BPL Card: BPL ಕಾರ್ಡ್ ಗೆ ಹೆಚ್ಚಿತು ಭರ್ಜರಿ ಬೇಡಿಕೆ! ಕಾಂಗ್ರೆಸ್ ಗ್ಯಾರಂಟಿ ಯೋಜನೆಗೆ ಸರ್ಕಸ್ ಶುರು!
In Bengaluru BPL card have full demand
BPL Card: ಕಾಂಗ್ರೆಸ್ ಪಕ್ಷವು ಚುನಾವಣೆ ಪೂರ್ವ ಘೋಷಣೆ ಮಾಡಿದ ಗ್ಯಾರಂಟಿ ಯೋಜನೆಗಳ ಹಿನ್ನೆಲೆ ಬಿಪಿಎಲ್ ಕಾರ್ಡ್ಗಳಿಗೆ ಬೇಡಿಕೆ ಹೆಚ್ಚಿದೆ. ಅದಲ್ಲದೆ ಬಿಪಿಎಲ್ ಕಾರ್ಡ್ (BPL Card) ಪಡೆಯಲು ಜನ ಸಾಲು ಸಾಲು ಜನ ಧಾವಿಸುತ್ತಿದ್ದಾರೆ.
ಹೌದು, ರಾಜ್ಯ ಸರ್ಕಾರ ನೀಡಿದ ಐದು ಗ್ಯಾರಂಟಿಗಳನ್ನು ಮೊದಲ ದಿನವೇ ಪೂರೈಸುವ ಘೋಷಣೆ ಮಾಡಿದ್ದರಿಂದ ತಮಗೆ ಉಚಿತ ವಿದ್ಯುತ್, ಗೃಹಲಕ್ಷ್ಮಿ, ಮಹಿಳೆಯರಿಗೆ ಉಚಿತ ಬಸ್ ಪಾಸ್, 10 ಕೆಜಿ ಅಕ್ಕಿ ಸಿಗುವ ನಿರೀಕ್ಷೆಯಲ್ಲಿ ಜನರಿದ್ದಾರೆ. ಹೀಗಾಗಿ ಈ ಯೋಜನೆಗೆ ಅಗತ್ಯವಾಗಿ ಬೇಕಾದ ಬಿಪಿಎಲ್ ಕಾರ್ಡ್ ಬೇಡಿಕೆ ಹೆಚ್ಚಾಗಿದ್ದು, ಆಹಾರ ಇಲಾಖೆ ಕಚೇರಿಗೆ ಜನ ಮುಗಿಬೀಳುತಿದ್ದಾರೆ ಅಲ್ಲದೆ, ಪ್ರತಿ ನಿತ್ಯ 8ರಿಂದ 10 ಜನರು ಹೊಸದಾಗಿ ಬಿಪಿಎಲ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸುತ್ತಿದ್ದಾರೆ.
ರಾಜ್ಯದಲ್ಲಿ ಮೇ 14 ರಿಂದ 20ರ ನಡುವಿನ ಅವಧಿಯಲ್ಲಿ ಹೊಸ ಬಿಪಿಎಲ್ ಕಾರ್ಡ್ಗಾಗಿ ಬರೋಬ್ಬರಿ 78 ಸಾವಿರ ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ, ತುರ್ತು ಆರೋಗ್ಯ ಚಿಕಿತ್ಸೆಗಾಗಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಮಾತ್ರ ಮೇ 18ರಿಂದ ವಿಲೇವಾರಿ ಮಾಡಿ ವಿತರಣೆ ಮಾಡಲಾಗುತ್ತಿದೆ. ಇನ್ನುಳಿದ ಹೊಸ ಅರ್ಜಿಗಳ ವಿಲೇವಾರಿ ಸ್ಥಗಿತಗೊಳಿಸಿದೆ. ಹೊಸ ಸರ್ಕಾರದ ಆದೇಶದ ಬಳಿಕ ಮುಂದಿನ ಅರ್ಜಿಗಳ ವಿಲೇವಾರಿ ಪ್ರಕ್ರಿಯೇ ಆರಂಭವಾಗಲಿದೆ.
2023 ಜನವರಿಗೆ ರಾಜ್ಯದಲ್ಲಿ ಬಿಪಿಎಲ್, ಅಂತ್ಯೋದಯ, ಎಪಿಎಲ್ ಸೇರಿ ಸುಮಾರು 5.28 ಕೋಟಿ ಜನರು ರೇಷನ್ ಕಾರ್ಡ್ ಫಲಾನುಭವಿಗಳಿದ್ದು, ಇವರಲ್ಲಿ ಸುಮಾರು 4.50ಲಕ್ಷಕ್ಕೂ ಅಧಿಕ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲಾಗಿದೆ. ಜತೆಗೆ ಹೊಸ ಬಿಪಿಎಲ್ ಕಾರ್ಡ್ಗಾಗಿ ಸುಮಾರು 4.25 ಲಕ್ಷ ಜನರು ಅರ್ಜಿ ಸಲ್ಲಿಸಿದ್ದಾರೆ. ಇವರಲ್ಲಿ ಕೆಲ ಅನರ್ಹಗೊಂಡಿರುವ ಕಾರ್ಡ್ದಾರರು ಮತ್ತೆ ಅರ್ಜಿ ಸಲ್ಲಿಸಿದ್ದಾರೆ.
ಈ ಮೇಲಿನ ಹಿನ್ನೆಲೆಯಲ್ಲಿ ಎಲ್ಲ ಹೊಸ ಬಿಪಿಎಲ್ ಅರ್ಜಿಗಳನ್ನು ಮರು ಪರಿಶೀಲನೆ ನಡೆಸಲಾಗುತ್ತಿದೆ. ಸದ್ಯ ಹೊಸದಾಗಿ ಬಿಪಿಎಲ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಸಮಸ್ಯೆ ಇಲ್ಲ. ಆದರೆ, ಆದರೆ ಎರಡು ತಿಂಗಳಿಂದ ಸರ್ವರ್, ದಾಖಲೆಗಳ ಸಮಸ್ಯೆ, ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಹೊಸ ಅರ್ಜಿಗಳ ವಿಲೇವಾರಿ, ಹೊಸ ಕಾರ್ಡ್ ವಿತರಣೆ ಕಾರ್ಯ ಸ್ಥಗಿತಗೊಂಡಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದಾಗಿ ಅರ್ಜಿ ಸಲ್ಲಿಸಿರುವ ಜನರು ಕಾರ್ಡ್ಗಳಿಗಾಗಿ ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ.
ಇದನ್ನೂ ಓದಿ: Food Oil Price: ಖಾದ್ಯ ತೈಲ ಬೆಲೆಯಲ್ಲಿ ಇಳಿಕೆ! ಆಮದು ಪ್ರಮಾಣ ಗಣನೀಯ ಏರಿಕೆ!