BPL Card: ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಹಠಾತ್ ಸ್ಥಗಿತ, ಗ್ಯಾರಂಟಿ ಎಫೆಕ್ಟ್ ತಂದ ಶಾಕ್ ?!
BPL card Application submission process halted
BPL Card: ಈ ಹಿಂದೆ ಬಿಪಿಎಲ್ ಪಡಿತರ ಚೀಟಿ (BPL Card) ಕೋರಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಆದರೆ, ಇದೀಗ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಸ್ಥಗಿತಗೊಂಡಿದೆ. ಇದು ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುತ್ತಿರುವವರಿಗೆ ಬಿಗ್ ಶಾಕ್ ಆಗಿದೆ. ಆಹಾರ ಇಲಾಖೆಯು ಹೊಸ ಬಿಪಿಎಲ್ (bpl), ಅಂತ್ಯೋದಯ ರೇಷನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಇದೇನಿದು ಗ್ಯಾರಂಟಿ ಎಫೆಕ್ಟ್ ನಿಂದಾಗಿ ಇರಬಹುದಾ? ಎಂಬ ಪ್ರಶ್ನೆ ಜನರಲ್ಲಿ ಮೂಡಿದೆ.
2021-22 ನೇ ಸಾಲಿನಲ್ಲಿ ಆನ್ಲೈನ್ (online) ಮೂಲಕ ಹೊಸದಾಗಿ ಬಿಪಿಎಲ್ ಪಡಿತರ ಚೀಟಿಗೆ ರಾಜ್ಯಾದ್ಯಂತ ಅರ್ಜಿ ಸಲ್ಲಿಕೆಯಾಗಿತ್ತು. ಒಟ್ಟು 7,61,902 ಅರ್ಜಿಗಳು ಸಲ್ಲಿಕೆಯಾಗಿತ್ತು. ಇದರಲ್ಲಿ 18,046 ಅರ್ಜಿಗಳು ವಿಲೇವಾರಿಯಾಗಿವೆ. 2,60,418 ಅರ್ಜಿಗಳು ಅನುಮೋದನೆಯಾಗಿದ್ದು , 1,57,625 ಅರ್ಜಿಗಳು ತಿರಸ್ಕೃತಗೊಂಡಿವೆ. ಅದರಲ್ಲಿ 3,43,856 ಅರ್ಜಿಗಳು ಬಾಕಿ ಉಳಿದಿವೆ. ಸರ್ಕಾರ ಅನುಮತಿ ನೀಡಿದ ನಂತರ ವಿಲೇವಾರಿ ಪ್ರಕ್ರಿಯೆ ಆರಂಭವಾಗಲಿದೆ ಎನ್ನಲಾಗಿದೆ.
ಬೆಂಗಳೂರಿನಲ್ಲಿ (Bengaluru) 34,705 ರೇಷನ್ ಕಾರ್ಡ್ (ration card), ವಿಜಯಪುರದಲ್ಲಿ 28, 735, ಕಲಬುರಗಿ 16,945, ಬೆಳಗಾವಿ 16,765, ರಾಯಚೂರು 16,693 ಹಾಗೂ ಚಿತ್ರದುರ್ಗದಲ್ಲಿ 16,537 ರೇಷನ್ ಕಾರ್ಡ್ ಗಳನ್ನು ಡಿಲೀಟ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು 3,30,02 ರೇಷನ್ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ. ಇದರಲ್ಲಿ ಅಂತ್ಯೋದಯ ಕಾರ್ಡ್ 21,679 ಮತ್ತು 3,08,345 ಬಿಪಿಎಲ್ ಕಾರ್ಡ್ ಗಳಿವೆ, ಕೆಲವು ಕಾರ್ಡ್ ಗಳನ್ನು ಎಪಿಎಲ್ ಗೂ ಬದಲಾಯಿಸಲಾಗಿದೆ.
ಇದನ್ನೂ ಓದಿ: ಮತ್ತೆ 2 ವಾರಗಳ ರಜೆ ವಿಸ್ತರಣೆ, ಪದವಿ ಕಾಲೇಜು ಶೈಕ್ಷಣಿಕ ವೇಳಾಪಟ್ಟಿ ಪ್ರಕಟ, ತರಗತಿ ಪ್ರಾರಂಭದ ದಿನಾಂಕ ಗಮನಿಸಿ