Tejasvi surya: ತೇಜಸ್ವಿ ಸೂರ್ಯರಿಗೆ ಖೆಡ್ಡಾ ತೋಡಿದ ಕಾಂಗ್ರೆಸ್: ತೇಜಸ್ವಿಯನ್ನು ವಶ ಮಾಡಲು ಹೊರಟ ಆ ಸ್ತ್ರೀ ಯಾರು ?

karnataka latest news political news Congress plan against Tejashwi Surya

Tejasvi surya: ಬಿಜೆಪಿ ರಾಷ್ಟ್ರೀಯ ಯುವ ಘಟಕದ ಅಧ್ಯಕ್ಷರಾಗಿರುವ ತೇಜಸ್ವಿ ಸೂರ್ಯ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ. ಇದೀಗ ಇವರ ವಿರುದ್ಧ ಮಣಿಸಲು ಡಿಸಿಎಂ ಡಿಕೆ ಶಿವಕುಮಾರ್‌ ಬಿಗ್ ಪ್ಲಾನ್‌ ಮಾಡಿದ್ದು ಈಗಾಗಲೇ ಈ ಕುರಿತು ಪಕ್ಷದಲ್ಲಿ ಚರ್ಚೆಯಗುತ್ತಿದೆ. 2024ರ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದು, ಈ ಬಾರಿ ಕರ್ನಾಟಕದಲ್ಲಿ ಕನಿಷ್ಠ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಗೆಲ್ಲಿಸುವ ಗುರಿಯನ್ನು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಹೊಂದಿದ್ದಾರೆ.

ಹೌದು, ಕಾಂಗ್ರೆಸ್‌ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಭರ್ಜರಿ ಜಯಗಳಿಸಿ ಗೆದ್ದು ಬೀಗುತ್ತಿದೆ. ಅದಲ್ಲದೆ ಶೀಘ್ರದಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯ ಸಿದ್ದತೆ ನಡೆಸುತ್ತಿದ್ದು, ಸಚಿವ ಸಂಪುಟದ ಸದಸ್ಯರಿಗೆ ಈ ಬಾರೀ ಲೋಕಸಭಾ ಚುನಾವಣೆಯಲ್ಲಿ ಕನಿಷ್ಟ 20 ಕ್ಷೇತ್ರಗಳಲ್ಲಿ ಗೆಲ್ಲಬೇಕು ಎಂದು ಟಾರ್ಗೆಟ್ ನೀಡಿದ್ದಾರೆ.

ಹೈಕಮಾಂಡ್‌ ನಾಯಕರ ಜೊತೆಗೆ ಲೋಕಸಭಾ ಚುನಾವಣಾ ವಿಚಾರವಾಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್‌ ಚರ್ಚೆ ನಡೆಸಿದ್ದು, ಹಲವು ಸ್ಥಾನಗಳನ್ನ ಗೆಲ್ಲುವ ತಂತ್ರಗಾರಿಕೆಯನ್ನ ನಡೆಸಿದ್ದಾರೆ ಎನ್ನಲಾಗಿದೆ. ಇನ್ನು ಯಾವ ಕ್ಷೇತ್ರದಲ್ಲಿ ಯಾರನ್ನ ಕಣಕ್ಕಿಳಿಸಬೇಕು ಎನ್ನುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ.

ಈಗಾಗಲೇ ರಾಜಧಾನಿ ಬೆಂಗಳೂರ ವ್ಯಾಪ್ತಿಯಲ್ಲಿ 2024 ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ ಎರಡು ಕ್ಷೇತ್ರಗಳಲ್ಲಿ ಗೆಲ್ಲುವ ತಂತ್ರಗಾರಿಕೆಯನ್ನ ರೂಪಿಸಿದ್ದಾರೆ ಎನ್ನಲಾಗಿದೆ. ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ಮತ್ತು ಬೆಂಗಳೂರು ಸೆಂಟ್ರಲ್​ನಲ್ಲಿ ಯಾರನ್ನು ಕಣಕ್ಕಿಳಿಸಬೇಕು ಎಂಬುದರ ಬಗ್ಗೆ ಕಾಂಗ್ರೆಸ್ ಚುನಾವಣಾ ತಜ್ಞರ ಸಲಹೆ ಕೇಳಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ 32 ವರ್ಷಗಳಿಂದ ಬೆಂಗಳೂರು ದಕ್ಷಿಣ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದ್ದು, ಈ ಹಿಂದೆ ಮಾಜಿ ಕೇಂದ್ರ ಸಚಿವ ಅನಂತಕುಮಾರ್ ಬೆಂಗಳೂರು ದಕ್ಷಿಣ ಕ್ಷೇತ್ರ ಪ್ರತಿನಿಧಿಸುತ್ತಿದ್ದರು. ನಂತರ ಅನಂತಕುಮಾರ್ ನಿಧನದ ಬಳಿಕ ತೇಜಸ್ವಿ ಸೂರ್ಯ (Tejasvi surya) ಅವರು ಈ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದಾರೆ. ಆದರೆ, ಈ ಬಾರಿ ಏನಾದರೂ ಬೆಂಗಳೂರು ದಕ್ಷಿಣದಲ್ಲಿ ಕಾಂಗ್ರೆಸ್‌ ಕಾಂಗ್ರೆಸ್ ಹವಾ ಇರಬೇಕು ಎಂದು ಡಿಕೆ ಶಿವಕುಮಾರ್‌ ಪ್ರಯತ್ತಿಸುತ್ತಿದ್ದಾರೆ.

ಇದೀಗ ತೇಜಸ್ವಿ ಸೂರ್ಯ ವಿರುದ್ಧ ಬೆಂಗಳೂರು ದಕ್ಷಿಣದಲ್ಲಿ ಡಿ ಕೆ ಶಿವಕುಮಾರ್‌ ಚಕ್ರವ್ಯೂಹ ರೆಡಿ ಮಾಡುತ್ತಿದ್ದು, ಸಿನಿಮಾ ನಟಿ, ಮಾಜಿ ಸಂಸದೆ ರಮ್ಯಾ ಅವರನ್ನು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಸಾಧ್ಯತೆ ಇದೆ. ರಮ್ಯಾ ಈಗಾಗಲೇ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಿದ್ದರು. ಈ ಹಿನ್ನೆಲೆ ಅವರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿದ್ದು, ತೇಜಸ್ವಿ ಸೂರ್ಯ ಎದುರು ರಮ್ಯಾ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್‌ ಸಿದ್ಧತೆ ನಡೆಸಿದೆ ಎಂದು ಹೇಳಲಾಗುತ್ತಿದೆ.

 

ಇದನ್ನು ಓದಿ: New Born Baby: ಏನ್ ಸ್ಪೀಡ್ ಗುರೂ ? ಮೂರೇ ದಿನದಲ್ಲಿ ಮಾತು, ಮೂರೇ ತಿಂಗಳಲ್ಲಿ ಎದ್ದು ನಿಂತ ಮಗು !!!

Leave A Reply

Your email address will not be published.