V Somanna: ಅಸೆಂಬ್ಲಿ ಎಲೆಕ್ಷನಲ್ಲಿ ತಿಂದ ಪೆಟ್ಟೇ ಸಾಕು, ಇನ್ನು ಲೋಕಸಭೆಯದ್ದು ಬೇಡ ದೇವ್ರೆ…!! ಲೋಕಸಭಾ ಚುನಾವಣೆ ಸ್ಪರ್ಧೆ ವದಂತಿ ಕುರಿತು ಸೋಮಣ್ಣ ಕಿಡಿ!!

Karnataka political news V Somanna news Lok sabha election updates Will not contest for Lok sabha election says V Somanna

V Somanna: “ಮೊನ್ನೆಯಾಗಿರುವ ಪೆಟ್ಟು ತಡೆದುಕೊಂಡರೆ ಸಾಕಾಗಿದೆ. ಮತ್ತೆ ಅಂತಹ ಪೆಟ್ಟು ತಿನ್ನಲು ನಾನು ಹೋಗುವುದಿಲ್ಲ” ಎಂದು ಲೋಕಸಭಾ ಚುನಾವಣೆಯಲ್ಲಿ(Parliament election) ಸ್ಪರ್ಧಿಸುವ ಬಗ್ಗೆ, ವಿಧಾನಸಭೆ ಚುನಾವಣೆಯಲ್ಲಿ(Assembly election) ಹೀನಾಯವಾಗಿ ಸೋತಿರೋ ವಿ ಸೋಮಣ್ಣ ಅವರು ಮಾರ್ಮಿಕವಾಗಿ ಮಾತನಾಡಿದ್ದಾರೆ.

ಹೌದು, ಪಕ್ಷಗಳ ತೆರೆ ಮರೆಯಲ್ಲಿ 2024ರ ಲೋಕಸಭಾ ಚುನಾವಣೆಯ ತಯಾರಿ ಈಗಾಗಲೇ ಶುರುವಾಗಿದ್ದು, ನಿನ್ನೆ ದಿನ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಮಾಜಿ ಸಚಿವ ವಿ.ಸೋಮಣ್ಣ(V Somanna) ಸ್ಪರ್ಧಿಸುತ್ತಾರೆ, ಸೋಮಣ್ಣಗೆ ನೀವು ಸಾಥ್‌ ನೀಡಿ ಎಂದು ವೀರಶೈವ ಸಮಾಜಕ್ಕೆ ಸಂಸದ ಜಿ.ಎಸ್‌.ಬಸವರಾಜು(G S Basavaraj) ಮನವಿ ಮಾಡಿದ್ದಾರೆಂದು ನಗರದಲ್ಲಿ ನಡೆದ ವೀರಶೈವ ಸಮಾಜದ ಕಾರ್ಯಕ್ರಮದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆನ್ನಲಾದ ಕೆಲವು ಮಾತುಗಳು ವೈರಲ್‌ ಆಗಿದ್ದು, ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಈ ಬಗ್ಗೆ ವಿ ಸೋಮಣ್ಣ ಅವರು ಮಾರ್ಮಿಕವಾಗಿ ಮಾತನಾಡಿದ್ದಾರೆ.

ಮೊನ್ನೆಯಾಗಿರುವ ಪೆಟ್ಟು ತಡೆದುಕೊಂಡರೆ ಸಾಕಾಗಿದೆ. ಮತ್ತೆ ಅಂತಹ ಪೆಟ್ಟು ತಿನ್ನಲು ನಾನು ಹೋಗುವುದಿಲ್ಲ. ಲೋಕಸಭಾ ಚುನಾವಣೆಯ ಆಕಾಂಕ್ಷಿಯೂ ನಾನಲ್ಲ, ಅದರ ಅವಶ್ಯಕತೆಯೂ ನನಗಿಲ್ಲ ಎಂದು ಸೋಮಣ್ಣ ಮಾರ್ಮಿಕವಾಗಿ ಹೇಳಿದ್ದು, ಬಸವರಾಜು ಅವರು ಹಿರಿಯರಾಗಿದ್ದು, ನನ್ನ ಬಗ್ಗೆ ಒಳ್ಳೆಯ ಮಾತನಾಡಿದ್ದಕ್ಕೆ ಅವರಿಗೆ ಋಣಿಯಾಗಿದ್ದೇನೆ. ಆದರೆ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಅಂದಹಾಗೆ ನಿನ್ನೆ ವೈರಲ್ ಆದ ಆಡಿಯೋದಲ್ಲಿ ತುಮಕೂರಿನ ಹಾಲಿ ಸಂಸದ(Tumkur present MP)ಬಸವರಾಜು ಅವರು “ನಿಮ್ಮಲ್ಲೇ ಕಿತ್ತಾಡಿದ್ರೆ, ನಿಮ್ಮನ್ನೇ ಒದ್ದು ಓಡಿಸುತ್ತಾರೆ. ಅದು ಕೂಡ ಸನ್ನಿಹಿತವಾಗಿದೆ. ನನ್ನದಾಯ್ತು, ನನ್ನ ಸೀಟನ್ನು ಸೋಮಣ್ಣಗೆ ಕೊಡುತ್ತಾರೆ. ಮುಂದಿನ ಬಾರಿ ನಾನು ಚುನಾವಣೆಯಲ್ಲಿ ನಿಲ್ಲಲ್ಲ. ನಾನು ದೆಹಲಿಗೆ ಹೋಗಿದ್ದಾಗ ವರಿಷ್ಠರಿಗೆ ಈ ಬಗ್ಗೆ ತಿಳಿಸಿದ್ದೇನೆ. ಸೋಮಣ್ಣ ಅವರ ಬೆಂಬಲಕ್ಕೆ ನಿಲ್ಲಿ. ಸಮಾಜ ಒಗ್ಗಟ್ಟಾಗಿದ್ದರೆ ಏನು ಬೇಕಾದರೂ ಸಾಧಿಸಬಹುದು. ಮುಂದೆ ಬರುವವರನ್ನು ಉತ್ತಮ ರೀತಿಯಲ್ಲಿ ಉಪಯೋಗಿಸಿಕೊಳ್ಳಿ, ಇಬ್ಬಗೆ ನೀತಿ ಮಾಡಿಕೊಳ್ಳಬೇಡಿ. ಇವರ ಮೇಲೆ ಅವರನ್ನು, ಅವರ ಮೇಲೆ ಇವರನ್ನು ಎತ್ತಿ ಕಟ್ಟಬೇಡಿ. ನಾನು ಈವರೆಗೆ ಲೋಕಸಭೆಗೆ 8 ಬಾರಿ ಸ್ಪರ್ಧಿಸಿದ್ದು, 5 ಸಲ ಗೆದ್ದಿದ್ದೇನೆ, ಮೂರು ಸಲ ಸೋತಿದ್ದೇನೆ. ಈ ಹಿಂದೆ ನಮ್ಮವರೇ ನನ್ನನ್ನು ಸೋಲಿಸಿದರು. ಆದರೆ, ನಾನು ಸೋತರೂ, ಗೆದ್ದರೂ ಒಂದೇ ರೀತಿಯಲ್ಲಿ ಕೆಲಸ ಮಾಡಿಕೊಂಡು ಬರುತ್ತಿದ್ದೇನೆ’ ಎಂದು ಹೇಳಿದ್ದರು.

ಇದನ್ನೂ ಓದಿ: Thirupati: ಕೆ.ಜಿ.ಗಟ್ಟಲೆ ಬಂಗಾರ ಧರಿಸಿ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಬಂದ ಕುಟುಂಬ!! ಹೀಗೆ ಬರುವುದು ಈ ಕುಟುಂಬದ ಸಂಪ್ರದಾಯವಂತೆ!

3 Comments
  1. Craig Kaur says

    Hi! I know this is kinda off topic but I was wondering which blog platform are you using for this website? I’m getting tired of WordPress because I’ve had issues with hackers and I’m looking at alternatives for another platform. I would be fantastic if you could point me in the direction of a good platform.

  2. JoseOne says

    I enjoy your piece of work, thanks for all the interesting blog posts.

  3. nombres de niñas con s says

    The very crux of your writing while sounding agreeable initially, did not work very well with me personally after some time. Someplace throughout the sentences you managed to make me a believer unfortunately just for a while. I nevertheless have a problem with your jumps in logic and one might do nicely to help fill in all those gaps. In the event you actually can accomplish that, I could undoubtedly be impressed.

Leave A Reply

Your email address will not be published.