BPL Card: ಬಿಪಿಎಲ್ ಪಡಿತರ ಕಾರ್ಡ್ ಅರ್ಜಿ ಸಲ್ಲಿಸುವವರಿಗೆ ಶಾಕಿಂಗ್ ನ್ಯೂಸ್ ವಿತ್ ರೂಲ್ಸ್!

BPL Card: ಕರ್ನಾಟಕ ರಾಜ್ಯ ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಕೆ ಮತ್ತು ವಿತರಣೆ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ. ಸದ್ಯ ವೆಬ್ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಕೆ ವಿಭಾಗ ಲಾಕ್ ಆಗಿದೆ.

 

ಮುಖ್ಯವಾಗಿ ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಆಗಲೆಂದು ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ (BPL Card) ನೀಡುತ್ತಿದೆ. ಬಿಪಿಎಲ್ ಕಾರ್ಡ್ ದಾರರಿಗೆ ರಿಯಾಯಿತಿ ದರದಲ್ಲಿ ಪಡಿತರ ನೀಡಲಾಗುತ್ತದೆ. ಆದರೆ ಬಿಪಿಎಲ್ ಕಾರ್ಡ್ ಗೆ ಅರ್ಹರಲ್ಲದವರು ಕೂಡಾ ಬಿಪಿಎಲ್ ಕಾರ್ಡ್ ಪಡೆದು ಸರ್ಕಾರಕ್ಕೆ ವಂಚಿಸುತ್ತಿದ್ದಾರೆ.

 

ಇನ್ನು ಗೃಹಲಕ್ಷ್ಮಿ ಯೋಜನೆ ಸೌಲಭ್ಯ ಪಡೆಯಲು ಹೆಚ್ಚಿನ ಸಂಖ್ಯೆಯ ಜನ ಬಿಪಿಎಲ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ. ಆದರೆ, https://ahara.kar.nic ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಕೆ ವಿಭಾಗವನ್ನು ಲಾಕ್ ಮಾಡಲಾಗಿದೆ. ಇದೀಗ ಬಿಪಿಎಲ್ ಕಾರ್ಡ್ ಮಾಡಲು ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂ. ಮೀರಬಾರದು ಎಂದು ಸೂಚನೆ ನೀಡಲಾಗಿದೆ.

 

ಸದ್ಯ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ ಮೊದಲ ವಾರ ಅವಕಾಶ ನೀಡುವುದಾಗಿ ಆಹಾರ ಇಲಾಖೆ ತಿಳಿಸಲಾಗಿತ್ತು. ಆದರೆ ಇದುವರೆಗೆ ಆನೈನ್ ಪೋರ್ಟಲ್ ಓಪನ್ ಆಗಿಲ್ಲ. ಸರ್ಕಾರದಿಂದ ಸೂಚನೆ ಬಾರದ ಹಿನ್ನೆಲೆ ಜಾಹೀರಾತು ಪೋರ್ಟಲ್ ಓಪನ್ ಮಾಡಿಲ್ಲವೆಂದು ಹೇಳಲಾಗಿದೆ.

 

ಮುಖ್ಯವಾಗಿ ಬಿಪಿಎಲ್ ಕಾರ್ಡ್ ಮಾಡಲು ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂ. ಮೀರಬಾರದು. ಇನ್ನು ಎಪಿಎಲ್ ಕಾರ್ಡ್‌ಗಳಿಗೆ ಯಾವುದೇ ನಿರ್ಬಂಧಗಳಿಲ್ಲ ಎಂದು ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ : ಶಾಸಕ ಜನಾರ್ದನ ರೆಡ್ಡಿ ಮತ್ತು ಪತ್ನಿ ಅರುಣಾ ರೆಡ್ಡಿಯ ಕೋಟ್ಯಂತರ ಮೌಲ್ಯದ ಆಸ್ತಿ ಜಪ್ತಿ!ಸಿಬಿಐ ವಿಶೇಷ ಕೋರ್ಟ್!

Leave A Reply

Your email address will not be published.