Karnataka budget : ಜುಲೈನಲ್ಲಿ ರಾಜ್ಯದ ಹೊಸ ಬಜೆಟ್ ಮಂಡನೆ: ನೂತನ ಸಿಎಂ ಸಿದ್ದರಾಮಯ್ಯ ಘೋಷಣೆ

Karnataka budget presentation in July CM Siddaramaiah

Karnataka budget : ಮುಂದಿನ ಜುಲೈ ತಿಂಗಳಿನಲ್ಲೇ ರಾಜ್ಯ ಬಜೆಟ್ (Karnataka Budget 2023) ಮಂಡಿಸುವುದಾಗಿ ನೂತನ ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.

ಹೌದು, ಶನಿವಾರ(Saturday) ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ದಿನವೇ ಸಂಪುಟ ಸಭೆ ನಡೆಸಿದ ಸಿದ್ದರಾಮಯ್ಯ (Siddaramaiah) ಅವರು ಕಾಂಗ್ರೆಸ್ ಪಕ್ಷ ನೀಡಿದ್ದ 5 ಗ್ಯಾರಂಟಿಗಳಿಗೆ ತಾತ್ವಿಕ ಒಪ್ಪಿಗೆ ಸೂಚಿಸಿದ್ದಾರೆ. ಮುಂದಿನ ಸಂಪುಟ ಸಭೆ ನಡೆಸಿದ ಬಳಿಕ ಆದೇಶ ಹೊರಡಿಸುವುದಾಗಿ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು “ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಭರವಸೆಯಂತೆ ಗೃಹಜ್ಯೋತಿ(Gruha Jyothi) ಯೋಜನೆ ಅಡಿ 200 ಯೂನಿಟ್ ಉಚಿತ ವಿದ್ಯುತ್(Free Current Scheme), ಗೃಹಲಕ್ಷ್ಮಿ ಯೋಜನೆ(Gruha Lkashmi) ಅಡಿ ಮನೆ ಒಡತಿಗೆ ಪ್ರತಿ ತಿಂಗಳು 2000 ರೂಪಾಯಿ, ಯುವ ನಿಧಿ ಯೋಜನೆ ಅಡಿ ಪದವೀಧರರಿಗೆ ಪ್ರತಿ ತಿಂಗಳು 3000 ಹಾಗೂ ಡಿಪ್ಲೋಮೋ(Diploma) ಪದವೀಧರರಿಗೆ 1500 ರೂಪಾಯಿ ನಿರುದ್ಯೋಗ ಭತ್ಯೆ, ಉಚಿತ ಪ್ರಯಾಣ ನಮ್ಮ ಪ್ರಮಾಣ ಯೋಜನೆ ಅಡಿ ಮಹಿಳೆಯರಿಗೆ ಬಸ್ ಸಂಚಾರ ಉಚಿತ ಹಾಗೂ ಅನ್ನಭಾಗ್ಯ ಯೋಜನೆ ಅಡಿ ಬಡವರಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿ ವಿತರಿಸಲು ತೀರ್ಮಾನ ಕೈಗೊಳ್ಳಲಾಗಿದೆ” ಎಂದರು.

2013-2018 ರಲ್ಲಿ 158 ಭರವಸೆ ಈಡೇರಿಸಿದ್ವಿ, ಅದರ ಜೊತೆಗೆ 30 ಕಾರ್ಯಕ್ರಮಗಳನ್ನ ಹೊಸದಾಗಿ ಜಾರಿ ಮಾಡಿದ್ವಿ. ಇಂದಿರಾ ಕ್ಯಾಂಟೀನ್(Indhia Canteen), ಶೂ ಭಾಗ್ಯ, ವಿದ್ಯಾಸಿರಿ(Vidhyasiri) ಯೋಜನೆಗಳನ್ನ ಹೊಸದಾಗಿ ಜಾರಿಗೊಳಿಸಿದ್ವಿ. ಜನರಿಗೆ ನಮ್ಮ ಮೇಲೆ ವಿಶ್ವಾಸ ಇದೆ. ನಾವು ಕೊಟ್ಡ ಮಾತಿನಂತೆ ನಡೆಯುತ್ತೇವೆ ಎಂದು ಭರವಸೆ ನೀಡಿದರು.

ಅಲ್ಲದೆ ಬಸವರಾಜ ಬೊಮ್ಮಾಯಿ(Basavaraj Bommai) ನೇತೃತ್ವದ ಹಿಂದಿನ ಸರ್ಕಾರ 3.10 ಲಕ್ಷ ಕೋಟಿ ರೂಪಾಯಿ ಮೊತ್ತದ ಬಜೆಟ್ ಮಂಡಿಸಿದ್ದು, ತಮ್ಮ ಸರ್ಕಾರ 3.25 ಲಕ್ಷ ಕೋಟಿ ರೂಪಾಯಿ ಬಜೆಟ್ ಮಂಡಿಸಲಿದೆ. ಇದರಿಂದ ಗ್ಯಾರಂಟಿಗಳ ಜಾರಿಗೆ ಹದಿನೈದು ಸಾವಿರ ಕೋಟಿ ರೂಪಾಯಿ ಲಭ್ಯವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅಂದಹಾಗೆ ಈಗಾಗಲೇ ಅಕ್ಕಿ ವಿತರಣೆಗೆ ಆದೇಶ ಹೊರ ಬಿದ್ದಿದ್ದು, ಇನ್ನುಳಿದ ಯೋಜನೆಗಳಿಗೆ ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಅನುಷ್ಠಾನಕ್ಕೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿದು ಬಂದಿದ್ದು, ಇದರ ಜೊತೆಗೆ ಜುಲೈನಲ್ಲಿ 2023 – 24 ನೇ ಸಾಲಿಗೆ ಹೊಸ ಬಜೆಟ್ ಮಂಡಿಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ.

ಇನ್ನು ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿಯಾಗಿ(DCM) ಏಳು ಬಜೆಟ್‌ಗಳನ್ನು ಮಂಡಿಸಿದ್ದಾರೆ. ಕಾಂಗ್ರೆಸ್-ಜೆಡಿ(ಎಸ್) ಸಮ್ಮಿಶ್ರ ಸರ್ಕಾರದಲ್ಲಿ 2005-07 ಮತ್ತು ಆಗಿನ ಜೆಡಿ ಸರ್ಕಾರದಲ್ಲಿ 1995-2000 ವರೆಗೆ. 1995 ಮತ್ತು 1996 ರಲ್ಲಿ ಹೆಚ್.ಡಿ. ದೇವೇಗೌಡರ ಅಡಿಯಲ್ಲಿ ಎರಡು ಬಾರಿ. 1997, 1998 ಮತ್ತು 1999 ರಲ್ಲಿ ಜೆ.ಹೆಚ್. ಪಟೇಲ್ ಅವರ ಅಡಿಯಲ್ಲಿ ಮೂರು ಬಾರಿ. 2005 ಮತ್ತು 2006 ರಲ್ಲಿ ಎನ್. ಧರಂ ಸಿಂಗ್ ನೇತೃತ್ವದಲ್ಲಿ ಬಜೆಟ್ ಮಂಡಿಸಿದ್ದಾರೆ.

2013ರಲ್ಲಿ ಕಾಂಗ್ರೆಸ್(Congress) ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದಾಗ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದರು. ಆಗ ಹಣಕಾಸು ಖಾತೆಯನ್ನೂ ಹೊಂದಿದ್ದ ಸಿದ್ದರಾಮಯ್ಯ(Siddaramaiah) ಅವರು ಮುಖ್ಯಮಂತ್ರಿಯಾಗಿ ಸತತ 6 ಬಜೆಟ್ ಮಂಡಿಸಿದ್ದಾರೆ. ಇಲ್ಲಿಯವರೆಗೂ ಸಿದ್ದರಾಮಯ್ಯ ಅವರು ಬರೋಬ್ಬರಿ 13 ಬಜೆಟ್‌ಗಳನ್ನು ಮಂಡಿಸಿ ಮಾಜಿ ಮುಖ್ಯಮಂತ್ರಿ ದಿ. ರಾಮಕೃಷ್ಣ ಹೆಗಡೆ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಇದೀಗ 2ನೇ ಬಾರಿಗೆ ಮುಖ್ಯಮಂತ್ರಿಯಾಗಿರುವ ಅವರು 14ನೇ ಬಾರಿ ಬಜೆಟ್ ಮಂಡಿಸಲು ಉತ್ಸುಕರಾಗಿದ್ದಾರೆ.

ಇದನ್ನೂ ಓದಿ:Free current Scheme: ಕಾಂಗ್ರೆಸ್ಸಿನ ಉಚಿತ ವಿದ್ಯುತ್ ಎಫೆಕ್ಟ್, ಎಲ್‌ಪಿಜಿ ಗ್ಯಾಸನ್ನು ಮೂಲೆಗೆ ಹಾಕಿ ಕರೆಂಟ್ ಒಲೆ ಖರೀದಿಸುತ್ತಿರುವ ಜನ!

Leave A Reply

Your email address will not be published.