PM modi: ಒಡಿಶಾ ರೈಲು ದುರಂತಕ್ಕೆ ಕಾರಣರಾದವರನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡುವ ಮಾತಿಲ್ಲ: ಪ್ರಧಾನಿ ಮೋದಿ!!

Those found responsible for Odisha train accident will be severely pundished PM MODI

Odisha train accident : ಒಡಿಶಾದ(Odisha) ಬಾಲಸೋರ್‌(Balasor) ಜಿಲ್ಲೆಯ ಬಹನಾಗಾ(Bahanaga) ನಿಲ್ದಾಣದ ಬಳಿ ಕಳೆದ ರಾತ್ರಿ ಮೂರು ರೈಲುಗಳು ಡಿಕ್ಕಿ ಹೊಡೆದು, 260ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ, 900ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಇದು ಇಡೀ ದೇಶವೆ ಕಂಡು ಕೇಳರಿಯದ ಭೀಕರ ಅಪಘಾತವಾಗಿದೆ. ಈ ತ್ರಿವಳಿ ರೈಲು ಅಪಘಾತಕ್ಕೆ ಕಾರಣರಾದ ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ. ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ(PM Modi) ಹೇಳಿದ್ದಾರೆ.

ಹೌದು, ಒಡಿಶಾದ ಬಾಲಸೋರ್(Odisha) ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ನಡೆದ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಭೀಕರ ಅಪಘಾತದಲ್ಲಿ (Odisha train accident) ಮೃತಪಟ್ಟವರ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು ಸಾವಿನ ಸಂಖ್ಯೆ 300ಕ್ಕೆ ಏರಿಕೆಯಾಗಿದೆ. ರೈಲು ಅಪಘಾತದಲ್ಲಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಪ್ರಯಾಣಿರು ಗಾಯಗೊಂಡಿದ್ದು ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ಧಾರೆ. ಈ ವೇಳೆ ರೈಲು ಅಪಘಾತದ ದುರಂತವನ್ನ ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ದುರಂತಕ್ಕೆ ಕಾರಣರಾದವರಿಗೆ ಕಠಿಣ ಶಿಕ್ಷೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ರೈಲು ದುರಂತ ನೋವು ತಂದಿದೆ. ಕೇಂದ್ರ ಸರ್ಕಾರ(Central Government) ನೊಂದವರ ಜೊತೆ ಇದೆ. ರೈಲು ದುರಂತವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ದುರಂತಕ್ಕೆ ಕಾರಣರಾದವರನ್ನು ಶಿಕ್ಷೆಗೆ ಒಳಪಡಿಸುತ್ತೇವೆ. ತನಿಖೆಗೆ ಸೂಚನೆ ನೀಡಿದ್ದೇವೆ ತಪ್ಪಿತಸ್ಥರಿಗೆ ಶಿಕ್ಷೆಯಗಾಗಲಿದೆ. ದುರಂತ ಪಾಠ ಕಲಿಸಿದೆ, ಮುಂದೆ ಹೀಗೆ ಆಗದಂತೆ ಎಚ್ಚರಿಕೆ ವಹಿಸ್ತೇವೆ. ಮೃತರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆಯನ್ನು ಒದಗಿಸುತ್ತೇವೆ. ಬೇಗ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಅಲ್ಲದೆ ರೈಲು ಅಪಘಾತ ಒಂದು ಗಂಭೀರ ಘಟನೆಯಾಗಿದ್ದು ಎಲ್ಲಾ ಆಯಾಮಗಳಿಂದ ತನಿಖೆ ನಡೆಸುವಂತೆ ಆದೇಶಿಸಲಾಗಿದೆ. ಘಟನೆಗೆ ಕಾರಣರಾದ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ರಕ್ಷಣಾ ಕಾರ್ಯಾಚರಣೆ ಮುಗಿದಿದ್ದು ರೈಲ್ವೆ ಇಲಾಖೆಯೂ ಹಳಿಯ ರಿಪೇರಿ ಕಾರ್ಯ ಶುರು ಮಾಡಿಕೊಂಡಿದೆ ಎಂದು ಪ್ರಧಾನಿ ಮೋದಿ ಗಾಯಾಳುಗಳ ಭೇಟಿ ಬಳಿಕ ತಿಳಿಸಿದ್ದಾರೆ.

ಇದೇ ವೇಳೆ ಸ್ಥಳದಿಂದ ಪ್ರಧಾನಿ ಮೋದಿ, ಸಂಪುಟ ಕಾರ್ಯದರ್ಶಿ(Cabinet secretary) ಮತ್ತು ಆರೋಗ್ಯ ಸಚಿವರೊಂದಿಗೆ(Health Minister)ಮಾತನಾಡಿದರು. ಗಾಯಾಳುಗಳು ಮತ್ತು ಅವರ ಕುಟುಂಬಗಳಿಗೆ ಅಗತ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಂತೆ ಸೂಚಿಸಿದರು. ಇದಕ್ಕೂ ಮುನ್ನ ಪ್ರಧಾನಿ ಮೋದಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿದರು. ಇಂದು ಬೆಳಗ್ಗೆ ಪ್ರಧಾನಿ ಮೋದಿ ಪರಿಸ್ಥಿತಿಯನ್ನು ಅವಲೋಕಿಸಲು ಸಭೆ ನಡೆಸಿದ್ದರು. ಈ ಸಭೆಯಲ್ಲಿ ಸಂತ್ರಸ್ತರ ರಕ್ಷಣೆ, ಪರಿಹಾರ ಮತ್ತು ವೈದ್ಯಕೀಯ ಆರೈಕೆಗೆ ಸಂಬಂಧಿಸಿದ ಅಂಶಗಳ ಬಗ್ಗೆ ಚರ್ಚಿಸಿದ್ದರು.

ಇದನ್ನೂ ಓದಿ: Odisha: ಒಡಿಶಾ ರೈಲು ಅಪಘಾತದಲ್ಲಿ ಪಾರಾದವರನ್ನು ಹೊತ್ತೊಯ್ಯುತ್ತಿದ ಬಸ್ ಅಪಘಾತ- ಹಲವರ ಸ್ಥಿತಿ ಗಂಭೀರ! ರೈಲಿಂದ ಬಚಾವಾದ್ರೂ ಬಸ್ಸಲ್ಲಿ ಕಾದಿತ್ತು ಗಂಡಾಂತರ!!

Leave A Reply

Your email address will not be published.