ಉಚಿತ ಬಸ್ ಯೋಜನೆಗೆ ‘ಶಕ್ತಿ’ ಹೆಸರಿಟ್ಟ ಹಿಂದಿನ ಸೀಕ್ರೆಟ್ ರಿವೀಲ್ ಮಾಡಿದ ಸಿಎಂ ಕಂ ಕಂಡಕ್ಟರ್ ಸಿದ್ರಾಮಯ್ಯ!

Karnataka latest news Congress guarantee Shakti scheme free bus travel for women reason for name shakti scheme

Shakti scheme: ಬೆಂಗಳೂರು: ಕಾಂಗ್ರೆಸ್ ಸರ್ಕಾರ (Congress Government) ದ ತೀವ್ರ ಜನ ಬೇಡಿಕೆಯ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ’ ಯೋಜನೆ (Shakti Scheme) ಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಚಾಲನೆ ನೀಡಿದ್ದಾರೆ. ಈ ಸಂಧರ್ಭದಲ್ಲಿ ಅವರು ಉಚಿತ ಬಸ್ ಯೋಜನೆಗೆ ಈ ಹೆಸರು ಹೇಗೆ ಬಂತು ಎಂದು ಗುಟ್ಟು ಬಿಟ್ಟುಕೊಟ್ಟಿದ್ದಾರೆ. ಈಗ ಹೆಸರಿನ ಹಿಂದಿನ ಕಾರಣ ರಿವೀಲ್ ಮಾಡಿದ್ದಾರೆ.

ಸಿದ್ದರಾಮಯ್ಯನವರು ತಮ್ಮಉದ್ಘಾಟನಾ ಭಾಷಣದ ವೇಳೆ ‘ಶಕ್ತಿ’ ಎಂದು ಹೆಸರು ಹೇಗೆ ಮತ್ತು ಯಾಕೆ ಬಂತು ಎಂಬುದನ್ನು ಬಹಿರಂಗಪಡಿಸಿದ್ದಾರೆ. ನಾವು ನಮ್ಮ ಹೆಣ್ಣುಮಕ್ಕಳಿಗೆ ಶಕ್ತಿ ತುಂಬೋಕೆ ಅಂತ ಈ ಹೆಸರು ಇಟ್ಟೆವು. ಇದರಿಂದ ಸಮಾಜದಲ್ಲಿ ಆರ್ಥಿಕ, ಸಾಮಾಜಿಕ ಅಸಮತೋಲನ ಕಡಿಮೆ ಮಾಡಬಹುದು. ಸರ್ಕಾರ ಘೋಷಿಸಿರುವ 5 ಗ್ಯಾರಂಟಿ ಪೈಕಿ 4 ಗ್ಯಾರಂಟಿ ಮಹಿಳೆಯರಿಗೆ ಸೀಮಿತವಾಗಿದ್ದು ಅವರಿಗೆ ಶಕ್ತಿ ತುಂಬಲು ಮಾಡಿದ್ದಾಗಿದೆ. ಕೆಲವರು ಇದಕ್ಕೆ ಗೇಲಿ ಮಾಡಿ, ಕುಹಕ ಮಾತು ಆಡ್ತಾರೆ. ಇದಕ್ಕೆ ನಾವು ತಲೆ ಕೆಡಿಸಿಕೊಳ್ಳಲ್ಲ. ಗೇಲಿ, ಕುಹಕ ಮಾಡೋರಿಗೆ ನಾವು ಸೊಪ್ಪು ಹಾಕಲ್ಲ ಎಂದು ಅವರು ಹೇಳಿದ್ದಾರೆ.

ಅಭಿವೃದ್ಧಿ ಪಥದಲ್ಲಿ ಸಮಾಜ ಹೋಗಬೇಕಾದರೆ ನಾವು ಪುರುಷರಷ್ಟೆ ಮಹಿಳೆಯರಿಗೆ ಕೂಡಾ ಅವಕಾಶ ಸಿಗಬೇಕು. ಇಲ್ಲದಿದ್ರೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ. ಯಾವುದೇ ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಮಹಿಳೆಯರೇ ಹೆಚ್ಚು ಅವಕಾಶ ಪಡೆಯುತ್ತಿದ್ದಾರೆ. ಅಮೆರಿಕಾ, ಚೀನ, ಆಸ್ಟ್ರೇಲಿಯ, ಇಂಡೋನೇಷ್ಯಾ, ಬಾಂಗ್ಲಾದೇಶದಲ್ಲಿ ಹೆಚ್ಚು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂಡಿ ಅವರು ಹೇಳಿದ್ದಾರೆ.

ನಮ್ಮ ಭಾರತದಲ್ಲಿ.ಮಹಿಳೆಯರು 24% ಮಾತ್ರ ಸಾರ್ವಜನಿಕ ಕ್ಷೇತ್ರದಲ್ಲಿದ್ದರೆ, ಈಗ ಅದು 24% ಗೆ ಇಳಿದಿದೆ. ಅದು 2014 ರಾಲ್ಲಿ 30% ಇತ್ತು. ಮಹಿಳೆಯರು ನಮ್ಮಅರ್ಥ ಮಾಡಿಕೊಳ್ಳಬೇಕು. ನಮ್ಮಮಹಿಳೆಯ ಬಗ್ಗೆ ಮೊಸಳೆ ಕಣ್ಣೀರು ಹಾಕೋರ ಕಾಲದಲ್ಲಿ 30% ನಿಂದ 24% ಮಹಿಳೆ ಪಾಲ್ಗೊಳ್ಳುವಿಕೆ ಆಗಿದೆ. ಮನುವಾದಿಗಳು ಬಯಸೋದೇ ಅದನ್ನು. ಹೆಣ್ಣುಮಕ್ಕಳು ಮನೆಯ ಹೊರಗೆ ಬರಬಾರದು ಅನ್ನೋದು ಮನುವಾದಿಗಳ ಆಸೆ. ಯಾವ ದೇಶದಲ್ಲಿ ಹೆಚ್ಚು ಮಹಿಳೆಯರು ಸಾರ್ವಜನಿಕ ಕ್ಷೇತ್ರದಲ್ಲಿ ಇದ್ದರೆ ದೇಶ ಅಭಿವೃದ್ಧಿ ಆಗುತ್ತೆ ಎಂದು ಸಿದ್ದರಾಮಯ್ಯನವರು ಈ ಸಂದರ್ಭದಲ್ಲಿ ಹೇಳಿದರು.

ಇದನ್ನೂ ಓದಿ: Shakthi yojane: ಮಹಿಳೆಯರಿಗೆ ಚೀಟಿ ಹರಿದ ಸಿಎಂ!!ರೈಯ ರೈಯ….ಕಂಡಕ್ಟರ್ ಸಿದ್ರಾಮಯ್ಯ

Leave A Reply

Your email address will not be published.