Education: ಶಿಕ್ಷಣ ಇಲಾಖೆಯಿಂದ ಮಹತ್ವ ಮಾಹಿತಿ : ರಾಜ್ಯದ ಎಲ್ಲಾ ವಿವಿ, ಕಾಲೇಜುಗಳಲ್ಲಿ ಪದವಿ ಪ್ರವೇಶಕ್ಕೆ ಏಕರೂಪ ಶೈಕ್ಷಣಿಕ ವೇಳಾಪಟ್ಟಿ!

Important information from the Education Department

Education: ರಾಜ್ಯದ ಎಲ್ಲಾ ವಿವಿಗಳು ಮತ್ತು ಪದವಿ ಕಾಲೇಜುಗಳಿಗೆ ಉನ್ನತ ಶಿಕ್ಷಣ (Education) ಇಲಾಖೆಯಿಂದ ಮಹತ್ವದ ಮಾಹಿತಿ ಒಂದನ್ನು ತಿಳಿಸಲಾಗಿದೆ. ಹೌದು, ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ವಿಶ್ವವಿದ್ಯಾಲಯಗಳು ಮತ್ತು ಅವುಗಳ ಸಂಯೋಜಿತ ಕಾಲೇಜುಗಳಲ್ಲಿ 2023 -24ನೇ ಸಾಲಿನ ಪದವಿ ಕೋರ್ಸ್ ಗಳಿಗೆ ಪ್ರವೇಶ ಪ್ರಕ್ರಿಯೆ, ಪರೀಕ್ಷೆ ಮತ್ತು ಫಲಿತಾಂಶ ಪ್ರಕಟಣೆಗೆ ಒಂದೇ ರೀತಿಯ ವೇಳಾಪಟ್ಟಿಯನ್ನು ಉನ್ನತ ಶಿಕ್ಷಣ ಇಲಾಖೆ ಪ್ರಕಟಿಸಿದೆ.

2023 -24ನೇ ಶೈಕ್ಷಣಿಕ ಸಾಲಿನಲ್ಲಿ ಮೇ 22 ರಿಂದ ಜುಲೈ 15 ರ ಒಳಗೆ ಪ್ರಥಮ ಸೆಮಿಸ್ಟರ್ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಜುಲೈ 17 ರಿಂದ ತರಗತಿಗಳನ್ನು ಆರಂಭಿಸಿ ನವೆಂಬರ್ 18ಕ್ಕೆ ಮುಕ್ತಾಯಗೊಳಿಸಬೇಕು. ನವೆಂಬರ್ 20 ರಿಂದ ಪರೀಕ್ಷೆ ಆರಂಭಿಸಿ 2024 ರ ಜನವರಿ 15ರೊಳಗೆ ಪರೀಕ್ಷೆ ಮೌಲ್ಯಮಾಪನ ಮುಗಿಸಿ ಫಲಿತಾಂಶ ಪ್ರಕಟಿಸಬೇಕು ಎಂದು ತಿಳಿಸಲಾಗಿದೆ.

ಜನವರಿ 16 ರಿಂದ ಎರಡನೇ ಸೆಮಿಸ್ಟರ್ ತರಗತಿಗಳನ್ನು ಆರಂಭಿಸಿ ಮೇ 15ಕ್ಕೆ ಮುಕ್ತಾಯಗೊಳಿಸಬೇಕು. ಮೇ 13 ರಿಂದ ಎರಡನೇ ಸೆಮಿಸ್ಟರ್ ಪರೀಕ್ಷೆ ನಡೆಸಿ ಜೂನ್ 29ರ ಒಳಗೆ ಫಲಿತಾಂಶ ಪ್ರಕಟಿಸಬೇಕು ಎಂದು ಉನ್ನತ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಮುಖ್ಯವಾಗಿ ರಾಜ್ಯದ ಎಲ್ಲಾ ವಿವಿಗಳು, ಪದವಿ ಕಾಲೇಜುಗಳಿಗೆ ಈ ವೇಳಾಪಟ್ಟಿ ಅನ್ವಯವಾಗುತ್ತದೆ. ಇಂಜಿನಿಯರಿಂಗ್, ಡಿಪ್ಲೋಮೋ ಇತರೆ ತಾಂತ್ರಿಕ ಶಿಕ್ಷಣ ಕೋರ್ಸ್ ಗಳಿಗೆ ಅನ್ವಯವಾಗುವುದಿಲ್ಲ ಎಂದು ತಿಳಿಸಲಾಗಿದೆ.

 

 

 

 

Leave A Reply

Your email address will not be published.