Free travel for women: ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಮಾರ್ಗಸೂಚಿ ಪ್ರಕಟ ಸ್ಮಾರ್ಟ್‌ ಕಾರ್ಡ್‌ ನೀಡಿಕೆ, ಸ್ಮಾರ್ಟ್ ಕಾರ್ಡ್ ಎಲ್ಲಿ ಸಿಗುತ್ತೆ ಗೊತ್ತೇ ?

Smart card published guidelines for free travel for women

Free travel for women: ಕರ್ನಾಟಕದ ಮಹಿಳೆಯರ ಉಚಿತ ಬಸ್‌ ಪ್ರಯಾಣಕ್ಕೆ (Free travel for women) ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಕನ್ನಡ ನೆಲದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಸಹಾಯ ಮಾಡಲು ಸರ್ಕಾರವು ಸ್ಮಾರ್ಟ್ ಕಾರ್ಡ್’ನ್ನು ವಿತರಿಸಲು ನಿರ್ಧರಿಸಿದೆ. (Smart Card for free Bus)

 

ಜೂನ್‌ 11 ರಿಂದ ಮಹಿಳೆಯರು ಸರ್ಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣ ನಡೆಸಬಹುದು ಎಂದು ಈಗಾಗಲೇ ಗ್ಯಾರಂಟಿ ಘೋಷಿಸಿದೆ. ಕರ್ನಾಟಕ ರಾಜ್ಯದೊಳಗಿನ ಪುಯಾಣಕ್ಕೆ ಮಾತ್ರ ಈ ಯೋಜನೆಯು ಅನ್ವಯಿಸುತ್ತದೆ. ಮಹಿಳೆಯರು ಸೇವಾ ಸಿಂಧು (Seva Sindhu) ಮೂಲಕ ಅರ್ಜಿಗಳನ್ನು ಪಡೆಯಬೇಕಾಗುತ್ತದೆ. ಶಕ್ತಿ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸುವ ಪ್ರಕ್ರಿಯೆ ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ. ಅಲ್ಲಿಯತನಕ ಕೂಡಾ ಸ್ಮಾರ್ಟ್ ಕಾರ್ಡ್ ಇಲ್ಲದೆ ಪ್ರಯಾಣಿಸಬಹುದಾಗಿದೆ.

ಸರ್ಕಾರದ ಫ್ರೀ ಬಸ್ ಮಾರ್ಗಸೂಚಿಯಲ್ಲಿ ಏನಿದೆ?
1. ಕರ್ನಾಟಕ ಸಾರಿಗೆ ಬಸ್ಸುಗಳಲ್ಲಿ ಮಾತ್ರ ಪ್ರಯಾಣಕ್ಕೆ ಅನುಮತಿ
2. ಐಷಾರಾಮಿ ಬಸ್‌ ವರ್ಗಗಳಾದ ರಾಜಹಂಸ, ಎ.ಸಿ.ಸ್ಲೀಪರ್‌, ನಾನ್ ಎ ಸಿ ಸ್ಲೀಪರ್, ವಜ್ರ, ವಾಯುವಜ್ರ, ಐರಾವತ, ಐರಾವತ ಕ್ಲಬ್ ಕ್ಲಾಸ್, ಐರಾವತ ಗೋಲ್ಡ್ ಕ್ಲಾಸ್, ಅಂಬಾರಿ, ಅಂಬಾರಿ ಉತ್ಸವ್, ಫ್ಲೈ ಬಸ್, ಇವಿ ಪವರ್ ಪ್ಲಸ್ ಮತ್ತು ಇತರ (ಎ.ಸಿ. ಬಸ್‌ಗಳು)- ಇವುಗಳಿಗೆ ಈ ಯೋಜನೆಯು ಅನ್ವಯಿಸುವುದಿಲ್ಲ.
3.ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಹೊರತುಪಡಿಸಿ (BMTC), ಉಳಿದ ರಸ್ತೆ ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಎಲ್ಲಾ ಬಸ್‌ಗಳಲ್ಲಿ (ಅಂತರ ರಾಜ್ಯ, ಎ.ಸಿ. ಮತ್ತು ಐಷಾರಾಮಿ (Luxury Bus) ಬಸ್‌ಗಳನ್ನು ಹೊರತುಪಡಿಸಿ) ಶೇ.50 ರಷ್ಟು ಆಸನಗಳನ್ನು ಪುರುಷರಿಗೆ ಕಾಯ್ದಿರಿಸತಕ್ಕದ್ದು.

4.ಈ ಯೋಜನೆಯಡಿ ಸಾರಿಗೆ ಸಂಸ್ಥೆಗಳಿಗೆ ತಗಲುವ ವೆಚ್ಚವನ್ನು ಸರ್ಕಾರದಿಂದ ಶೂನ್ಯ ಟಿಕೆಟ್ ಅಥವಾ ಶಕ್ತಿ ಸ್ಮಾರ್ಟ್ ಕಾರ್ಡ್ ಅಂಕಿ ಅಂಶವನ್ನೂ ಆಧರಿಸಿ ಭರಿಸಲಾಗುವುದು.
5. ಆಸಕ್ತ ಮಹಿಳೆಯರು ಸೇವಾ ಸಿಂಧು ಮೂಲಕ ಅರ್ಜಿಗಳನ್ನು ಪಡೆದುಕೊಳ್ಳಬೇಕಾಗುತ್ತದೆ ಮತ್ತು ಅದರಂತೆ ಶಕ್ತಿ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸಲಾಗುತ್ತದೆ.
6. ಶಕ್ತಿ, ಸ್ಮಾರ್ಟ್ ಕಾರ್ಡ್ ವಿತರಿಸುವವರೆಗೆ ಭಾರತ ಸರ್ಕಾರ ತವಾ ಕರ್ನಾಟಕ ಸರ್ಕಾರದ ಇಲಾಖೆ ಅಥವಾ ಸರ್ಕಾರಿ ಸ್ವಾಮ್ಯದ ಕಛೇರಿಗಳಿಂದ ವಿತರಿಸಿರುವ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿಗಳನ್ನು ಶೂನ್ಯ ಟಿಕೆಟ್ ವಿತರಿಸುವ ಸಂದರ್ಭದಲ್ಲಿ ಪರಿಗಣಿಸಲಾಗುತ್ತದೆ ಎಂದಿದೆ ಸರ್ಕಾರ.

 

ಇದನ್ನು ಓದಿ: Boy Buys Pads For Classmate: ಪೀರಿಯಡ್ಸ್ ಸಮಯದಲ್ಲಿ ಸ್ಯಾನಿಟರಿ ಪ್ಯಾಡ್ ತಂದುಕೊಟ್ಟ ಸಹಪಾಠಿ ; ನೆಟ್ಟಿಗರಿಂದ ಭಾರೀ ಮೆಚ್ಚುಗೆ ವ್ಯಕ್ತ!! 

Leave A Reply

Your email address will not be published.