Rajinikanth- Amitabh bachchan: ಬರೋಬ್ಬರಿ 32 ವರ್ಷಗಳ ಬಳಿಕ ಒಂದಾಗ್ತಿದ್ದಾರೆ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಅಮಿತಾಬ್ ಬಚ್ಚನ್!! ಕಾರಣ ಯಾರು?

Bollywood news Film news South India superstar Rajinikanth and Bollywood superstar Amitabh bachchan to reunite after 32 years

Rajinikanth- Amitabh bachchan: ಸೂಪರ್​ ಸ್ಟಾರ್, ತಲೈವಾ ರಜನಿಕಾಂತ್(Super star Rajanikanth) ಹಾಗೂ ಬಾಲಿವುಡ್(Bollywood) ನ ದಂತಕಥೆ, ಬಾಲಿವುಡ್ ಬಿಗ್​ ಬಿ ಅಮಿತಾಭ್ ಬಚ್ಚನ್(Amitabh bhacchan)ಬರೋಬ್ಬರಿ 32 ವರ್ಷಗಳ ಬಳಿಕ ಮತ್ತೆ ತೆರೆ ಮೇಲೆ ಒಂದಾಗುತ್ತಿದ್ದಾರೆ. ಈ ಇಬ್ಬರು(Rajinikanth- Amitabh bachchan) ಸ್ಟಾರ್​​ಗಳ ಸಂಗಮದ ಅದ್ಧೂರಿ ಸಿನಿಮಾಗೆ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ‘ಲೈಕಾ ಪ್ರೊಡಕ್ಷನ್ಸ್'(Lyka production) ಬಂಡವಾಳ ಹಾಕುತ್ತಿದೆ.

ಹೌದು, ಬಾಲಿವುಡ್‌ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್(Amitabh bacchan)ಮತ್ತು ದಕ್ಷಿಣ ಭಾರತದ(South India) ಸೂಪರ್ ಸ್ಟಾರ್ ರಜನಿಕಾಂತ್ ಒಟ್ಟಿಗೆ ಮೂರ್ನಾಲ್ಕು ಸಿನಿಮಾ ಮಾಡಿದ್ದಾರೆ. ಆದರೆ ಕಳೆದ 32 ವರ್ಷದಿಂದಲೂ ಯಾವುದೇ ಸಿನಿಮಾ ಮಾಡಿರಲಿಲ್ಲ. ಇದೀಗ ಕಾಲ ಕೂಡಿ ಬಂದಿದ್ದು, ದೊಡ್ಡ ನಿರ್ಮಾಣ ಸಂಸ್ಥೆ ಈ ಸೂಪರ್‌ ಸ್ಟಾರ್‌ಗಳನ್ನ ಮತ್ತೆ ತೆರೆ ಮೇಲೆ ತರೋಕೆ ಮುಂದೆ ಬಂದಿದೆ.

ಅಂದಹಾಗೆ ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ಈ ಅಭೂತಪೂರ್ವ ಸಾಹಸಕ್ಕೆ ಕೈ ಹಾಕಿದೆ. ಇಂಡಿಯನ್, ಖೈದಿ ನಂಬರ್ 150, ರೋಬೋ 2.0, ದರ್ಬಾರ್ ಇತ್ತೀಚೆಗೆ ಪೊನ್ನಿಯಿನ್ ಸೆಲ್ವನ್ ನಂತಹ ಹಿಟ್ ಸಿನಿಮಾಗಳನ್ನು ನಿರ್ಮಿಸಿರುವ ಲೈಕಾ ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ಮತ್ತೆ ಕೈ ಜೋಡಿಸಿದೆ. ರಜನಿಯ 170ನೇ ಚಿತ್ರಕ್ಕೆ ಹಣ ಹೂಡುತ್ತಿದೆ. ವಿಶೇಷ ಅಂದರೆ ಈ ಸಿನಿಮಾದಲ್ಲಿ ರಜನಿ ಜೊತೆ ಬಾಲಿವುಡ್ ದಂತಕಥೆ ಅಮಿತಾಬ್ ಬಚ್ಚನ್ ಕೂಡ ನಟಿಸುತ್ತಿದ್ದಾರೆ.

ಭಾರತೀಯ ಚಿತ್ರರಂಗದ ಶ್ರೇಷ್ಠ ನಟರಲ್ಲಿ ಪ್ರಮುಖರಾಗಿರುವ ರಜನಿಕಾಂತ್ ಹಾಗೂ ಅಮಿತಾಬ್ ಬಚ್ಚನ್ ಈ ಹಿಂದೆ ‘ಅಂಧಾ ಕಾನೂನ್(Anda kanunn)’, ‘ಗಿರಾಫ್ತಾರ್(Girafthar)’ ಮತ್ತು ‘ಹಮ್(Ham)’ ಸಿನಿಮಾಗಳಲ್ಲಿ ಜೊತೆಯಾಗಿ ಅಭಿನಯಿಸಿದ್ದರು. ಈ ಚಿತ್ರಗಳು ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿದ್ದವು. ಈ ಸಿನಿಮಾಗಳ ಯಶಸ್ಸಿನ ನಂತರ ಇದೀಗ 32 ವರ್ಷದ ಬಳಿಕ ಇಬ್ಬರೂ ಜೊತೆಯಾಗಿ ಮತ್ತೆ ತೆರೆ ಮೇಲೆ ಕಾಣಸಿಕೊಳ್ಳಲು ಸಜ್ಜಾಗಿದ್ದಾರೆ. ಈ ಸಿನಿಮಾಗೆ ಲೈಕಾ ಪ್ರೊಡಕ್ಷನ್ ಹಣ ಹಾಕುತ್ತಿದೆ. ಬಹಳ ಅದ್ಧೂರಿಯಾಗಿ ಮೂಡಿ ಬರಲಿರುವ ಈ ಪ್ರಾಜೆಕ್ಟ್ ಮುಂದಿನ ತಿಂಗಳ ಅಂತ್ಯಕ್ಕೆ ಟೇಕಾಫ್ ಆಗಲಿದೆ.

ರಜನಿ-ಬಚ್ಚನ್ ನಟಿಸಲಿರುವ, ಲೈಕಾ ನಿರ್ಮಾಣ ಮಾಡುತ್ತಿರುವ ಈ ಸಿನಿಮಾವನ್ನು ‘ಜೈ ಭೀಮ್’(Jai bhim) ಸಿನಿಮಾ ಖ್ಯಾತಿಯ ಟಿಜೆ ಜ್ಞಾನವೇಲ್(T J Jnanavel) ನಿರ್ದೇಶಿಸಲಿದ್ದಾರೆ. ಜೈ ಭೀಮ್ ಮೂಲಕ ಇಂಡಿಯನ್ ಸಿನಿಲೋಕದಲ್ಲಿ ಸಂಚಲನ ಸೃಷ್ಟಿಸಿದ್ದ ಜ್ಞಾನವೇಲ್ ರಜನಿ ಹಾಗೂ ಬಚ್ಚನ್ ನಂತಹ ಸೂಪರ್ ಸ್ಟಾರ್ಸ್ ಗೆ ಸಿನಿಮಾ ಆಕ್ಷನ್ ಕಟ್ ಹೇಳುತ್ತಿದ್ದು, ಈ ಪ್ರಾಜೆಕ್ಟ್ ಮೇಲೆ ನಿರೀಕ್ಷೆ ಹೆಚ್ಚಿದೆ.

ಇದನ್ನೂ ಓದಿ: Mirjapur: ಒಡಿಶಾ ರೈಲು ದುರಂತದಲ್ಲಿ ಪವಾಡವೆಂಬಂತೆ ಬದುಕುಳಿದ ಜೈನ ಯಾತ್ರಾರ್ಥಿ ಮನೆಗೆ ಬರುವ ಮೊದಲೇ ಹೃದಯಾಘಾತದಿಂದ ಸಾವು!

Leave A Reply

Your email address will not be published.