Basavnagowda patil yatnal: ಸದ್ಯದಲ್ಲೇ ಸಿದ್ದರಾಮಯ್ಯ, ಡಿಕೆಶಿ ಇಬ್ರೂ ಮೆಟ್ಟು-ಮೆಟ್ಟಲ್ ಹೊಡ್ಕೊಳ್ತಾರೆ- ಬಸವನಗೌಡ ಯತ್ನಾಳ್!!

latest news politics Basanagowda Patil Yatnal Lashesh Out at Siddaramaiah Dk Shivakumar in Belgaum

Basavnagowda patil yatnal:  ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌(DCM DK Shivkumar) ಇಬ್ಬರು ಸದ್ಯದಲ್ಲೇ ಮೆಟ್ಟ್, ಮೆಟ್ಟಲ್ ಹೊಡೆದಾಡಿಕೊಳ್ತಾರೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್(Basavnagowda patil yatnal) ಹೇಳಿದ್ದಾರೆ.

ಹೌದು, ರಾಜ್ಯದಲ್ಲಿ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಸರ್ಕಾರದ(Congress Government) ಬಗ್ಗೆ ಬಿಜೆಪಿ(BJP) ನಾಯಕ ನಿರಂತರವಾಗಿ ಟೀಕಾಪ್ರಹಾರ ನಡೆಸುತ್ತಿದ್ದಾರೆ. ಅಂತೆಯೇ ಇದೀಗ “ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌(DK Shivkumar) ಇಬ್ಬರ ನೇತೃತ್ವದ ಸರ್ಕಾರ ಐದು ವರ್ಷ ಪೂರ್ಣಗೊಳಿಸಲ್ಲ. ಲೋಕಸಭಾ ಚುನಾವಣೆ(Parliament election) ಮುನ್ನ, ಇಲ್ಲಾ ಚುನಾವಣೆಯಾದ ಬಳಿಕ ಇವರಿಬ್ಬರ ನಡುವೆ ಆ್ಯಕ್ಸಿಡೆಂಟ್(Accident) ಆಗುತ್ತದೆ. ಅಷ್ಟರಲ್ಲಿ ಇಬ್ಬರು ಮೆಟ್ಟು, ಮೆಟ್ಟಲ್ ಹೊಡೆದಾಡಿಕೊಳ್ತಾರೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಹೇಳಿದ್ದಾರೆ.

ಬೆಳಗಾವಿಯಲ್ಲಿ(Belgavi) ಭಾನುವಾರ ನಡೆದ ಜಿಲ್ಲಾ ಮಟ್ಟದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಡಿಕೆಶಿ ಅವರು ಯಡಿಯೂರಪ್ಪ, ಬೊಮ್ಮಾಯಿ ಮನೆಗೆ ಹೋಗಿ ಸೌಜನ್ಯ ಭೇಟಿ ಅಂತಾರೆ. ಇವರು ಸೌಜನ್ಯ ಭೇಟಿ ಕೊಡ್ತಿಲ್ಲ ಸೋನಿಯಾ ಗಾಂಧಿ (Sonia Gandhi) ಗೆ ಅಂಜಿಸುವ ಕೆಲಸ ಮಾಡುತ್ತಾರೆ. ಬೊಮ್ಮಾಯಿ (Basavaraj Bommai) ಯವರೇ ಅವರನ್ನ ನೀವು ಮನೆವರೆಗೂ ಬಿಟ್ಟುಕೊಳ್ಳಬೇಡಿ. ನಾವು ವಿರೋಧ ಪಕ್ಷದವರ ಮನೆಗೆ ಹೋಗುವುದಿಲ್ಲ ಅಂತಾರೆ. ಅದೇ ರೀತಿ ನಾವು ಅವರ ಮನೆಗೆ ಹೋಗುವುದಿಲ್ಲ ಅಂತಾ ಹೇಳಿ. ಅವರನ್ನ ಸ್ವಾಗತಿಸಿಕೊಂಡ್ರೇ ನಮ್ಮ ಕಾರ್ಯಕರ್ತರು ಮಲಗಿ ಬಿಡುತ್ತಾರೆ” ಎಂದು ಹೇಳಿದ್ದಾರೆ.

ಅಲ್ಲದೆ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ, ಹಲಕಟ್‌ಗಿರಿ ಮಾಡೊದಿದ್ರೇ ಬಿಟ್ಟು ಹೋಗಿ. ನಾವು ಯಾರು ಜಗಳ ಮಾಡುತ್ತಿಲ್ಲ, ಪಾರ್ಟಿ ನಿರ್ಣಯ ಮಾಡಿದವರ ಪರ ಕೆಲಸ ಮಾಡಿ. ವಿಧಾನಸಭೆ ಚುನಾವಣೆಯಲ್ಲಿ(Karnataka Assembly election)ಯಾರು, ಏನು ಮಾಡಿದರು ಎಂಬುದು ಕಾರ್ಯಕರ್ತರಿಗೆ ಗೊತ್ತಿದೆ. ಮೂರು ತಿಂಗಳಲ್ಲಿ ಗ್ಯಾರಂಟಿ ಬಣ್ಣ ಬಯಲು ಆಗಲಿದೆ. ಸಿದ್ದರಾಮಯ್ಯನವರು ಏನ್ ಹೇಳಿದರೂ ಅದನ್ನ ಹೊರ ತೆಗೆಯುತ್ತೇವೆ. ನಾವು ಗಟ್ಟಿ ಇದ್ದೇವೆ ದನ ಕಾಯುತ್ತಿಲ್ಲ ಆರ್ಥಿಕತೆ ಬಗ್ಗೆಯೂ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಇನ್ನು ಮೋದಿಗೆ(PM Modi) ಗೌರವ ಕೊಡುವ ಬಗ್ಗೆ ಮಾತನಾಡಿದ ಅವರು ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿಗಳನ್ನು ಬಹಳ ತಿರುಗಾಡಿಸಿದ್ದು, ನಮಗೆ ಬೇಸರವಾಗ್ತಿದೆ. ಪ್ರಧಾನಿ ಮೋದಿಯವರು ಬೆಂಗಳೂರಿನಲ್ಲಿ 25 ಕೀಮಿ ರೋಡ್ ಶೋ ಮಾಡಿದ್ದರು. ಬೆಳಗಾವಿ, ಮೈಸೂರಿನಲ್ಲಿ ಪ್ರಧಾನಿ ‌ನರೇಂದ್ರ ಮೋದಿ ರೋಡ್ ಶೋ ಮಾಡಿದರು. ಮೋದಿಗೆ ಗೌರವ ಕೊಡುವುದಕ್ಕಾಗಿ ಮುಂದಿನ ಚುನಾವಣೆಯಲ್ಲಿ 28 ಸ್ಥಾನವನ್ನು ನಾವು ಗೆಲ್ಲಬೇಕು. ದೇಶದಲ್ಲಿ ಸಮಾನ ನಾಗರಿಕ ಕಾಯ್ದೆ ಜಾರಿಯಾಗಲಿದೆ. ಪಕ್ಷ ನಿರ್ಣಯ ಮಾಡಿದವರು ವಿರೋಧ ಪಕ್ಷದ ನಾಯಕರು ಆಗಲಿದ್ದಾರೆ. ನಮ್ಮಲ್ಲಿ ಯಾವುದೇ ಒಳ ಪೈಪೋಟಿ ಇಲ್ಲಾ ಎಂದು ಯತ್ನಾಳ್ ಸ್ಪಷ್ಟಪಡಿಸಿದರು.

Leave A Reply

Your email address will not be published.