Nalin Kumar Kateel: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್ ರಾಜೀನಾಮೆ, ಹೊಸ ಅಧ್ಯಕ್ಷನಿಗೆ ತಾಲೀಮು !

karnataka politics latest news political news Nalin Kumar Kateel resigns as BJP state president

Nalin Kumar Kateel: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Election 2023) ಬಿಜೆಪಿ ಸೋಲನ್ನು ಅನುಭವಿಸಿತ್ತು. ಕೇವಲ 66 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿತ್ತು. ಈ ಸೋಲಿನ ಹೊಣೆಯನ್ನು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ (Nalin Kumar Kateel) ಅವರು ಹೊತ್ತುಕೊಂಡಿದ್ದರು. ಇದೀಗ ನಳೀನ್‌ ಕುಮಾರ್‌ ಕಟೀಲ್‌ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬಳ್ಳಾರಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನಳೀನ್‌ ಕುಮಾರ್‌ ಕಟೀಲ್‌ ಈಗಾಗಲೇ ನನ್ನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಎರಡು ವರ್ಷದ ಅವಧಿ ಮುಗಿದಿದೆ. ನಾನು ರಾಜೀನಾಮೆಯನ್ನೂ ನೀಡಿದ್ದೇನೆ. ಲಿಖಿತ ಹಾಗೂ ಮೌಖಿಕವಾಗಿ ರಾಜೀನಾಮೆ ಸಲ್ಲಿಕೆ ಮಾಡಿದ್ದೇನೆ ಎಂದು ಹೇಳಿದ್ದಾರೆ.

ನಳೀನ್‌ ಕುಮಾರ್‌ ಕಟೀಲ್‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲಿಯೇ, ಬಿಜೆಪಿಯಲ್ಲಿ ಈ ಸ್ಥಾನಕ್ಕೆ ಭಾರೀ ಪೈಪೋಟಿ ನಡೆದಿದೆ‌. ಹಿರಿಯ ನಾಯಕ ವಿ ಸೋಮಣ್ಣ ಈಗಾಗಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ.ವಿಧಾನಸಭಾ ಚುನಾವಣೆಯಲ್ಲಿ (Assembly election) ಎರಡೂ ಕ್ಷೇತ್ರಗಳಲ್ದಿ ಹೀನಾಯವಾಗಿ ಸೋಲನುಭವಿಸಿರುವ ಬಿಜೆಪಿ ನಾಯಕ ವಿ ಸೋಮಣ್ಣ (V Somanna) ಅವರು ಬಿಜೆಪಿ(BJP) ರಾಜ್ಯಾಧ್ಯಕ್ಷ ಸ್ಥಾನ ನನಗೆ ಕೊಡಿಯೆಂದು ಪಕ್ಷದ ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ.

ವಿ ಸೋಮಣ್ಣ ಅಲ್ಲದೆ, ಅಶ್ವತ್ಥ್‌ ನಾರಾಯಣ್‌, ಸಿಟಿ ರವಿ ಹಾಗೂ ಆರ್‌.ಅಶೋಕ್‌ ಅವರ ಹೆಸರೂ ಕೂಡ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹರಿದಾಡುತ್ತಿದೆ. ಇನ್ನು ಈ ಬಗ್ಗೆ ಮಾತನಾಡಿರುವ ಶಾಸಕ ಡಾ. ಅಶ್ವಥ್ ನಾರಾಯಣ, ನಾನು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ. ಯಾರಿಗೇ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೂ ನಾವು ಒಪ್ಪಿಕೊಂಡು ಕೆಲಸ ಮಾಡುತ್ತೇವೆ. ಪಕ್ಷ ಕೊಡೋ ಯಾವುದೇ ಜವಾಬ್ದಾರಿಯನ್ನೂ ನಾನು ವಹಿಸಿಕೊಳ್ಳುತ್ತೇನೆ. ಈ ಮೂಲಕ ಪರೋಕ್ಷವಾಗಿ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟಲ್ಲಿ ನಿಭಾಯಿಸೋದಾಗಿ ಅಶ್ವತ್ಥ್‌ನಾರಾಯಣ ತಿಳಿಸಿದ್ದಾರೆ.ಈ ಸ್ಥಾನ ಯಾರು ಪಾಲಿಗೆ ಸಿಗಲಿದೆ ಎಂಬುದು ಕಾದುನೋಡಬೇಕಿದೆ

ಇದನ್ನು ಓದಿ: Railway Recruitment: ನೀವು ಎಸ್ ಎಸ್ಎಲ್ ಸಿ ಪಾಸಾಗಿದ್ದೀರಾ? ಇದೋ ರೈಲ್ವೇ ಇಲಾಖೆಯಲ್ಲಿದೆ ಭರ್ಜರಿ 3624 ಹುದ್ದೆ! 

Leave A Reply

Your email address will not be published.