ಸಿದ್ದು ವಿರುದ್ಧ ಅಶ್ವತ್ಥ ನಾರಾಯಣ ವಿವಾದಾತ್ಮಕ ಹೇಳಿಕೆ ವಿಚಾರ : ಕೇಸ್‌ ಮೈಸೂರಿನಿಂದ ಮಂಡ್ಯಕ್ಕೆ ವರ್ಗಾವಣೆ

Ashwath Narayan controversy statement on CM Siddaramaiah issue

Ashwath Narayan- Siddaramaiah: ಮಂಡ್ಯ :ಸಿಎಂ ಸಿದ್ದರಾಮಯ್ಯ ಕುರಿತು ಹೇಳಿಕೆ ನೀಡಿದಕ್ಕೆ ಮಾಜಿ ಸಚಿವ ಸಿಎನ್ ಅಶ್ವತ್ಥ ನಾರಾಯಣ (Ashwath Narayan- Siddaramaiah) ವಿರುದ್ಧ ಮೈಸೂರಿನಲ್ಲಿ ದಾಖಲಾಗಿದ್ದ ಪ್ರಕರಣ ಮಂಡ್ಯ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

 

ಮಂಡ್ಯದ ಸಾತನೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಟೀಕಿಸುವ ಭರದಲ್ಲಿ ಟಿಪ್ಪು ಮುಗಿಸಿದಂತೆ ಸಿದ್ದರಾಮಯ್ಯ ಅವರನ್ನೂ ಮುಗಿಸಬೇಕು ಎಂದು ಮಾಜಿ ಸಚಿವ ಸಿಎನ್ ಅಶ್ವತ್ಥ ನಾರಾಯಣ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ವಿಚಾರವಾಗಿ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಕೇಸ್‌ ದಾಖಲಿಸಿದ್ದರು ಇದೀಗ ಮಂಡ್ಯ ಠಾಣೆಗೆ ವರ್ಗಾವಣೆ ಮಾಡಲಾಗಿದೆ ಎಂದು ವರದಿಯಾಗಿದೆ.

ಸಿದ್ದರಾಮಯ್ಯ ಅವರ ವಿರುದ್ಧ ಮಾಜಿ ಸಚಿವ ಸಿಎನ್ ಅಶ್ವತ್ಥ ನಾರಾಯಣ ಹೇಳಿಕೆ ನೀಡಿದ ವಿಚಾರವಾಗಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೇ ಕ್ಷಮೆಯಾಚಿಸಿದ್ದಾರೆ. ಇದೀಗ ಕರ್ನಾಟಕ ವಿಧಾನ ಸಭೆ ಚುನಾವಣೆಯಲ್ಲಿ ಭಾರೀ ಬಹುಮತದೊಂದಿಗೆ ಕಾಂಗ್ರೆಸ್‌ ಗೆಲುವ ಸಾಧಿಸಿದ ಬೆನ್ನಲ್ಲೆ ಕಳೆದ ಹೋದ ಘಟನೆಯನ್ನು ಮತ್ತೆ ಅಣಕಿಸಿ ಕೆದಕಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ಕಡಬ : ಶಾಂತಿಮೊಗರು ಸೇತುವೆಯಿಂದ ಕುಮಾರಧಾರ ನದಿಗೆ ಹಾರಿದ ವ್ಯಕ್ತಿ

Leave A Reply

Your email address will not be published.