Minister K Venkatesh: ಎಮ್ಮೆ, ಕೋಣವನ್ನು ಕೊಲ್ಲುದಾದ್ರೆ ಹಸುವನ್ನು ಯಾಕೆ ಕಡಿಬಾರ್ದು? – ಸಚಿವ ಕೆ.ವೆಂಕಟೇಶ್​ !

minister k venkatesh why slaughter a cow if you can kill a buffalo

Share the Article

Minister K  Venkatesh: ಈ ಹಿಂದೆ ಪ್ರಿಯಾಂಕ್ ಖರ್ಗೆ (Priyank kharge) ಗೋಹತ್ಯೆ ನಿಷೇಧ ಸೇರಿ ವಿವಾದಾತ್ಮಕ ಕಾಯ್ದೆಗಳನ್ನು ಪರಿಶೀಲಿಸಿ ವಾಪಸ್ ಪಡೆಯುತ್ತೇವೆ ಎಂದು ಹೇಳಿಕೆಯನ್ನು ನೀಡಿ ಚರ್ಚೆಗೆ ಗ್ರಾಸವಾಗಿದ್ದರು. ಇದೀಗ ಎಮ್ಮೆ, ಕೋಣವನ್ನು ಕೊಲ್ಲುದಾದ್ರೆ ಹಸುವನ್ನು ಯಾಕೆ ಕಡಿಬಾರ್ದು? ಎಂದು ಪಶುಸಂಗೋಪನಾ ಖಾತೆ ಸಚಿವ ಕೆ.ವೆಂಕಟೇಶ್​ (Minister K  Venkatesh) ಪ್ರಶ್ನೆ ಮಾಡಿದ್ದು, ಚರ್ಚೆಗೆ ಕಾರಣವಾಗಿದೆ.

ರಾಜ್ಯದಲ್ಲಿ ಗೋ ಹತ್ಯೆ ನಿಷೇಧದ ಬಗ್ಗೆ ಆಗಾಗ ವಿವಾದ ಸೃಷ್ಟಿಯಾಗುತ್ತಿದ್ದು, ಇದೀಗ ಪಶುಸಂಗೋಪನಾ ಖಾತೆ ಸಚಿವ ಕೆ.ವೆಂಕಟೇಶ್  ಗೋ ಹತ್ಯೆಯ ಬಗ್ಗೆ ಪ್ರಶ್ನೆ ಮುಂದಿಟ್ಟಿದ್ದಾರೆ. ಎಮ್ಮೆ, ಕೋಣ ಕಡಿವುದಾದ್ರೆ ಹಸು ಏಕೆ ಕಡಿಯಬಾರದು? ಎಂದು ವಿವಾದಾತ್ಮಕ ಪ್ರಶ್ನೆ ಕೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಕೆ.ವೆಂಕಟೇಶ್ ಅವರು, “ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಬಗ್ಗೆ ಚರ್ಚೆ ಮಾಡಿ ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ನಮ್ಮ ಮನೆಯಲ್ಲೂ ಮೂರ್ನಾಲ್ಕು ಹಸುಗಳಿವೆ. ಒಂದು ಹಸು ಸತ್ತಾಗ ಗುಂಡಿ ತೋಡಿ ಹೂಳಲು ಕಷ್ಟ ಪಡಬೇಕಾಯಿತು. 25 ಜನ ಬಂದರೂ ಸತ್ತ ಹಸುವಿನ ಮೃತದೇಹ ಎತ್ತಲು ಸಾಧ್ಯವಾಗಲಿಲ್ಲ. ಕೊನೆಗೆ ಜೆಸಿಬಿ ಮೂಲಕ ಹಸುವಿನ ಮೃತದೇಹ ಹೂಳಬೇಕಾಯಿತು. ಹಾಗಾಗಿ ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಬಗ್ಗೆ ಚರ್ಚಿಸುತ್ತೇವೆ” ಎಂದು ಹೇಳಿದರು.

 

ಇದನ್ನು ಓದಿ: ರಾಜ್ಯದ ಜನರಿಗೆ ಕರೆಂಟ್ ಹೈ ವೋಲ್ಟೇಜ್ ಶಾಕ್! ಉಚಿತ ವಿದ್ಯುತ್ ಬೆನ್ನಲ್ಲೇ ಯೂನಿಟ್ ದರ ಏರಿಸಿದ ಸರ್ಕಾರ!

Leave A Reply