Home latest BPL ಪಡಿತರ ಚೀಟಿ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್, ಜೂನ್ 1 ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ

BPL ಪಡಿತರ ಚೀಟಿ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್, ಜೂನ್ 1 ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ

Hindu neighbor gifts plot of land

Hindu neighbour gifts land to Muslim journalist

BPL Card:  ಬಿಪಿಎಲ್ ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಲು ಜೂನ್ 1 ರಿಂದ ಅವಕಾಶ ಕಲ್ಪಿಸಲು ಆಹಾರ ಇಲಾಖೆ ತೀರ್ಮಾನಿಸಿದೆ ಎನ್ನುವ ಮಾಹಿತಿ ಪತ್ರಿಕೆ ಒಂದರಲ್ಲಿ ವರದಿಯಾಗಿದೆ.

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಿಮಿತ್ತ ನೀತಿ ಸಂಹಿತೆ ಜಾರಿಯಾದ ಕಾರಣದಿಂದ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಕೆ ಮತ್ತು ಪಡಿತರ ಚೀಟಿ ವಿತರಣೆ ಕಾರ್ಯ ಸ್ಥಗಿತಗೊಂಡಿತ್ತು. ಹಾಗಾಗಿ ವೆಬ್ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಕೆ ವಿಭಾಗ ಲಾಕ್ ಮಾಡಲಾಗಿತ್ತು.

ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿದ 5 ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ಫಲಾನುಭವಿಗಳನ್ನು ಗುರುತಿಸಲು ಬಿಪಿಎಲ್ ಪಡಿತರ ಚೀಟಿ ಅಗತ್ಯ ಮಾನದಂಡವಾಗಿ ಆಗಬಹುದು ಇಂದು ಮನಗಂಡ ಜನರು ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಮುಗಿಬಿದ್ದಿದ್ದರು.

ನಿನ್ನೆಯ ತನಕ ಲಕ್ಷಾಂತರ ಮಂದಿ ಬಿಪಿಎಲ್ ಕಾರ್ಡಿಗೆ ಅರ್ಜಿ ಸಲ್ಲಿಸಿದ್ದರು ಎಂದು ವರದಿಯಾಗಿತ್ತು ಆದರೆ ಸಂಬಂಧಪಟ್ಟ ಅಧಿಕಾರಿಗಳು ನಿನ್ನೆ ಮಾತನಾಡಿ ಇಲ್ಲಿಯ ತನಕ ಅಂತಹ ಲಕ್ಷಾಂತರ ಅರ್ಜಿಗಳು ಬಂದಿಲ್ಲ, ಕಾರಣ ವೆಬ್ ಪೋರ್ಟಲ್ ಬಂಧ್ ಆಗಿತ್ತು ಎಂದಿದ್ದರು. ಸರ್ಕಾರದ ಮುಂದಿನ ನಿರ್ಧಾರ ನೋಡಿಕೊಂಡು ಬಿಪಿಎಲ್ ಕಾರ್ಡ್ ವಿತರಣಾ ವ್ಯವಸ್ಥೆ ಶುರು ಮಾಡಲಾಗುತ್ತೆ ಅಂತ ನಿನ್ನೆಯಷ್ಟೇ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆದರೆ ಇವತ್ತು ಪತ್ರಿಕೆಗಳಲ್ಲಿ ವರದಿ ಆದಂತೆ, ಜೂನ್ 1ರಿಂದ ಆದ್ಯತಾ ಕುಟುಂಬಗಳ ಬಡತನ ರೇಖೆಗಿಂತ ಕೆಳಗಿರುವವರು ಬಿಪಿಎಲ್ ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು. ಈ ಹಿಂದೆ ಅರ್ಜಿ ಸಲ್ಲಿಸಿದ ಮತ್ತು ಮಂಜೂರಾದ ಪಡಿತರ ಚೀಟಿಗಳ ವಿತರಣೆ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಲಾಗಿದೆ. ಹಲವು ಉಚಿತಗಳಿಗೆ ಆರ್ಥಿಕ ಸ್ಥಿತಿಗತಿಯೇ ಮಾನದಂಡವಾಗುತ್ತದೆ ಎನ್ನುವ ನಂಬಿಕೆಯ ಮೇಲೆ ಬಿಪಿಎಲ್ ಕಾರ್ಡ್ ಗೆ ಈಗ ಇನ್ನಷ್ಟು ಮಹತ್ವ ಬಂದಿದೆ.