KH Muniyappa: ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಜನತೆಗೆ 10 ಕೆಜಿ ಅಕ್ಕಿ ಕೊಟ್ಟೇ ಕೊಡ್ತೇವೆ : ಕೆ.ಹೆಚ್.ಮುನಿಯಪ್ಪ

10 kg rice will be given under Annabhagya Yojana KH Muniyappa statement

Share the Article

KH Muniyappa: ಬೆಂಗಳೂರು : ರಾಜ್ಯದ ಜನತೆಗೆ ಅನ್ನಭಾಗ್ಯ ಯೋಜನೆಯಡಿ (KH Muniyappa) 10 ಕೆಜಿ ಅಕ್ಕಿ ಕೊಟ್ಟೇ ಕೊಡ್ತೇವೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಎಂದಿದ್ದಾರೆ

ಕರ್ನಾಟಕ ವಿಧಾನ ಸಭೆ ಚುನಾವಣೆಯಲ್ಲಿ ಭಾರೀ ಬಹುಮತದೊಂದಿಗೆ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದಿದೆ. ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್‌ ಜನತೆಗೆ ಐದು ಗ್ಯಾರಂಟಿ ಘೋಷಣೆಗಳನ್ನು ಮಾಡಿದ್ದು, ಜಾರಿಗಾಗಿ ಕೈ ಪಾಳಯದಲ್ಲಿ ಭಾರೀ ಕಸರತ್ತು ನಡೆಯುತ್ತಿದೆ.

ಈಗಾಗಲೇ ಗ್ಯಾರಂಟಿ ಘೋಷಣೆಯಾಗದಕ್ಕೆ ರಾಜ್ಯದ ಬಹುತೇಕ ಕಡೆಗಳಲ್ಲಿ ಕಾಂಗ್ರೆಸ್‌ ವಿರುದ್ಧ ಕಿಡಿಕಾರುತ್ತಿದ್ದಾರೆ. ಈ ವಿಚಾರವಾಗಿ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಮಾತನಾಡಿ, ನಾಳೆ ಸಚಿವ ಸಂಪುಟ ಸಭೆ ನಡೆಯಲಿದೆ. ನಾಳೆ ಸಚಿವ ಸಂಪುಟ ಸಭೆಯಲ್ಲಿ ಐದು ಗ್ಯಾರಂಟಿ ಯೋಜನೆ ಜಾರಿ ಬಗ್ಗೆ ತೀರ್ಮಾನ ಮಾಡುತ್ತೇವೆ.

ಹಂತ ಹಂತವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತೇವೆ ಯಾವುದೇ ಹಿಂದೇಟು ಹಾಕೋದಿಲ್ಲ. ಅದರಲ್ಲೂ ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಜನತೆಗೆ 10 ಕೆಜಿ ಅಕ್ಕಿ ಕೊಟ್ಟೇ ಕೊಡ್ತೇವೆ . ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿಯನ್ನು ಸಲ್ಲಿಕೆ ಮಾಡಿದ್ದೇವೆ . ಅನ್ನಭಾಗ್ಯ ಯೋಜನೆ ಟೆಂಡರ್‌ ಕೊಡದಿದ್ದರೆ ನಾವೇ ಕರೆದು ಅಕ್ಕಿ ವಿತರಿಸುತ್ತೇವೆ ಎಂದಿದ್ದಾರೆ.

 

ಇದನ್ನು ಓದಿ: Snake Bite Viral Video: ನಾಗರಾಜನಿಗೇ ಮುತ್ತಿಟ್ಟಳಾ ಯುವತಿ?! ಕಚ್ಚೇ ಬಿಡ್ತು ವಿಷಸರ್ಪ! ಮುಂದೆ? 

Leave A Reply