NPS: ಎನ್‌ಪಿಎಸ್‌ನಲ್ಲಿ ನಿಯಮ ಬದಲಾವಣೆ : ಶೇ.45 ಪಿಂಚಣಿ ಸಿಗುವ ಸಾಧ್ಯತೆ

Latest National News new pension scheme updates a small change in NPS rules

NPS: ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (NPS) ಸಾಮಾನ್ಯವಾಗಿ 60 ವರ್ಷ ವಯಸ್ಸಿನಿಂದ ಪ್ರಾರಂಭವಾಗುವ ನಿವೃತ್ತಿಯ ಸಮಯದಲ್ಲಿ ವ್ಯಕ್ತಿಗಳಿಗೆ ಪಿಂಚಣಿ ಒದಗಿಸುವ ಗುರಿಯನ್ನು ಹೊಂದಿದೆ.

ಇದೀಗ ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿ ಪ್ರಕಾರ ಯಾವುದೇ ಕಾರಣಕ್ಕೂ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಮತ್ತೆ ಎಂದಿನಂತೆ ಜಾರಿ ಮಾಡುವ ಸಾಧ್ಯತೆಯೇ ಇಲ್ಲ ಎಂದಿದ್ದಾರೆ. ಹೌದು, ಕೇಂದ್ರ ಸರ್ಕಾರವು ಈಗಾಗಲೇ ಜಾರಿಯಲ್ಲಿ ಇರುವ ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್‌)ಯಲ್ಲಿ ಕೆಲವೊಂದು ಬದಲಾವಣೆ ತರಲು ಯೋಜನೆ ರೂಪಿಸಿದೆ.

ಸದ್ಯಕ್ಕೆ ಕೇಂದ್ರ ಸರ್ಕಾರಿ ಉದ್ಯೋಗಿಗಳು ಪಡೆದಿರುವ ಕೊನೆಯ ಸಂಬಳದ ಶೇ.40ರಿಂದ ಶೇ.45ರಷ್ಟು ಮೊತ್ತವನ್ನು ಪಿಂಚಣಿಯಾಗಿ ವಿತರಿಸುವ ಬಗ್ಗೆ ಶಿಫಾರಸು ಮಾಡುವ ಸಾಧ್ಯತೆಗಳು ಇವೆ ಎನ್ನಲಾಗುತ್ತಿದೆ.

2004ರ ಸಮಯದಲ್ಲಿ ಅಧಿಕಾರದಲ್ಲಿ ಇದ್ದ ಸರ್ಕಾರ ಜಾರಿಗೊಳಿಸಿದ್ದ ಪಿಂಚಣಿ ವ್ಯವಸ್ಥೆಯನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬದಲಾವಣೆಗೊಳಿಸಿತ್ತು. ಜತೆಗೆ 2006ರಿಂದ ಸರ್ಕಾರಿ ಸೇವೆಗಳಿಗೆ ಸೇರಿದವರಿಗೆ ಪಿಂಚಣಿ ನೀಡದೇ ಇರುವ ಬಗ್ಗೆ ಆ ವ್ಯವಸ್ಥೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. ಕೇಂದ್ರ ಸರ್ಕಾರ ಜಾರಿಗೊಳಿಸಿದ ಹೊಸ ವ್ಯವಸ್ಥೆಯ ಬಗ್ಗೆ ಹಲವಾರು ಆಕ್ಷೇಪಗಳು ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ಏಪ್ರಿಲ್‌ನಲ್ಲಿ ಎನ್‌ಪಿಎಸ್‌ ವ್ಯವಸ್ಥೆ ಪರಿಶೀಲನೆಗೆ ಸಮಿತಿ ರಚನೆ ಮಾಡಿತ್ತು.

ಎನ್‌ಪಿಎಸ್‌ನಲ್ಲಿ ಉದ್ಯೋಗಿಗಳ ಮೂಲ ವೇತನದಿಂದ ಶೇ.10, ಸರ್ಕಾರದ ವತಿಯಿಂದ ಶೇ.14ನ್ನು ಪಿಂಚಣಿಗೆ ನೀಡಲಾಗುತ್ತಿದೆ. ಆದರೆ, ಹಳೆಯ ಪಿಂಚಣಿ ವ್ಯವಸ್ಥೆಯಲ್ಲಿ ಸರ್ಕಾರಿ ಉದ್ಯೋಗಿಗೆ ಕೊನೆಯ ಬಾರಿ ಪಡೆದುಕೊಂಡ ವೇತನದ ಮೊತ್ತದ ಶೇ.50ರಷ್ಟು ಪಿಂಚಣಿಯಾಗಿ ನೀಡಲಾಗುತ್ತಿತ್ತು.

ಇದನ್ನೂ ಓದಿ: ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ!

Leave A Reply

Your email address will not be published.