ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆಗೆ 4-5 ದಿನಗಳು ವಿಳಂಬ : ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

Lakshmi Hebbalkar :ಕರ್ನಾಟಕದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಮಾಡಲು ಇನ್ನೂ 4-5 ವಿಳಂಬವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar) ಸ್ಪಷ್ಟನೆ ನೀಡಿದ್ದಾರೆ.

 

ಮಾಧ್ಯಮಗಳೊಂದಿಗೆ ವಿಧಾನಸೌಧದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಕಾಂಗ್ರೆಸ್‌ ಸರ್ಕಾರ ಬಹುನೀರಿಕ್ಷೆಯ ಐದು ಯೋಜನೆ ಪೈಕಿ ಗೃಹಲಕ್ಷ್ಮೀ ಯೋಜನೆಯೂ ಒಂದಾಗಿದೆ. ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಹೊಸ ಆಪ್‌ಗಳನ್ನು ಸಿದ್ದಪಡಿಸೋದಕ್ಕೆ ಸರ್ಕಾರಕ್ಕೆ ಮಾಹಿತಿ ನೀಡಿದ್ದೇವೆ. ಈ ಆನ್ ​ಲೈನ್ ಆಪ್‌ಗಳನ್ನು ಸಿದ್ಧತೆ ಮಾಡೋದಕ್ಕೆ ಇನ್ನೂ 3-4 ದಿನಗಳ ಕಾಲಾವಕಾಶ ಬೇಕಾಗುತ್ತದೆ. ಆ ಕಾರಣದಿಂದಾಗಿ ಸ್ವಲ್ಪ ವಿಳಂಬವಾಗಲಿದೆ. ಆಪ್‌ ಸಿದ್ಧತೆ ಮಾಡಿದ ಬಳಿಕವೇ ಎಲ್ಲರೂ ಆನ್‌ಲೈನ್‌ ಹಾಗೂ ಆಫ್​ ಲೈನ್​ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಲಭ್ಯವಾಗಲಿದೆ ಎಂದಿದ್ದಾರೆ.

 

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ನಿಮ್ಮ ಸಮೀಪದ ನಾಡಕಚೇರಿ, ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್​ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲುಬಹುದು. ಅಲ್ಲದೇ ಸ್ವಯಂಸೇವಾ ಸಂಸ್ಥೆಗಳಿಗೂ ಆಹ್ವಾನ ನೀಡಲಾಗಿದೆ. ಇನ್ನಷ್ಟು ಅರ್ಜಿ ಸಲ್ಲಿಸಬಹುದಾದ ಪ್ರಕ್ರಿಯೆಗಳ ಬಗ್ಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿಯನ್ನು ನೀಡಲಾಗುತ್ತದೆ ಎಂದಿದ್ದಾರೆ.

ಇದನ್ನೂ ಓದಿ : ಮಂಗಳೂರಲ್ಲಿ ಇದೆಂಥಾ ಮಹಾ ಯಡವಟ್ಟು…!3 ಸಾವಿರ ಬರುತ್ತಿದ್ದ ಕರೆಂಟ್​ ಬಿಲ್ ಏಳು ಲಕ್ಷ ರೂ..!

Leave A Reply

Your email address will not be published.