Nripendra misra: ಮೋದಿಗೂ ಇಷ್ಟವಿರಲಿಲ್ಲ 2000 ರೂ. ನೋಟು: ನೋಟ್ ಬ್ಯಾನ್ ಹಿಂದಿನ ಕುತೂಹಲ ಮಾಹಿತಿ ತೆರೆದಿಟ್ಟ ಪಿಎಂ ಕಾರ್ಯದರ್ಶಿ!

PM Narendra Modi didn't want to introduce rs 2000 currency say Nripendra Misra

Nripendra misra :2000 ರೂ(2000rps) ಮುಖಬೆಲೆಯ ನೋಟುಗಳನ್ನು ಬಿಡುಗಡೆ ಗೊಳಿಸಲು ಸ್ವತಃ ಪ್ರಧಾನಿ ನರೇಂದ್ರ ಮೋದಿಯವರಿಗೇ ಇಷ್ಟವಿರಲಿಲ್ಲ ಎಂದು ಪ್ರಧಾನ ಕಾರ್ಯದರ್ಶಿಯಾಗಿದ್ದ ನೃಪೇಂದ್ರ ಮಿಶ್ರಾ(Nripendra Mishra) ಹೇಳಿದ್ದಾರೆ.

ಹೌದು, 2016ರ ನವೆಂಬರ್‌ 8 ರಂದು 500, 1 ಸಾವಿರ ರೂ. ಮುಖಬೆಲೆಯ ನೋಟುಗಳನ್ನು ನಿಷೇಧಿಸಿದ (Demonetisation) ಬಳಿಕ 2 ಸಾವಿರ ರೂ. (Rs 2,000 Notes) ನೋಟು ಬಿಡುಗಡೆ ಮಾಡಲು ಮೋದಿಯವರಿಗೆ ಇಷ್ಟವಿರಲಿಲ್ಲ. ಆದರೆ ನೋಟು ನಿಷೇಧ ಚರ್ಚೆಯಲ್ಲಿ ಅಧಿಕಾರಿಗಳ ಸಲಹೆಯನ್ನು ಒಪ್ಪಿದ ಬಳಿಕ ಹೊಸ ನೋಟು ಬಿಡುಗಡೆಗೆ ಸಹಮತ ಸೂಚಿಸಿದರು ಎಂದು ಅವರು ತಿಳಿಸಿದ್ದಾರೆ.

ಅಂದಹಾಗೆ ಅಂದು ಅಧಿಕಾರಿಗಳು ಅಪನಗದೀಕರಣದ ಪ್ರಸ್ತಾಪದ ಬಳಿಕ ಹಣದ ತುರ್ತು ಅಗತ್ಯವನ್ನು ಪೂರೈಸಲು 2000 ರು.ಮುಖಬೆಲೆಯ ನೋಟು ಬಿಡುಗಡೆ ಪ್ರಸ್ತಾಪ ಮುಂದಿಟ್ಟಿರು. ಆದರೆ ಪ್ರಧಾನಿ ಮೋದಿಯವರು(MP Modi) ಬಡವರು ಮತ್ತು ಮಧ್ಯಮ ವರ್ಗದ ಜನರು 2000 ರು. ಮುಖಬೆಲೆಯ ನೋಟುಗಳನ್ನು ಬಳಸುವುದಿಲ್ಲ. ಅವರು ಹೆಚ್ಚಾಗಿ 100 ರು. ಮತ್ತು 500 ರು.ನೋಟು ಬಳಸುತ್ತಾರೆ. ಹೀಗಾಗಿ ಬಡವರಿಗೆ ತೊಂದರೆಯಾಗುವ ನೋಟುಗಳ ಬಿಡುಗಡೆಗೆ ತಮ್ಮ ಆಕ್ಷೇಪ ಇದೆ ಎಂದಿದ್ದರು. ಈ ವೇಳೆ ಆಪ್ತರ ತಂಡ ಇದು ತಾತ್ಕಾಲಿಕ ಕ್ರಮ ಅಷ್ಟೇ ಎಂದು ಮನವರಿಕೆ ಮಾಡಿಕೊಟ್ಟಿತು. ಹೀಗಾಗಿ ತಮ್ಮ ತಂಡದ ಸಲಹೆ ಅನ್ವಯ, ತಂಡದ ನಾಯಕನಾಗಿ ಅವರು ಈ ನಿರ್ಧಾರ ಒಪ್ಪಿಕೊಂಡರು ಎಂದು ಮಿಶ್ರಾ ಹೇಳಿದ್ದಾರೆ.

2 ಸಾವಿರ ರು. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂದಕ್ಕೆ ಪಡೆಯುತ್ತಿರುವುದು ಅಪನಗದೀಕರಣ ಅಲ್ಲ ಎಂದು 2016ರ ಅಪನಗದೀಕರಣ ವೇಳೆ ಪ್ರಧಾನಮಂತ್ರಿಗಳ ಪ್ರಧಾನ ಕಾರ್ಯದರ್ಶಿಯಾಗಿದ್ದ ನೃಪೇಂದ್ರ ಮಿಶ್ರಾ (Nripendra misra) ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 2016ರ ನ.8ರಂದು ಅಪನಗದೀಕರಣವಾದಾಗ ಆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿದ್ದ ನೃಪೇಂದ್ರ ಅವರಿಗೆ ಅಪನಗದೀಕರಣ ಯೋಚನೆಯ ಹಿಂದಿನ ಕಾರಣಗಳೂ ಗೊತ್ತು. ಹೀಗಾಗಿ ಅವರ ಅಭಿಪ್ರಾಯ ಮಹತ್ವ ಪಡೆದುಕೊಂಡಿದೆ.

ಮೋದಿಯವರ 70ನೇ ಹುಟ್ಟುಹಬ್ಬದ(PM Modi 70th birthday) ಹಿನ್ನೆಲೆಯಲ್ಲಿ ಪತ್ರಿಕೆಗೆ ಲೇಖನ ಬರೆದಿದ್ದ ನೃಪೇಂದ್ರ ಮಿಶ್ರಾ ಅಪನಗದೀಕರಣ ಕುರಿತು ಲೇಖನ ಬರೆದಿದ್ದರು. ಈ ವೇಳೆ ಇದರ ಹಿಂದಿನ ಕಾರಣಗಳನ್ನು ತಿಳಿಸಿದ್ದರು. ಅಲ್ಲದೆ ಈ ವಿಚಾರದ ಬಗ್ಗೆ ಭಾರೀ ಟೀಕೆ ಕೇಳಿ ಬಂದಿದ್ದರೂ ಮೋದಿಯವರು ಅಧಿಕಾರಿಗಳನ್ನು ದೂಷಿಸದೇ ಸ್ವತಃ ತಾವೇ ಹೊಣೆಯನ್ನು ಹೊತ್ತುಕೊಂಡಿದ್ದರು. ಕೆಲವು ವಿಚಾರಗಳ ಬಗ್ಗೆ ಸಮ್ಮತಿ ಇರದಿದ್ದರೂ ಜೊತೆಗಾರರು ನೀಡಿದ ಸಲಹೆಯನ್ನು ಒಪ್ಪಿಕೊಳ್ಳುವ ಗುಣ ಮೋದಿಯವರಲ್ಲಿದೆ ಎಂದು ತಿಳಿಸಿದ್ದರು.

ಇನ್ನು 2,000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಂಡ ಕೇಂದ್ರ ಸರ್ಕಾರದ ನಿರ್ಧಾರದ ಬೆನ್ನಲ್ಲೇ ಶನಿವಾರ ವಿಪಕ್ಷಗಳು(Opposition party) ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ. ‘ಎರಡನೇ ನೋಟು ಅಮಾನ್ಯೀಕರಣವು ಮೊದಲಿನ ತಪ್ಪು ನಿರ್ಧಾರವನ್ನು ಮುಚ್ಚುವ ಪ್ರಯತ್ನವೇ? ಇದರಿಂದ ದೇಶದ ಆರ್ಥಿಕತೆಗೆ ನಷ್ಟವಾಗಿದ್ದು ಈ ಬಗ್ಗೆ ತನಿಖೆ ನಡೆಯಬೇಕು’ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಆಗ್ರಹಿಸಿದ್ದಾರೆ.

ಇದನ್ನೂ ಓದಿ:Nayana motamma: ಮೂಡಿಗೆರೆ ಶಾಸಕಿ ನಯನಾ ಮೋಟಮ್ಮರ ಖಾಸಗಿ ಫೋಟೋಸ್, ವಿಡಿಯೋ ವೈರಲ್! ಏನಂದ್ರು ಗೊತ್ತಾ ನೂತನ ಶಾಸಕಿ!

Leave A Reply

Your email address will not be published.