Siddaramaiah -Sunil kumar: ‘ಅನ್ನ ಭಾಗ್ಯ’ ಕ್ಕೆ ಕೇಂದ್ರದ ಅಡ್ಡಗಾಲು- ಸಿದ್ದರಾಮಯ್ಯ ಆರೋಪ!! ಕೇಂದ್ರದತ್ತ ಬೊಟ್ಟು ಮಾಡಿ ಜಾರಿಕೊಳ್ಳಬೇಡಿ ಎಂದು ಸುನಿಲ್ ಕುಮಾರ್ ಕೌಂಟ್ರು!!

Karnataka politics news Central Government has not stopped supply of kg rice ex minister Sunil kumar to CM Siddaramaiah

Share the Article

Siddaramaiah -Sunil kumar: ಕಾಂಗ್ರೆಸ್ ಸರ್ಕಾರ(Congress Government)ಜಾರಿಗೆ ತಂದಿರೋ 5 ಗ್ಯಾರಂಟಿಗಳ ಪೈಕಿ ’10 ಕೆ ಜಿ ಅಕ್ಕಿ ಉಚಿತ'(Free rice Scheme) ಯೋಜನೆ ಕೂಡ ಒಂದು. ಸರ್ಕಾರವು ಈ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಗೆ(Anna bhagya yojane)ಕೇಂದ್ರ ಸರ್ಕಾರದ ಸಹಕಾರ ಕೋರಿದ್ದು, ಇದಕ್ಕೊಪ್ಪದ ಕೇಂದ್ರವೀಗ ಅಡ್ಡಗಾಲು ಹಾಕುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ(CM siddaramaiah) ಆರೋಪಿಸಿದ್ದಾರೆ. ಈ ಬೆನ್ನಲ್ಲೇ ಮಾಜಿ ಸಚಿವ, ಬಿಜೆಪಿ ನಾಯಕ ಸುನಿಲ್(Sunil Kumar) ಕುಮಾರ್ ಕಾಂಗ್ರೆಸ್ ಗೆ ಎದುರೇಟು ನೀಡಿದ್ದಾರೆ.

ಹೌದು, ನಾವು ಜಾರಿಗೆ ತಂದಿರೋ ಅನ್ನ ಭಾಗ್ಯ ಯೋಜನೆಯಲ್ಲಿ ಪಾಲುದಾರರಾಗಿ ಪ್ರತಿ ತಿಂಗಳು 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಪೂರೈಸುತ್ತೇವೆ ಅಂತಾ ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಫ್‌ಸಿಐ) ಒಪ್ಪಿಕೊಂಡಿತ್ತು, ಆದರೀಗ ಕೇಂದ್ರ ಸರ್ಕಾರ(Central Government) ಅಕ್ಕಿ ಕೊಡದಂತೆ ತಡೆಹಿಡಿದಿದೆ. ಕೇಂದ್ರ ಸರ್ಕಾರ ಬಡವರ ವಿರೋಧಿ ಸರ್ಕಾರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರ ಹಾಗೂ ಎಫ್‌ಸಿಐ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಈ ಬೆನ್ನಲ್ಲೇ, ಕೇಂದ್ರ ಸರ್ಕಾರ ಕೊಡುತ್ತಿದ್ದ ಐದು ಕೆಜಿ ಅಕ್ಕಿ ಪೂರೈಕೆಯನ್ನು ನಿಲ್ಲಿಸಿಲ್ಲ ಎಂಬುದಾಗಿ ಸಿಎಂಗೆ ಮಾಜಿ ಸಚಿವ ಸುನೀಲ್ ಕುಮಾರ್ (Siddaramaiah -Sunil kumar) ಕಾರ್ಕಳ ಟಾಂಗ್ ನೀಡಿದ್ದಾರೆ.

ಅಂದಹಾಗೆ ರೇಸ್ ಕೋರ್ಸ್ ರಸ್ತೆಯಲ್ಲಿರುವ ಶಕ್ತಿ ಭವನದಲ್ಲಿ ಸುದ್ದಿಗೋಷ್ಠಿ(Press meet) ನಡೆಸಿ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆ ಜಾರಿ ಮಾಡೋದಕ್ಕೆ ನಮ್ಮ ಎಫ್‌ಸಿಎ ಜತೆ ನಮ್ಮ ಅಧಿಕಾರಿಗಳು ಮಾತಾಡಿದ್ದರು. ನಾನೂ ಕೂಡ ನೇರವಾಗಿ ಮಾತನಾಡಿದ್ದೆ. 10 ಕೆಜಿ ಅಕ್ಕಿ ಕೊಡಲು ನಮಗೆ ಪ್ರತಿ ತಿಂಗಳು 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಬೇಕು ಅಂತಾ ಹೇಳಿದ್ದೆ. ಪ್ರತಿ ಕೆಜಿಗೆ 34 ರೂ. + 2 ರೂ. 60 ಪೈಸೆ ಟ್ರಾನ್ಸ್‌ಪೋರ್ಟ್‌ ಶುಲ್ಕ ಸೇರಿ ಒಂದು ಕೆಜಿ ಅಕ್ಕಿಗೆ 36.60 ರೂ.ಗೆ ಖರೀದಿ ಮಾಡಲು ತೀರ್ಮಾನ ಮಾಡಿದ್ದೆವು. ಎಫ್‌ಸಿಐ(FCI) ಸಹ ಒಪ್ಪಿಕೊಂಡಿತ್ತು. ಆದರೆ ಇದೀಗ ಕೇಂದ್ರವು ನಮ್ಮ ಯೋಜನೆಗೆ ಅಡ್ಡಗಾಲು ಹಾಕುತ್ತಿದೆ ಎಂದು ಸಿದ್ದು ಕಿಡಿಕಾರಿದ್ದಾರೆ. ಈ ಬೆನ್ನಲ್ಲೇ ಸುನಿಲ್ ಕುಮಾರ್ ಕಾಂಗ್ರೆಸ್ ಗೆ ಕೌಂಟ್ರು ಕೊಟ್ಟಿದ್ದಾರೆ.

ಇಂದು ಟ್ವಿಟ್ ಮಾಡಿರುವಂತ ಅವರು, ಮಾನ್ಯ ಸಿದ್ಧರಾಮಯ್ಯನವರೇ ನುಡಿದಂತೆ ನಡೆಯುತ್ತೇವೆ ಎಂದು ಪುಗಸಟ್ಟೆ ಪ್ರಚಾರ ತೆಗೆದುಕೊಂಡು ಈಗ ಕೇಂದ್ರ ಸರ್ಕಾರ ಅಕ್ಕಿ ಕೊಡುವಲ್ಲಿ ರಾಜಕಾರಣ ಮಾಡುತ್ತಿದೆ ಎಂದು ಜಾರಿಕೊಳ್ಳುವ ಪ್ರಯತ್ನ ನಡೆಸುತ್ತೀರಾ ? ನೀವು ಮತ ರಾಜಕಾರಣಕ್ಕಾಗಿ ಪ್ರಣಾಳಿಕೆ ಸಿದ್ದಪಡಿಸುವಾಗ‌ ಕೇಂದ್ರ ಸರ್ಕಾರದ ಜತೆ ಚರ್ಚೆ ನಡೆಸಿದ್ದಿರಾ? ಎಂದು ಪ್ರಶ್ನಿಸಿದ್ದಾರೆ.

ಅಲ್ಲದೆ “ಪ್ರತಿಯೊಬ್ಬರಿಗೂ ಹತ್ತು ಕೆಜಿ ಅಕ್ಕಿ ಕೊಡುತ್ತೇವೆ ಎಂದು ಕೊಟ್ಟ ಭರವಸೆ ಈಡೇರಿಸುವುದಕ್ಕೆ ನಿಮ್ಮಿಂದ ಸಾಧ್ಯವಾಗುತ್ತಿಲ್ಲ. ಈ ಹೊರೆಯಿಂದ ತಪ್ಪಿಸಿಕೊಳ್ಳುವುದಕ್ಕರ ಈಗ ಕೇಂದ್ರ ಸರ್ಕಾರ ಅಕ್ಕಿ ಕೊಟ್ಟಿಲ್ಲ ಎಂದು ಸಬೂಬು ಹೇಳುತ್ತಿದ್ದೀರಿ. ಕೇಂದ್ರ ಸರ್ಕಾರ ಕೊಡುತ್ತಿದ್ದ ಐದು ಕೆಜಿ ಅಕ್ಕಿ ಪೂರೈಕೆಯನ್ನು ಇದುವರೆಗೆ ನಿಲ್ಲಿಸಿಲ್ಲ. ಹೆಚ್ಚುವರಿ ಐದು ಕೆಜಿ ಅಕ್ಕಿ ಕೊಡುತ್ತೇನೆ ಎಂದು ಹೇಳಿದ್ದು ನಿಮ್ಮ ವಾಗ್ದಾನ. ಅದರಂತೆ ನಡೆದುಕೊಳ್ಳಿ. ಅದನ್ನು ಬಿಟ್ಟು ಅಂಗಳ ಡೊಂಕು ಎಂದು ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡುವ ಕೀಳು ರಾಜಕಾರಣ ನಿಲ್ಲಿಸಿ” ಎಂದು ಆಗ್ರಹಿಸಿದ್ದಾರೆ.

ಇದರೊಂದಿಗೆ “‘ನಿಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳುವುದಕ್ಕಾಗಿ ಕೇಂದ್ರವನ್ನು ದೂಷಿಸುವ ಕೆಟ್ಟ ಚಾಳಿ ನಿಮಗೆ ಹೊಸದಲ್ಲ. ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯ ಮೂಲಕ ಬಡವರ ಹಸಿವನ್ನು ನೀಗಿಸಿದ್ದು ಇದೇ ಕೇಂದ್ರ ಸರ್ಕಾರ ಎಂಬುದನ್ನು ಮರೆಯಬೇಡಿ” ಎಂದು ಕಿವಿ ಮಾತು ಹೇಳಿದ್ದಾರೆ.

 

ಇದನ್ನೂ ಓದಿ: Indira canteen: ರಾಜ್ಯದ ಇಂದಿರಾ ಕ್ಯಾಂಟೀನ್ ಗಳಲ್ಲಿ ಭರ್ಜರಿ ಬಾಡೂಟ!! ಇನ್ನು ಕಡಿಮೆ ದರದಲ್ಲಿ ಸವಿಯಬಹುದು ಮಟನ್, ಚಿಕನ್ ಐಟಮ್!! ನಾಳೆಯಿಂದಲೇ ಜಾರಿ ?!

 

Leave A Reply