Odisha: ಒಡಿಶಾ ರೈಲು ಅಪಘಾತದಲ್ಲಿ ಪಾರಾದವರನ್ನು ಹೊತ್ತೊಯ್ಯುತ್ತಿದ ಬಸ್ ಅಪಘಾತ- ಹಲವರ ಸ್ಥಿತಿ ಗಂಭೀರ! ರೈಲಿಂದ ಬಚಾವಾದ್ರೂ ಬಸ್ಸಲ್ಲಿ ಕಾದಿತ್ತು ಗಂಡಾಂತರ!!

Bus carrying passengers from Balasore crash site meets with accident in Bengal

Bus accident in Bengal : ಒಡಿಶಾದ(Odisha) ಬಾಲಾಸೋರ್‌ನಲ್ಲಿ(Balasor) ನಡೆದ ರೈಲು ಅಪಘಾತದ (Odisha Train Accident) ಸ್ಥಳದಿಂದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಹಲವರು ಗಂಭೀರ ಗಾಯಗೊಂಡ ಘಟನೆ ಪಶ್ಚಿಮ ಬಂಗಾಳದ (Bus accident in Bengal ) ಮೇದಿನಿಪುರದಲ್ಲಿ ನಡೆದಿದೆ.

ಹೌದು, ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ಬಳಿ ಮೂರು ರೈಲುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಾಯಗೊಂಡಿದ್ದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್​ ಶನಿವಾರ ಅಪಘಾತಕ್ಕೀಡಾಗಿದೆ. ಪಶ್ಚಿಮ ಬಂಗಾಳದ ಮೇದಿನಿಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು ಬಸ್​ ಹಾಗೂ ಪಿಕ್​ಅಪ್​ ವ್ಯಾನ್​ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

ಬಸ್ಸಿನಲ್ಲಿದ್ದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ಪೊಲೀಸರು ಗಾಯಾಳುಗಳ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಅಲ್ಲದೆ ಗಾಯಗೊಂಡವರಿಗೆ ವಿವಿಧ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ ಬಾಲಸೋರ್‍ನಲ್ಲಿ ಮೂರು ರೈಲುಗಳು ಕೋಲ್ಕತ್ತಾ (Kolkata)-ಚೆನ್ನೈ ಕೋರಮಂಡಲ್ ಎಕ್ಸ್‍ಪ್ರೆಸ್, ಬೆಂಗಳೂರು (Bengaluru)-ಹೌರಾ ಸೂಪರ್‍ಫಾಸ್ಟ್ ಎಕ್ಸ್‍ಪ್ರೆಸ್ ಮತ್ತು ಗೂಡ್ಸ್ ರೈಲುಗಳ ನಡುವೆ ಭೀಕರ ಅಪಘಾತ ನಡೆದಿತ್ತು. ಘಟನೆಯಲ್ಲಿ ಕನಿಷ್ಠ 288 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಇದನ್ನೂ ಓದಿ: Indian Railways kavach: ‘ಕವಚ್’ ಇದ್ದಿದ್ದರೆ ಒಡಿಶಾ ರೈಲು ಅಪಘಾತವನ್ನು ತಪ್ಪಿಸಬಹುದಿತ್ತೇ? ಏನಿದು ಭಾರತೀಯ ರೈಲ್ವೆಯ ಕವಚ್‌? ರೈಲು ದುರಂತವನ್ನು ಇದು ಹೇಗೆ ತಪ್ಪಿಸುತ್ತೆ?

Leave A Reply

Your email address will not be published.