H D kumaraswamy: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಬಗ್ಗೆ ಕೊನೆಗೂ ಮೌನ ಮುರಿದ HDK !!

hd kumaraswamy clarified the issue of jds bjp alliance in the lokasabha election

H D kumaraswamy: ಮುಂಬರುವ ಲೋಕಸಭಾ ಚುನಾವಣೆಯಲ್ಲಿ(Parliament election) ಬಿಜೆಪಿ ಜತೆ ಜೆಡಿಎಸ್(BJP- JDS) ಮೈತ್ರಿ ಚರ್ಚೆ ವಿಚಾರದ ಬಗ್ಗೆ ಖಡಕ್ ಆಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು; ಇದೆಲ್ಲಾ ಗಾಳಿ ಸುದ್ದಿ, ಆ ರೀತಿಯ ಯಾವುದೇ ಚರ್ಚೆ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಹೌದು, 2024ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯೊಂದಿಗೆ ಚುನಾವಣೆ ಎದುರಿಸುತ್ತವೆ ಎನ್ನುವ ಮಾತುಗಳು ರಾಜ್ಯದಲ್ಲಿ ಸದ್ದು ಮಾಡಿತ್ತು. ಈ ಮಾತಿಗೆ ಪ್ರತಿಕ್ರಿಯೇ ನೀಡಿದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಹೆಚ್.ಡಿ.ಕುಮಾರಸ್ವಾಮಿ(H D kumaraswamy) ಅವರು ಇದು ಗಾಳಿಸುದ್ದಿ ಎಂದು ಹೇಳುವ ಮೂಲಕ ಮೈತ್ರಿಯನ್ನು ಅಲ್ಲಗಳೆದಿದ್ದಾರೆ.

ಚನ್ನಪಟ್ಟಣದಲ್ಲಿ(Channapattana) ಸೋಮವಾರ ಈ ಕುರಿತು ಮಾತನಾಡಿದ ಎಚ್​ಡಿಕೆ ಈ ವಿಚಾರವನ್ನು ನನ್ನ ಬಳಿ ಯಾರೂ ಪ್ರಸ್ತಾಪ ಮಾಡಿಲ್ಲ ಎಂದು ಹೇಳಿದ್ದಾರೆ. ರಾಜಕಾರಣದಲ್ಲಿ ಊಹಾಪೋಹ ಮಾಮೂಲಿ, ಈ ವಿಚಾರವನ್ನು ನನ್ನ ಮುಂದೆ ಯಾರೂ ಪ್ರಸ್ತಾಪ ಮಾಡಿಲ್ಲ. ಲೋಕಸಭಾ ಚುನಾವಣೆ ಬಗ್ಗೆ ನಾನು ಜಿಲ್ಲಾವಾರು ಸಭೆ ನಡೆಸಿ. ಗೆದ್ದ ಸೋತ ಅಭ್ಯರ್ಥಿಗಳ(Candidates) ಜತೆ ಮಾತನಾಡಿದ್ದೇನೆ. ಯಾವ ರೀತಿ ಚುನಾವಣೆ ಎದುರಿಸಬೇಕು ಎಂಬುದರ ಕುರಿತು ರೂಪುರೇಷೆ ಸಿದ್ಧ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಅಲ್ಲದೆ ಮಾಧ್ಯಮದವರು, ನೀವು ರಾಷ್ಟ್ರ ರಾಜಕಾರಣದ ಬಗ್ಗೆ ಒಲವು ವಿಚಾರ ಹೊಂದಿದ್ದೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ, ”ನನಗೆ ರಾಷ್ಟ್ರ ರಾಜಕಾರಣದ ಮೇಲೆ ಒಲವಿಲ್ಲ. ಕಳೆದ ಬಾರಿಯೂ ನನಗೆ ಚುನಾವಣೆ ಎದುರಿಸುವ ಆಸಕ್ತಿ ಇರಲಿಲ್ಲ. ಆದರೆ ಕಾರ್ಯಕರ್ತರ ಒತ್ತಾಸೆಯಿಂದ ರಾಜಕಾರಣದಲ್ಲಿದ್ದೇನೆ.

 

ಇದನ್ನು ಓದಿ: Shakti Scheme: ಉಚಿತ ಶಕ್ತಿ ಬಸ್ ಪ್ರಯಾಣಕ್ಕೆ ಒರಿಜಿನಲ್ ಐಡಿ ಅಗತ್ಯವಿಲ್ಲ, ಮಹಿಳೆಯರಿಗೆ ಗುಡ್ ನ್ಯೂಸ್ ಮೇಲೆ ಗುಡ್ ನ್ಯೂಸ್ ! 

Leave A Reply

Your email address will not be published.