಿನಲ್ಲಿಸಚಿವರಾಗಿ ಕೆ.ಜೆ.ಜಾರ್ಜ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧನೆ ಮಾಡಿದ್ದಾರೆ.
ದೇವರ ಹೆಸರಿನಲ್ಲಿ ಸಚಿವರಾಗಿ ಎಂ.ಬಿ.ಪಾಟೀಲ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. . ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧನೆ ಮಾಡಿದ್ದರು.
ಬುದ್ಧ, ಬಸವ, ಅಂಬೇಡ್ಕರ್ ಹೆಸರಿನಲ್ಲಿ ಸಚಿವರಾಗಿ ಸತೀಶ್ ಜಾರಕಿಹೊಳಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.
ದೇವರ ಹೆಸರಿನಲ್ಲಿಸಚಿವರಾಗಿ ಪ್ರಿಯಾಂಕ್ ಖರ್ಗೆ ಪ್ರಮಾಣ ವಚನ ಸ್ವೀಕರಿಸಿದ್ದು, ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧನೆ ಮಾಡಿದ್ದಾರೆ.
ದೇವರ ಹೆಸರಿನಲ್ಲಿಸಚಿವರಾಗಿ ರಾಮಲಿಂಗಾರೆಡ್ಡಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧನೆಮಾಡಿದ್ರು.
ಇಂಗ್ಲೀಷ್ನಲ್ಲಿ ಅಲ್ಲಾಹ್ ಮತ್ತು ತಾಯಿಯ ಹೆಸರಿನಲ್ಲಿ ಜಮೀರ್ ಅಹ್ಮದ್ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು