Pratap Simha- Tanveer Sait: ಮುಸ್ಲಿಮರಿಗೆ ಎರಡು ಮೂರು ಪತ್ನಿಯಿದ್ದರೆ, ಯಾರನ್ನು ಮನೆ ಯಜಮಾನಿ ಎಂದು ಗುರುತಿಸುತ್ತೀರಾ ?- ಪ್ರತಾಪ್ ಸಿಂಹ | ನಿಮಗೂ ಆಸೆ ಇದ್ದರೆ ಇನ್ನೊಂದು ಮದುವೆಯಾಗಿ- ತನ್ವೀರ್ ಸೇಠ್
Latest karnataka political news Congress MLA Tanveer Sait salms BJP MP Pratap Sinha over gruhalakshmi schemes statement
Pratap Simha- Tanveer Sait: ಮೈಸೂರಿನ ಬಿಜೆಪಿ ಸಂಸದ ಪ್ರತಾಪ್ ಸಿಂಹಗೆ ಆಸೆ ಇದ್ದರೆ ಇನ್ನೊಂದು ಮದುವೆಯಾಗಿ, ಅದರ ಅನುಭವವನ್ನು ನಮಗೆ ಹೇಳಲಿ ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ (Pratap Simha- Tanveer Sait) ಅವರು ಶನಿವಾರ ತಿರುಗೇಟು ನೀಡಿದ್ದಾರೆ. ಅವರು ಪ್ರತಾಪ್ ಸಿಂಹ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ ಮಾತನಾಡಿದರು.
ಮುಸ್ಲಿಮರಿಗೆ ಎರಡು ಮೂರು ಹೆಂಡತಿಯರಿರುತ್ತಾರೆ. ಆಗ ಯಾರನ್ನು ಮನೆಯ ಯಜಮಾನಿ ಎಂದು ಗುರುತಿಸುತ್ತೀರಾ ? ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದ್ದರು. ರಾಜ್ಯದಲ್ಲಿ ಗೃಹ ಲಕ್ಷ್ಮಿ ಯೋಜನೆ ಜಾರಿಯಿಂದ ಕುಟುಂಬಗಳಲ್ಲಿ ಒಡಕು ಉಂಟಾಗಿದೆ. ಇಂತಹ ಇಬ್ಬರು ಮೂವರು ಹೆಂಡಿರ ಸಂದರ್ಭಗಳಲ್ಲಿ ಯಾರನ್ನು ಮನೆಯ ಯಜಮಾನಿ ಎಂದು 2,000 ರೂಪಾಯಿ ಗೃಹಲಕ್ಷ್ಮಿ ಭಾಗ್ಯ ಕೊಡೋದು ? ಎಂದು ಪ್ರತಾಪ್ ಕಿಚಾಯಿಸಿ ಕೇಳಿದ್ದರು.
ಪ್ರತಾಪ್ ಸಿಂಹ ಹೇಳಿಕೆಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ತನ್ವೀರ್ ಸೇಠ್, ‘ಪ್ರತಾಪ್ ಸಿಂಹಗೆ ಆಸೆ ಇದ್ದರೆ ಇನ್ನೊಂದು ಮದುವೆಯಾಗಿ ಅದರ ಅನುಭವವನ್ನು ನಮಗೆ ಬಂದು ಹೇಳಲಿ ‘ ಎಂದು ಕೌಂಟರ್ ನೀಡಿದ್ದಾರೆ.
ಇದೇ ವೇಳೆ ಪ್ರತಾಪ್ ಸಿಂಹ ಅವರ ಹೊಂದಾಣಿಕೆ ರಾಜಕೀಯದ ಹೇಳಿಕೆ ಬಗ್ಗೆಯೂ ತನ್ವೀರ್ ಸೇಠ್ ಪ್ರತಿಕ್ರಿಯಿಸಿದ್ದಾರೆ. ‘ ಅಡ್ಜೆಸ್ಟ್‌ಮೆಂಟ್ ರಾಜಕೀಯ ನನಗೆ ಗೊತ್ತಿಲ್ಲ. ಆ ರೀತಿ ಮಾಡಿರುವವರಿಗೆ ಆ ವಿಚಾರ ಚೆನ್ನಾಗಿ ಗೊತ್ತು. ಅಡ್ಜೆಸ್ಟ್ ಮೆಂಟ್ ಮಾಡ್ಕೊಂಡು ಒಬ್ಬರನ್ನು ತುಳಿಯಲು ಮತ್ತೊಬ್ಬರನ್ನು ಬಳಸಿಕೊಳ್ಳೋದು ಸರಿಯಲ್ಲ. ಅನುಭವ ಇರುವವರು ಈ ವಿಚಾರ ಪ್ರಸ್ತಾಪ ಮಾಡಿದ್ದಾರೆ’ ಎಂದಿದ್ದಾರೆ.
ವಿದ್ಯುತ್ ದರ ಹೆಚ್ಚಳಕ್ಕೆ ಈ ಹಿಂದಿನ ಬಿಜೆಪಿ ಸರ್ಕಾರವೇ ನೇರ ಕಾರಣ. ದರ ಹೆಚ್ಚಳಕ್ಕೆ ಕೆಇಆರ್‌ಸಿ ಮಾಡಿದ್ದ ಶಿಫಾರಸ್ಸಿಗೆ ಈ ಹಿಂದಿನ ಬಿಜೆಪಿ ಸರ್ಕಾರ ಒಪ್ಪಿಗೆ ಸೂಚಿಸಿದೆ. ಬಿಜೆಪಿಯರಿಗೆ ಚುನಾವಣೆಯಲ್ಲಿ ಸೋಲುವುದು ಖಚಿತವಾಗಿದ್ದರಿಂದ ವಿದ್ಯುತ್ ದರ ಹೆಚ್ಚಳ ಪ್ರಸ್ತಾಪಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: Dowry: ಅತ್ತೆ, ಮಗನ ಬುಲೆಟ್ ಹುಚ್ಚಿನಲ್ಲಿ ಸೊಸೆಗೆ ವಿಷ ಪ್ರಾಷಣ! ಬುಲೆಟ್ ಬೈಕ್ ಬದಲು ಜೀವವನ್ನೇ ಕಿತ್ತುಕೊಂಡ ಪಾಪಿಗಳು!