ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ದುರಂತ! ಲಾರಿಗೆ ಬಡಿದ ಕಾರು, ನಾಲ್ವರು ಯುವಕರು ಸ್ಪಾಟ್ ಡೆತ್

Mandya Accident car collided with lorry

Share the Article

Mandya Accident: ಮಂಡ್ಯದ ನಾಗಮಂಗಲ ತಾಲೂಕಿನ ತಿರುಮಲಾಪುರದಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ. ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ (Mandya Accident) ಹೊಡೆದ ಪರಿಣಾಮ ನಾಲ್ವರು ಯುವಕರು ದಾರುಣವಾಗಿ ಮೃತಪಟ್ಟಿದ್ದಾರೆ.

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ತಿರುಮಲಾಪುರ ಗೇಟ್ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದವರು ಬೆಂಗಳೂರಿನಿಂದ ಹಾಸನ ಕಡೆ ಹೋಗುತ್ತಿದ್ದರು.

ಕಾರು ತಿರುಮಲಾಪುರ ಗೇಟ್ ಬಳಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಮುಂದೆ ಚಲಿಸುತ್ತಿದ್ದ ತ್ಯಾಜ್ಯ ಸಾಗಾಟದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ‌ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾಗಿದೆ.

ಮೃತಪಟ್ಟವರಲ್ಲಿ ನೆಲಮಂಗಲದ ಶರತ್, ನವೀನ್, ಹೇಮಂತ್ ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಮತ್ತೋರ್ವ ಮೃತನ ವಿವರ ದೊರೆತಿಲ್ಲ.

ಈಗಾಗಲೇ ಘಟನಾ ಸ್ಥಳಕ್ಕೆ ನಾಗಮಂಗಲ ಡಿವೈಎಸ್ಪಿ ಲಕ್ಷ್ಮಿ ಪ್ರಸಾದ್, ಸಿಪಿಐ ನಿರಂಜನ್ ಹಾಗೂ ಬೆಳ್ಳೂರು ಪೊಲೀಸ್ ಠಾಣೆ ಪಿಎಸ್‌ಐ ಲೋಕೇಶ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ತನಿಖೆ ನಂತರ ತಿಳಿದುಬರಬೇಕಿದೆ.

ಇದನ್ನೂ ಓದಿ: ಓಡಿಶಾದ ಭೀಕರ ರೈಲು ಅಪಘಾತಕ್ಕೆ ಹೊಸ ಟ್ವಿಸ್ಟ್: ಅವಘಡಕ್ಕೆ ಕಾರಣ ರಿವೀಲ್ ಮಾಡಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್

Leave A Reply