Home Karnataka State Politics Updates UT Khader: ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಯು.ಟಿ.ಖಾದರ್ ಹೆಸರು ಅಂತಿಮ

UT Khader: ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಯು.ಟಿ.ಖಾದರ್ ಹೆಸರು ಅಂತಿಮ

UT Khader

Hindu neighbor gifts plot of land

Hindu neighbour gifts land to Muslim journalist

UT Khader: ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಹುದ್ದೆಗೆ ಮಾಜಿ ಸಚಿವ,ಮಂಗಳೂರು ಶಾಸಕ ಯು ಟಿ ಖಾದರ್ (UT Khader) ಅವರನ್ನು ಕಾಂಗ್ರೆಸ್ ಅಂತಿಮಗೊಳಿಸಿದೆ ಎಂದು ತಿಳಿದು ಬಂದಿದೆ.

ಸ್ಪೀಕರ್ ಸ್ಥಾನಕ್ಕೆ ಆರ್ ವಿ ದೇಶಪಾಂಡೆ, ಟಿ ಬಿ ಜಯಚಂದ್ರ ಹಾಗು ಎಚ್ ಕೆ ಪಾಟೀಲ್ ಅವರ ಹೆಸರು ಕೇಳಿಬರುತ್ತಿತ್ತು. ಆದರೆ ಇದೀಗ ಕೊನೆ ಗಳಿಗೆಯಲ್ಲಿ ಯು.ಟಿ. ಖಾದರ್ ಅವರನ್ನು ವಿಧಾನ ಸಭೆಯ ಸ್ಪೀಕರ್ ಹುದ್ದೆಗೆ ಕಾಂಗ್ರೆಸ್ ಆಯ್ಕೆ ಮಾಡಿದೆ ಎಂದು ತಿಳಿದು ಬಂದಿದೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ರಾಷ್ಟ್ರೀಯ ಪ್ರಧಾನ್ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಖಾದರ್ ಅವರಲ್ಲಿ ಈ ಪ್ರಸ್ತಾವ ಇಟ್ಟಿದ್ದು,ಖಾದರ್ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರೊಂದಿಗೆ ಕೂಡ ಯು.ಟಿ.ಖಾದರ್ ಮಾತುಕತೆ ನಡೆಸಿದ್ದಾರೆ.

ಇದನ್ನೂ ಓದಿ: ಮತದಾರರಿಗೆ ಹಣ ಹಂಚದ್ದೇ ಸೋಲಿಗೆ ಕಾರಣ, ಹಣ ವಾಪಸ್‌ ಕೊಡಿ : ಮಾಜಿ ಸಚಿವ ಕೆಸಿ ನಾರಾಯಣಗೌಡ ಕಿಡಿ