Siddaramaiah -Amit shah: ಸಿದ್ದು-ಶಾ ಭೇಟಿ: ರಾಜ್ಯಕ್ಕೆ ಅಕ್ಕಿ ನೀಡುವ ಭರವಸೆ, ಆಹಾರ ಸಚಿವರೊಡನೆ ಚರ್ಚೆ- ಅಮಿತ್ ಶಾ !!

Anna Bhagya scheme update Karnataka CM Siddaramaiah reacts after met union minister Amit Shah in Delhi

Siddaramaiah -Amit shah: ದೆಹಲಿ(Delhi) ಪ್ರವಾಸದಲ್ಲಿರುವ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ(Karnataka CM Siddaramaiah) ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ(Home Minister amith sha)ಅವರನ್ನು ಭೇಟಿ (Siddaramaiah -Amit shah) ಮಾಡಿದ್ದಾರೆ. ಈ ವೇಳೆ ಕೇಂದ್ರದ ನೀತಿಯಿಂದ ಬಡವರ ಆಹಾರಕ್ಕೆ ಸಮಸ್ಯೆ ಆಗಿರುವ ಸಂಗತಿಯನ್ನು ಚರ್ಚಿಸಿದ್ದಾರೆ. ಇದಕ್ಕೆ ಸ್ಪಂದಿಸಿದ ಅಮಿತ್ ಶಾ ಗುರುವಾರ ಬೆಳಗ್ಗೆ ಕೇಂದ್ರ ಆಹಾರ ಸಚಿವ ಪಿಯೂಶ್ ಗೋಯಲ್(Central food Minister) ಅವರ ಜತೆ ಚರ್ಚಿಸುವುದಾಗಿ ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಹೌದು, ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಿಎಂ ಸಿದ್ಧರಾಮಯ್ಯ ಭೇಟಿ ಮಾಡಿದ ಸಂದರ್ಭದಲ್ಲಿ, ಕರ್ನಾಟಕ ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ(Annabhagya) ಯೋಜನೆಗೆ ಅಕ್ಕಿ ಖರೀದಿ ವಿಚಾರವಾಗಿ ಚರ್ಚಿಸಿದದ್ದು, ಶಾ ಅವರು ಸಕರಾತ್ಮಕವಾಗಿಯೇ ಈ ಬಗ್ಗೆ ಪ್ರತಿಕ್ರಿಯಿದ್ದಾರೆ. ಕೇಂದ್ರ ಆಹಾರ ಸಚಿವ ಪಿಯೂಶ್ ಗೋಯಲ್ ಅವರ ಜತೆ ಚರ್ಚಿಸುವುದಾಗಿ ತಿಳಿಸಿದ್ದಾರೆಂದು ಸ್ವತಃಮುಖ್ಯಮಂತ್ರಿ ಸಿದ್ದರಾಮಯ್ಯನವರೇ(CM Siddaramaiah) ತಿಳಿಸಿದ್ದಾರೆ.

ದೆಹಲಿಯ ಕರ್ನಾಟಕ ಭವನದಲ್ಲಿ ಇಂದು(ಜೂನ್ 22) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ರಾಜ್ಯಕ್ಕೆ ಅಕ್ಕಿ ಪೂರೈಸುವ ಬಗ್ಗೆ ಅಮಿತ್ ಶಾ ಜತೆ ಚರ್ಚಿಸಿದ್ದೇನೆ. ಮೊದಲು FCI ರಾಜ್ಯಕ್ಕೆ ಅಕ್ಕಿ ಪೂರೈಕೆ ಮಾಡುವುದಾಗಿ ಹೇಳಿತ್ತು. ಆ ನಂತರ ರಾಜ್ಯಕ್ಕೆ ಅಕ್ಕಿ ಪೂರೈಸಲು ಆಗಲ್ಲ ಎಂದು ಹೇಳಿದ್ದಾರೆ. ದ್ವೇಷ ರಾಜಕೀಯ ಮಾಡುವುದು ಬೇಡ ಎಂದು ಹೇಳಿದ್ದೇನೆ. ಅಮಿತ್ ಶಾ ಕೂಡ ಈ ಬಗ್ಗೆ ಚರ್ಚಿಸುವುದಾಗಿ ಹೇಳಿದ್ದಾರೆ ಎಂದು ತಿಳಿಸಿದರು.

ಅಲ್ಲದೆ ಕೇಂದ್ರದ ಇತ್ತೀಚಿನ ನೀತಿ ಆಹಾರ ಭದ್ರತಾ ಕಾಯ್ದೆಗೆ ವಿರುದ್ಧವಾಗಿದೆ. ಇದು ನೇರವಾಗಿ ಬಡವರ ಎರಡು ಹೊತ್ತಿನ ಊಟಕ್ಕೂ ತೊಂದರೆ ಕೊಡುತ್ತದೆ. ಆದ್ದರಿಂದ ರಾಜ್ಯಗಳಿಗೆ ಆಹಾರ ಧಾನ್ಯಗಳನ್ನು ಕೊಡದಿರುವ ಧೋರಣೆ ಬದಲಾದರೆ ಒಳ್ಳೆಯದು ಎನ್ನುವ ಅಭಿಪ್ರಾಯವನ್ನು ಅಮಿತ್‌ ಶಾ ಅವರಿಗೆ ತಿಳಿಸಿರುವುದಾಗಿ ಹೇಳಿದರು.

ಇದನ್ನೂ ಓದಿ: NPS: ಎನ್‌ಪಿಎಸ್‌ನಲ್ಲಿ ನಿಯಮ ಬದಲಾವಣೆ : ಶೇ.45 ಪಿಂಚಣಿ ಸಿಗುವ ಸಾಧ್ಯತೆ

Leave A Reply

Your email address will not be published.