Textbook Controversy: ಸರ್ಕಾರ ರಚನೆ ಬೆನ್ನಲ್ಲೇ ಮತ್ತೆ ಶುರುವಾಯ್ತು ಪಠ್ಯ ಪರಿಷ್ಕರಣೆ ವಾರ್; ಶಾಲಾ ಆರಂಭಕ್ಕೂ ಮುನ್ನವೇ ಹೆಡ್ಗೆವಾರ್ ಪಾಠಕ್ಕೆ ಕತ್ತರಿ?

Textbook controversy Education experts request CM to remove text added by bjp

Textbook Controversy: 2023-24 ನೇ ಶೈಕ್ಷಣಿಕ ವರ್ಷ ಪ್ರಾರಂಭಕ್ಕೆ ಇನ್ನೂ ಕೇಲವೇ ದಿನ ಬಾಕಿ ಉಳಿದಿದೆ. ಇದರ ಮಧ್ಯೆ ಈಗ ಪಠ್ಯ ಪರಿಷ್ಕರಣೆ ದಂಗಲ್ ಶುರುವಾಗುವ ಎಲ್ಲಾ ಲಕ್ಷಣಗಳು ಗೋಚರವಾಗುತ್ತಿವೆ.

ಹೌದು, ಶಾಲೆ ಆರಂಭಕ್ಕೂ ಮುನ್ನವೇ ಪಠ್ಯ ಪರಿಷ್ಕರಣೆಯ(Text Book Revision) ದಂಗಲ್ ಮತ್ತೆ ಶುರುವಾಗಿದೆ. ಈ ಹಿಂದೆ ಇದ್ದ ಬಿಜೆಪಿ ಸರ್ಕಾರ, ರೋಹಿತ್‌ ಚಕ್ರತೀರ್ಥ(Rohit Chakrathirtha) ನೇತೃತ್ವದಲ್ಲಿ ಪಠ್ಯ ಪರಿಶೀಲನೆಗೆ ರಚಿಸಿದ್ದ ಸಮಿತಿ ಮೂಲಕ ಪಠ್ಯವನ್ನು ಪುನರ್‌ ಪರಿಷ್ಕರಿಸಿತು. ಆಗ ಟಿಪ್ಪು ಸುಲ್ತಾನ್(Tippu sulthan) ಸೇರಿದಂತೆ ಕೆಲವರ ಬಗೆಗಿನ ಪಾಠ ಕೈಬಿಡಲಾಗಿದೆ ಎಂಬ ಆರೋಪಗಳು, ಬಿಸಿ ಬಿಸಿ ಚರ್ಚೆಗಳು ನಡೆದಿದ್ದವು. ಸದ್ಯ ಈಗ ಮತ್ತೆ ಪಠ್ಯ ಪರಿಷ್ಕರಣೆ (Textbook Controversy) ಮಾಡಲಾಗುತ್ತೆ ಎಂಬ ಚರ್ಚೆಗಳು ನಡೆಯುತ್ತಿವೆ.

ಬಿಜೆಪಿ(BJP) ಸರ್ಕಾರದ ಅವಧಿಯಲ್ಲಿ ಮಾಡಿದ್ದ ಶೇ.95 ರಷ್ಟು ಪಠ್ಯ ಪರಿಷ್ಕರಣೆಯನ್ನು ಇದೀಗ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ರದ್ದು ಮಾಡತ್ತಾ ಅನ್ನೋ ಪ್ರಶ್ನೆ ಈಗ ಎಲ್ಲರಲ್ಲೂ ಕಾಡುತ್ತಿದೆ. ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಸರ್ಕಾರ(Congress Government)ಅಧಿಕಾರಕ್ಕೆ ಬಂದ್ರೆ ಪಠ್ಯ ಪರಿಷ್ಕರಣೆ ಮಾಡುವುದಾಗಿ ಘೋಷಣೆ ಮಾಡಿತ್ತು. ಅಲ್ಲದೆ ತನ್ನ ಪ್ರಣಾಳಿಕೆಯಲ್ಲೂ ಕೂಡ ಪಠ್ಯ ಪರಿಷ್ಕರಣೆ ಮಾಡುವುದಾಗಿ ಹೇಳಿದೆ. ಹೀಗಾಗಿ ಶಿಕ್ಷಕರಿಗೆ ಗೊಂದಲ ಶುರುವಾಗಿದೆ. 1ನೇ ತರಗತಿಯಿಂದ ರಿಂದ 10 ನೇ ತರಗತಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ(primary and high school) ಪಠ್ಯ ಪರಿಷ್ಕರಣೆ ಮಾಡಿ ಶಿಕ್ಷಣ ಇಲಾಖೆ ಈಗಾಗಲೇ ಪಠ್ಯಪುಸ್ತಕ ‌ಮುದ್ರಣ ‌ಮಾಡಲಾಗಿದೆ ಅನ್ನೋ‌ ಮಾಹಿತಿ ಶಿಕ್ಷಣ ಇಲಾಖೆ ಮೂಲಗಳಿಂದ ಧೃಡಪಟ್ಟಿದೆ.

ಅಂದಹಾಗೆ ಪಠ್ಯಪುಸ್ತಕದಿಂದ RSS ಸಂಸ್ಥಾಪಕ ಹೆಡ್ಗೆವಾರ್(Hedgewar) ಭಾಷಣಕ್ಕೆ ಕತ್ತರಿ ಹಾಕುವಂತೆ ಹಾಗೂ ಚಕ್ರವರ್ತಿ ಸೂಲಿಬೆಲೆ(Chakravarti sulibele) ಪಾಠವನ್ನ ತಗೆದು ಹಾಕುವಂತೆ ಒತ್ತಾಯ ಕೇಳಿಬರುತ್ತಿದೆಯಂತೆ. 10ನೇ ತರಗತಿಯ ಕನ್ನಡ ವಿಷಯದಲ್ಲಿ ಆದರ್ಶ ಪುರಷ ಯಾರಗಬೇಕು ಎನ್ನೋ ಶಿರ್ಷಿಕೆಯಡಿ ಕೆ.ಬಿ. ಹೆಡ್ಗೆವಾರ್ ಪಾಠವನ್ನು ಈ ಹಿಂದೆ ರೋಹಿತ್ ಚಕ್ರತೀರ್ಥ ಸಮಿತಿಯಡಿ ಮಾಜಿ ಶಿಕ್ಷಣ ಸಚಿವ ಬಿಸಿ ನಾಗೇಶ್ ಸೇರ್ಪಡೆ ಮಾಡಿದ್ದರು. ಅದ್ರೆ ಈಗ ಇದನ್ನು ತೆಗೆದುಹಾಕಲು ಒತ್ತಡ ಹಾಕಲಾಗುತ್ತಿದೆ ಎನ್ನಲಾಗುತ್ತಿದೆ.

ಬಿಜೆಪಿ ಸರಕಾರದ ಶಿಕ್ಷಣ ನೀತಿ ಬದಲಾವಣೆಗೂ ಒತ್ತಾಯ: ಇವೆಲ್ಲದರ ನಡುವೆ ರಾಜ್ಯದಲ್ಲಿ ಕೇಂದ್ರದ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ಯನ್ನು (ಎನ್‌ಇಪಿ) ಸಾರಾಸಗಟಾಗಿ ತಿರಸ್ಕರಿಸಬೇಕು, ಶಾಲಾ ಪಠ್ಯ ಪರಿಷ್ಕರಣೆ ಸೇರಿದಂತೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಾದ ಬದಲಾವಣೆಗಳನ್ನು ಕೈಬಿಟ್ಟು ಸಂವಿಧಾನದ ಆಶಯದಂತೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆ ಜಾರಿಗೆ ‘ರಾಜ್ಯ ಶಿಕ್ಷಣ ನೀತಿ’ ರೂಪಿಸಿ ಜಾರಿಗೊಳಿಸಬೇಕೆಂದು ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಗಳ ಸಮನ್ವಯ ವೇದಿಕೆ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದೆ.

ಪಠ್ಯ ಪರಿಷ್ಕರಣೆ ವಿಚಾರವಾಗಿ ಈಗಾಗಲೇ ಸರ್ಕಾರಕ್ಕೆ ಖಾಸಗಿ ಶಾಲಾ ಒಕ್ಕೂಟ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ(Lokesh talikatte) ಪಠ್ಯ ಮರು ಪರಿಷ್ಕರಣೆ ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಅಲ್ಲದೆ ಶಿಕ್ಷಣ ತಜ್ಞ ವಿ.ಪಿ.ನಿರಂಜನರಾಧ್ಯ(V P Niranjanaradhya) ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು, ಹಿಂದಿನ ಬಿಜೆಪಿ ಸರ್ಕಾರ ರಾಜಕೀಯಕ್ಕಾಗಿ ಶಿಕ್ಷಣ ಕ್ಷೇತ್ರವನ್ನು ಬಳಸಿಕೊಂಡಿದೆ. ಹಾಗಾಗಿ ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿ ರೂಪಿಸಿ ಜಾರಿಗೊಳಿಸುವವರೆಗೆ ಬಿಜೆಪಿ ಸರ್ಕಾರದಲ್ಲಿ ಆಗಿದ್ದ ಪಠ್ಯಪರಿಷ್ಕರಣೆ ಕೈಬಿಟ್ಟು 2017-18ರಲ್ಲಿ ಜಾರಿಯಲ್ಲಿದ್ದ ಪಠ್ಯಕ್ರಮ, ಪಠ್ಯವಸ್ತು ಮತ್ತು ಪಠ್ಯಪುಸ್ತಕಗಳನ್ನೇ ಮುಂದುವರೆಸಬೇಕು. ಹಿಂದಿನ ಪಠ್ಯಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್‌ ಚಕ್ರತೀರ್ಥ ಮತ್ತು ಸದಸ್ಯರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ:Fishing Ban: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 1ರಿಂದ ಮೀನುಗಾರಿಕೆ ನಿಷೇಧ!

Leave A Reply

Your email address will not be published.