Kodimata Shree: ನೂತನ ಕಾಂಗ್ರೆಸ್ ಸರ್ಕಾರದ ಬಗ್ಗೆ ಅಚ್ಚರಿಯ ಭವಿಷ್ಯ ನುಡಿದ ಕೋಡಿಮಠ ಶ್ರೀ!! ಏನಾಗಲಿದೆ ಗೊತ್ತಾ ಸರ್ಕಾರದ ಭವಿಷ್ಯ?
Kodi mutt seer prediction: ಕೋಡಿಮಠದ ಶ್ರೀಗಳು(Kodimata Shree) ನುಡಿಯುವ ಭವಿಷ್ಯವಾಣಿಗಳಲ್ಲಿ (Kodi mutt seer prediction) ಬಹುತೇಕ ನಿಜವಾಗಿವೆ. ಹಾಗಾಗಿ, ಅವರ ಭವಿಷ್ಯ ವಾಣಿಗಳಿಗೆ ತುಂಬಾ ಪ್ರಾಮುಖ್ಯವಿದೆ. ಅಂದಹಾಗೆ 2023ರ ಕರ್ನಾಟಕ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ(Karnataka Assembly election) 135 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಭರ್ಜರಿ ಬಹುಮತದೊಂದಿಗೆ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಾಗಿದ್ದು, ಇದೀಗ ಕಾಂಗ್ರೆಸ್(Congress) ಸರ್ಕಾರದ ಬಗ್ಗೆ ಕೋಡಿಮಠದ ಶ್ರೀ ಮಹತ್ವದ ಭವಿಷ್ಯ ನುಡಿದಿದ್ದಾರೆ.
ಇತ್ತೀಚೆಗೆ ಕರ್ನಾಟಕ ವಿಧಾನಸಭೆಯ ಚುನಾವಣೆ ಮುಂಚಿತವಾಗಿ, ಚುನಾವಣಾ ಭವಿಷ್ಯ ನುಡಿದಿದ್ದ ಶ್ರೀಗಳು, ಚುನಾವಣೆಯಲ್ಲಿ ಈ ಬಾರಿ ಒಂದು ಪಕ್ಷಕ್ಕೆ ಸ್ಪಷ್ಟವಾದ ಬಹುಮತ ಸಿಗಲಿದೆ. ಮತದಾರರು ಒಂದು ಪಕ್ಷಕ್ಕೆ ಸ್ಪಷ್ಟವಾದ ಅಧಿಕಾರ ಕೊಡುತ್ತಾರೆ. ಈ ಬಾರಿ ಸಮ್ಮಿಶ್ರ ಸರ್ಕಾರವಾಗುವುದಿಲ್ಲ(Coalition Government) ಎಂದು ಹೇಳಿದ್ದರು. ಅಂತೆಯೇ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದು ಅದಿಕಾರದ ಗದ್ದಿಗೆಯೇರಿದೆ. ಈ ಬೆನ್ನಲ್ಲೇ ಮತ್ತೆ ಕೋಡಿಮಠದ ಶ್ರೀಗಳು ಕಾಂಗ್ರೆಸ್ ಸರ್ಕಾರದ ಬಗ್ಗೆ ಮಹತ್ವದ ಭವಿಷ್ಯ ನುಡಿದಿದ್ದಾರೆ.
ಹೌದು, ರಾಜ್ಯದ ಕಾಂಗ್ರೆಸ್ ಸರ್ಕಾರದ ಕುರಿತು ಭವಿಷ್ಯ ನುಡಿದಿರುವ ಅರಸೀಕೆರೆಯ(Arsikere) ಹಾರನಹಳ್ಳಿ(Haranahalli) ಕೋಡಿಮಠದ(Kodi mautt) ಪೀಠಾಧಿಪತಿ ಡಾ. ಸದಾಶಿವ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳು “ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(DK Shivkumar) ನೇತೃತ್ವದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರವು ಜನತೆಯ ಭಾವನೆಗಳಿಗೆ ಪೂರಕವಾಗಿ ಸ್ಪಂದಿಸಿ ಕೆಲಸ ಮಾಡುವ ಮೂಲಕ ಜನಾದೇಶದ ತೀರ್ಪಿಗೆ ಅನುಗುಣವಾಗಿ 5 ವರ್ಷಗಳನ್ನು ಪೂರ್ಣಗೊಳಿಸಲಿದೆ” ಎಂದು ಹೇಳಿದ್ದಾರೆ.
ಇದರೊಂದಿಗೆ ಸದ್ಯಕ್ಕೆ ರಾಜ್ಯ ಸರ್ಕಾರಕ್ಕೆ ಯಾವುದೇ ಕಂಟಕವಿಲ್ಲ. ಲೋಕಸಭಾ ಚುನಾವಣೆಯ(Parliament Election) ನಂತರ ಸಣ್ಣ ಕಂಟಕ ಉಂಟಾಗಲಿದೆ. ಅದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ. ಅಲ್ಲದೆ ಅರಸೀಕರೆಗೆ ಪ್ರಚಾರಕ್ಕೆ ಆಗಮಿಸಿದ್ದ ಸಿದ್ಧರಾಮಯ್ಯ ಅವರಿಗೆ ಮತ್ತೊಮ್ಮೆ ನಿಮಗೆ ಮುಖ್ಯಮಂತ್ರಿಯಾಗುವ ಯೋಗವಿದೆ ಎಂದು ಹೇಳಿದ್ದೆ. ಅದು ನಿಜವಾಗಿದೆಯಲ್ಲದೇ, ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಯಾರದೇ ಹಂಗಿಲ್ಲದೇ, ಸ್ವತಂತ್ರವಾಗಿ ಅಧಿಕಾರ ಹಿಡಿಯಲಿದೆ ಎಂದು ಭವಿಷ್ಯ ನುಡಿದಿದ್ದೆ” ಎಂದು ಕೋಡಿಮಠ ಶ್ರೀಗಳು ತಿಳಿಸಿದರು.
ಡಿಕೆಶಿಗೆ ಸಿಎಂ ಯೋಗ!
ಇನ್ನು ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್(D K Shivkumar) ಅವರಿಗೂ ಕೂಡ ಮುಖ್ಯಮಂತ್ರಿಯಾಗುವ ಯೋಗವಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆಯಲು ಡಿ.ಕೆ. ಶಿವಕುಮಾರ್ ಕೊಡುಗೆಯೂ ಅಪಾರವಾಗಿದೆ. ಮಂತ್ರಿ ಮಂಡಲ ವಿಸ್ತರಣೆಯಲ್ಲಿ ಗುಂಪುಗಾರಿಕೆಗೆ ಅವಕಾಶ ಮಾಡಿಕೊಡದೇ ಪ್ರಾದೇಶಿಕವಾರು, ಜಿಲ್ಲಾವಾರು ಸೂಕ್ತ ಪ್ರಾತಿನಿಧ್ಯ ನೀಡಿ ಸಂಪುಟ ವಿಸ್ತರಣೆ ಮಾಡಬೇಕು ಎಂದು ಕೋಡಿಮಠ ಶ್ರೀ ಸಲಹೆ ನೀಡಿದರು.
ಇದನ್ನೂ ಓದಿ: U R Sabhapati: ಕಾಂಗ್ರೆಸ್ ನಾಯಕ, ಮಾಜಿ ಶಾಸಕ ಯು.ಆರ್.ಸಭಾಪತಿ ಇನ್ನಿಲ್ಲ!!