Siddaramaiah Cabinet Expansion: ನೂತನ ಸಚಿವರ ಪ್ರಮಾಣವಚಕ್ಕೆ ಕ್ಷಣ ಗಣನೆ! ಸಿದ್ದು ಸಂಪುಟಕ್ಕೆ ಹಿರಿ-ಕಿರಿಯರಾದಿಯಾಗಿ 24 ಸಚಿವರ ಸೇರ್ಪಡೆ!! ಯಾರ್ಯಾರಿದ್ದಾರೆ ಗೊತ್ತಾ?

Siddaramaiah Cabinet Expansion Countdown to swearing in of new ministers

Siddaramaiah Cabinet Expansion: ಅಂತೂ ಇಂತೂ ರಾಜ್ಯ ಸರ್ಕಾರದ ಸಚಿವ ಸಂಪುಟ(Siddaramaiah Cabinet Expansion) ವಿಸ್ತರಣೆ ನಿಕ್ಕಿಯಾಗಿದೆ. 24 ಸಚಿವರ ಪಟ್ಟಿ ಅಂತಿಮವಾಗಿದ್ದು, ಬಹುತೇಕ ಹೊಸ ಮುಖಗಳಿಗೆ ಆದ್ಯತೆ ನೀಡಲಾಗಿದ್ದು, ಹಿರಿಯ-ಕಿರಿಯ ಸಮ್ಮಿಶ್ರವಾಗಿದೆ. ಜೊತೆಗೆ ಜಾತೀವಾರು, ಪ್ರಾದೇಶಿಕವಾರು ಸಚಿವ ಸ್ಥಾನ ಹಂಚಲಾಗಿದೆ. ನೂತನ ಸಚಿವರ ಪ್ರಮಾಣವಚನ ಸಮಾರಂಭ ಇಂದು ಬೆಳಿಗ್ಗೆ 11.45ಕ್ಕೆ ರಾಜಭವನದಲ್ಲಿ(Rajabhavan) ನಡೆಯಲಿದೆ.

ಹೌದು, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಹಾಗೂ ಉಪಮುಖ್ಯಮಂತ್ರಿಡಿ.ಕೆ.ಶಿವಕುಮಾರ್‌(DCM DK Shivkumar) ಜತೆಗೆ ಕಾಂಗ್ರೆಸ್‌ ಹೈಕಮಾಂಡ್‌(Congress High command) ಸತತ ಮೂರು ದಿನಗಳ ಕಾಲ ಸಮಾಲೋಚನೆ ನಡೆಸಿ ಸಂಪುಟ ವಿಸ್ತರಣೆಯ ಕಗ್ಗಂಟನ್ನು ಬಗೆಹರಿಸಿದ್ದಾರೆ. ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಶಿವಕುಮಾರ್ ಹಾಗೂ ಎಂಟು ಶಾಸಕರು ಸಚಿವರಾಗಿ ಕಳೆದ ಶನಿವಾರ ಪ್ರಮಾಣವಚನ ಸ್ವೀಕರಿಸಿದ್ದರು. ಸಚಿವ ಸಂಪುಟದಲ್ಲಿ ಒಟ್ಟು 34 ಮಂದಿಯ ಸೇರ್ಪಡೆಗೆ ಅವಕಾಶ ಇದೆ. 24 ಮಂದಿಯ ಸೇರ್ಪಡೆಯಿಂದ ಸಂಪುಟ ಭರ್ತಿಯಾದಂತೆ ಆಗುತ್ತದೆ

ಈ ನಡುವೆ ಅಚ್ಚರಿ ಎಂಬಂತೆ ಟಫ್‌ ಫೈಟ್‌ ನಡುವೆ ಎಂಎಲ್‌ಎ(MLA) ಹಾಗೂ ಎಂಎಲ್‌ಸಿ(MLC)ಯೂ ಅಲ್ಲದ ಬೋಸರಾಜು ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ಇನ್ನೊಂದೆಡೆ ಸಚಿವ ಸಂಪುಟದಲ್ಲಿ ಕಾಂಗ್ರೆಸ್‌ ಸರ್ಕಾರ ಹೊಸ ಮುಖಕ್ಕೆ ಆದ್ಯತೆ ನೀಡಿದೆ. ಭವಿಷ್ಯದ ದೃಷ್ಟಿಯಿಂದ ಯುವ ನಾಯಕರಿಗೆ ಸಚಿವ ಸ್ಥಾನ ನೀಡಲಾಗಿದೆ. ಇದರಿಂದಾಗಿ ಹಲವು ಹಿರಿಯ ನಾಯಕರು ಸಚಿವ ಸ್ಥಾನದಿಂದ ವಂಚಿತರಾಗಿದ್ದಾರೆ. ಇನ್ನುಳಿದಂತೆ ಯಾರೆಲ್ಲ ಸಂಪುಟದಲ್ಲಿದ್ದಾರೆ ನೋಡೋಣ ಬನ್ನಿ.

ಲಿಂಗಾಯತ(Lingayat) ಸಮುದಾಯಕ್ಕೆ ಒಟ್ಟು ಎಂಟು ಸಚಿವ ಸ್ಥಾನ ನೀಡಲಾಗಿದ್ದು ಈ ಸಮುದಾಯದ ಬಹುತೇಕ ಎಲ್ಲ ಪ್ರಮುಖ ಒಳಪಂಗಡಗಳನ್ನೂ ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. ಒಕ್ಕಲಿಗರಲ್ಲಿ ಡಿ.ಕೆ.ಶಿವಕುಮಾರ್ ಸರಿ ಐದು ಮಂದಿಗೆ ಪ್ರಾತಿನಿಧ್ಯ ದೊರೆತಿದೆ.

ದಲಿತ ಸಮುದಾಯಕ್ಕೆ 9 ಸಚಿವ ಸ್ಥಾನ ಲಭಿಸಿದೆ. ಕೆ.ಎಚ್‌. ಮುನಿಯಪ್ಪ, ಜಿ.ಪರಮೇಶ್ವರ, ಎಚ್‌.ಸಿ.
ಮಹದೇವಪ್ಪ, ಆರ್.ಬಿ. ತಿಮ್ಮಾಪುರ ಮತ್ತು ಪ್ರಿಯಾಂಕ್ ಖರ್ಗೆ ಪರಿಶಿಷ್ಟ ಜಾತಿ ಖೋಟಾದಲ್ಲಿ ಸಚಿವರಾಗಿದ್ದಾರೆ. ಎಡಗೈ ಮತ್ತು ಬಲಗೈ ಸಮುದಾಯಗಳನ್ನು ಸರಿದೂಗಿಸಲಾಗಿದೆ. ಪರಿಶಿಷ್ಟ ಪಂಗಡದ ಪ್ರತಿನಿಧಿಗಳಾಗಿ ನಾಗೇಂದ್ರ, ರಾಜಣ್ಣ, ಸತೀಶ್ ಜಾರಕಿಹೊಳಿ ಅವರಿಗೆ ಅವಕಾಶ ದೊರೆತಿದೆ.

ಹಿಂದುಳಿದ ಜಾತಿಗಳಲ್ಲಿ ಅತ್ಯಂತ ಸಣ್ಣ ಸಮುದಾಯ ರಾಜು ಕ್ಷತ್ರಿಯ ಸಮುದಾಯದ ಬೋಸರಾಜು, ಬೆಸ್ತ ಸಮುದಾಯದ ಮಂಕಾಳ ಸುಬ್ಬ ವೈದ್ಯ, ಮರಾಠ ಸಮಾಜದಿಂದ ಸಂತೋಷ್ ಲಾಡ್ ಇದ್ದಾರೆ. ಕುರುಬ ಸಮುದಾಯದಿಂದ ಸಿದ್ದರಾಮಯ್ಯ ಅವರನ್ನು ಬಿಟ್ಟರೆ ಬೈರತಿ ಸುರೇಶ್ ಅವರಿಗೆ ಮಾತ್ರ ಸಂಪುಟದೊಳಗೆ ಪ್ರವೇಶ ದೊರೆತಿದೆ. ರಜಪೂತ ಸಮುದಾಯದ ಅಜಯ್ ಸಿಂಗ್ ಅವರು ವಿಧಾನಸಭೆಯ ಮುಖ್ಯ ಸಚೇತಕರಾಗಿದ್ದಾರೆ. ಕಡೆ ಗಳಿಗೆಯ ಒತ್ತಡದಲ್ಲಿ ಅವರಿಗೆ ಸಚಿವ ಸ್ಥಾನ ಕೈತಪ್ಪಿದೆ. ವಿಧಾನ ಪರಿಷತ್ ಮುಖ್ಯ ಸಚೇತಕರಾಗಿರುವ ಬಂಜಾರ ಸಮುದಾಯದ ಪ್ರಕಾಶ್ ರಾಥೋಡ್ ಅವರಿಗೂ ಈಗಾಗಲೇ ಒಂದು ಜವಾಬ್ದಾರಿ ಇರುವ ಕಾರಣಕ್ಕೆ ಸಚಿವ ಸ್ಥಾನ ದೊರಕಿಲ್ಲ’ ಎಂದು ಮುಖ್ಯಮಂತ್ರಿ ಆಪ್ತ ಮೂಲಗಳು ಸ್ಪಷ್ಟಪಡಿಸಿವೆ.

ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೂ ಪ್ರಾತಿನಿಧ್ಯ ನೀಡಲಾಗಿದೆ. ಮಲೆನಾಡು, ಕರಾವಳಿ ಕರ್ನಾಟಕ ಮತ್ತು ಮೈಸೂರು ಕರ್ನಾಟಕ ಹಾಗೂ ಮಧ್ಯ ಕರ್ನಾಟಕಕ್ಕೆ ಸಿಕ್ಕಿರುವ ಪ್ರಾತಿನಿಧ್ಯ ಜಾತಿವಾರು ಲೆಕ್ಕಾಚಾರಗಳನ್ನೂ ಸರಿದೂಗಿಸಿದೆ ಎಂದು ಮುಖ್ಯಮಂತ್ರಿ ಹೇಳಿಕೊಂಡಿದ್ದಾರೆ.

ಹಿರಿಯ ಶಾಸಕರಾದ ಆರ್.ವಿ.ದೇಶಪಾಂಡೆ, ಬಸವರಾಜ ರಾಯರಡ್ಡಿ, ಟಿ.ಬಿ.ಜಯಚಂದ್ರ, ತನ್ವೀರ್ ಸೇಠ್‌, ಎನ್‌.ಎ.ಹ್ಯಾರಿಸ್‌, ಸಲೀಂ ಅಹಮದ್‌ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದೆ. ದಿನೇಶ್‌ ಗುಂಡೂರಾವ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಕುರಿತು ಆರಂಭದಲ್ಲಿ ಒಲವು ವ್ಯಕ್ತವಾಗಿರಲಿಲ್ಲ. ಆದರೆ, ಕೊನೆಯ ಕ್ಷಣದಲ್ಲಿ ಬ್ರಾಹ್ಮಣ ಕೋಟಾದಡಿ ಅವರಿಗೆ ಅವಕಾಶ ಸಿಕ್ಕಿದೆ. ಚುನಾವಣೆಗೆ ಮುನ್ನ ಪಕ್ಷಕ್ಕೆ ಸೇರ್ಪಡೆಯಾದ ಲಿಂಗಾಯತ ನಾಯಕ ಲಕ್ಷ್ಮಣ ಸವದಿ ಅವರನ್ನೂ ಸಂಪುಟಕ್ಕೆ ಸೇರಿಸಿಕೊಂಡಿಲ್ಲ.

ಅಲ್ಲದೆ ಎರಡು ವರ್ಷದ ಬಳಿಕ ಸಂಪುಟ ಪುನಾರಚರಣೆ ಮಾಡಿ ನಿಮಗೆ ಅವಕಾಶ ನೀಡ
ಲಾಗುತ್ತದೆ ಎಂದು ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಸಚಿವ ಸ್ಥಾನ
ಕೈ ತಪ್ಪಿದ ಕೂಡಲೇ ಕೆಲವು ಶಾಸಕರು ಬಹಿರಂಗ
ವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಾತಿವಾರು ಮತ್ತು ಪ್ರಾದೇಶಿಕ ಪ್ರಾತಿನಿಧ್ಯದ ಜತೆಗೆ ಸಾಮಾಜಿಕ ನ್ಯಾಯದ ಮಾನದಂಡದಲ್ಲಿ ಹಿರಿಯ ಹಾಗೂ ಕಿರಿಯ ಶಾಸಕರನ್ನು ಸಂಪುಟಕ್ಕೆ ಆಯ್ಕೆ ಮಾಡಿಕೊಳ್ಳುವ ಮೂಲಕ ಸಮತೋಲನ ಕಾಪಾಡಲಾಗಿದೆ ಎಂದು ಮುಖ್ಯಮಂತ್ರಿ
ಪ್ರತಿಪಾದಿಸಿದ್ದಾರೆ.

ಅಂದಹಾಗೆ ನೂತನ ಸಚಿವರ ಪ್ರಮಾಣವಚನ ಸಮಾರಂಭ ಇಂದು ಬೆಳಿಗ್ಗೆ 11.45ಕ್ಕೆ ರಾಜಭವನದಲ್ಲಿ ನಡೆಯಲಿದೆ. ಪ್ರಮಾಣವಚನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ರಾಜಭವನಕ್ಕೆ ಶುಕ್ರವಾರ ಮಧ್ಯಾಹ್ನವೇ ಮುಖ್ಯಮಂತ್ರಿ ಸಚಿವಾಲಯ ಸಂದೇಶ ರವಾನಿಸಿತ್ತು. ನೂತನ ಸಚಿವರ ಪಟ್ಟಿಯನ್ನು ಶುಕ್ರವಾರ ರಾತ್ರಿ ರಾಜಭವನಕ್ಕೆ ಕಳುಹಿಸಲಾಗಿದೆ.

ಇನ್ನೊಂದೆಡೆ, ಸರ್ಕಾರ ಬಂದು ಇಷ್ಟು ದಿನಗಳಾದರೂ ಇನ್ನೂ ಐದು ಗ್ಯಾರಂಟಿ ಘೋಷಣೆ ಜಾರಿಯಾಗಿಲ್ಲ. ಇದರ ನಡುವೆ ವಿರೋಧ ಪಕ್ಷಗಳು ಕೂಡ ಕಾಂಗ್ರೆಸ್‌ನ ಗ್ಯಾರಂಟಿಗಾಗಿ ಪಟ್ಟು ಹಿಡಿದಿದೆ. ಆದಷ್ಟು ಬೇಗ ಇದು ಜಾರಿಯಾಗದೇ ಇದ್ದರೆ, ಹೋರಾಟ ಮಾಡಲು ಸಿದ್ಧ ಎಂದು ಬಿಜೆಪಿ ಹಾಗೂ ಜೆಡಿಎಸ್‌ ಹೇಳಿದೆ.

 

ಇದನ್ನು ಓದಿ: Monsoon Rain: ರಾಜ್ಯದಲ್ಲಿ ಜೂನ್ ತಿಂಗಳಲ್ಲಿ ಭಾರೀ ಮಳೆ ಸಾಧ್ಯತೆ ; ಈ ಬಾರಿ ದೇಶದಲ್ಲಿ ಎಷ್ಟು ಮಳೆಯಾಗಲಿದೆ? ಐಎಂಡಿ ಹೇಳೋದೇನು? 

Leave A Reply

Your email address will not be published.