CM Siddaramaiah: ಕೋಮು ದ್ವೇಷಕ್ಕೆ ಬಲಿಯಾದ ಯುವಕರ ಕುಟುಂಬಕ್ಕೆ ತಲಾ 25 ಲಕ್ಷದ ಚೆಕ್ ನೀಡಿದ ಸಿದ್ದರಾಮಯ್ಯ

Latest Karnataka news CM Siddaramaiah distributes compensation checks to 6 families of victims of communal violence

CM Siddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಿಜೆಪಿ ಅವಧಿಯಲ್ಲಿ ಕೋಮು ರಾಜಕಾರಣಕ್ಕೆ ಬಲಿಯಾದ ಆರು ಕುಟುಂಬಗಳಿಗೆ ತಲಾ 25 ಲಕ್ಷ ಮೊತ್ತದ ಪರಿಹಾರ ನೀಡುವುದೆಂದು ಸರ್ಕಾರ ಇತ್ತೀಚೆಗೆ ಹೇಳಿತ್ತು. ಅದರಂತೆ ಈಗ ಪರಿಹಾರದ ಚೆಕ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು(CM Siddaramaiah) ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಬಿಜೆಪಿಯ ದ್ವೇಷ ಮತ್ತು ತಾರತಮ್ಯದ ರಾಜಕಾರಣದ ವಿರುದ್ಧ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಸದನದಲ್ಲೇ ಧ್ವನಿ ಎತ್ತಿದ್ದೆ. ಕೋಮು ಗಲಭೆಗಳಿಗೆ ಬಲಿಯಾದ ಮೃತರ ಹೆಸರಲ್ಲೂ ಬಿಜೆಪಿ ತಾರತಮ್ಯ ನೀತಿಯನ್ನು ಅನುಸರಿಸಿತ್ತು. ಅವತ್ತು ಮೃತರ ಕುಟುಂಬದವರ ಕಣ್ಣೀರು ಒರೆಸುವುದು ಮತ್ತು ಪರಿಹಾರ ವಿತರಣೆಯಲ್ಲೂ ಹಿಂದಿನ ಸರ್ಕಾರ ತಾರತಮ್ಯವನ್ನು ಮೆರೆದಿತ್ತು. ನಾವು ಈ ಹಿಂದಿನ ಬಿಜೆಪಿ ಪರಿವಾರ ಮಾಡಿದ ತಾರತಮ್ಯವನ್ನು ಸರಿಪಡಿಸಿದ್ದೇವೆ’ ಎಂದಿದ್ದಾರೆ.

‘ ನಮ್ಮ ಸರ್ಕಾರದ ಅವಧಿಯಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಮತಾಂಧರಿಗೆ, ಅನೈತಿಕ ಪೊಲೀಸ್ ಗಿರಿಗೆ, ಜಾತಿ-ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡ್ತೀವಿ. ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ’ ಎಂದು ಅವರು ಹೇಳಿದ್ದಾರೆ.

ಮುಖ್ಯಮಂತ್ರಿಗಳ ಜತೆ ಈ ಸಂದರ್ಭದಲ್ಲಿ ಸಚಿವರಾದ ಚೆಲುವರಾಯಸ್ವಾಮಿ, ಜಮೀರ್ ಅಹಮದ್, ಸಿಎಂ ರಾಜಕೀಯ ಕಾರ್ಯದರ್ಶಿಗಳಾದ ನಾಸಿರ್ ಅಹಮದ್, ಗೋವಿಂದರಾಜು ಸೇರಿದಂತೆ ಇತರ ಹಲವು ನಾಯಕರು ಹಾಜರಿದ್ದರು.

https://twitter.com/CMofKarnataka/status/1670693458993086464/photo/1?ref_src=twsrc%5Etfw%7Ctwcamp%5Etweetembed%7Ctwterm%5E1670693458993086464%7Ctwgr%5Edb825ff0c02af6edbb1cf5126c16282b9ca1fb2a%7Ctwcon%5Es1_&ref_url=https%3A%2F%2Fkannadanewsnow.com%2Fkannada%2Fcm-siddaramaiah-distributes-compensation-cheques-to-6-families-of-victims-of-communal-violence%2F

ಇದನ್ನೂ ಓದಿ: ದಕ್ಷಿಣ ಕನ್ನಡ: ಧರ್ಮಸ್ಥಳ, ಕುಕ್ಕೆಯಲ್ಲಿ ಮಹಿಳೆಯರ ದಂಡು! ಬಸ್ಸೇರಲು ಹರಸಾಹಸದ ಪ್ರಯತ್ನ!

Leave A Reply

Your email address will not be published.