ಕರ್ನಾಟಕದ ಶಾಲಾ-ಕಾಲೇಜುಗಳಿಗೆ ಆರೋಗ್ಯ ಇಲಾಖೆ ಅಲರ್ಟ್ ಘೋಷಣೆ !

latest news Health department alert announcement for Karnataka schools and colleges

Kerala: ಕೇರಳ(Kerala)ದಲ್ಲಿ ಜ್ವರದ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ರಾಜ್ಯ ಆರೋಗ್ಯ ಇಲಾಖೆ ಹೈ ಅಲರ್ಟ್​ ಆಗಿದೆ. ನೆರೆ ರಾಜ್ಯ ಕೇರಳದಲ್ಲಿ ಕಳೆದೊಂದು ವಾರದಿಂದ ಜ್ವರದ ಅಬ್ಬರ ಹೆಚ್ಚಾಗುತ್ತಿದ್ದು ಈ ಹಿನ್ನಲೆಯಲ್ಲಿ ರಾಜ್ಯದ ಶಾಲಾ ಕಾಲೇಜುಗಳು ಸೇರಿದಂತೆ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಮಂಜಾಗ್ರತ ಕ್ರಮ ವಹಿಸಲು ಸೂಚನೆಯನ್ನು ನೀಡಲಾಗಿದೆ.

ಕೇರಳದಲ್ಲಿ ಚಿಕುನ್ ಗುನ್ಯಾ, ಡೆಂಗ್ಯೂ, ಹಕ್ಕಿ ಜ್ವರ, ಹಂದಿ ಜ್ವರ, ವೈರಲ್ ಫೀವರ್, ಹೆಪಟೈಟಿಸ್​ ಏರಿಕೆಯಾಗಿದ್ದು, ಪ್ರತಿನಿತ್ಯ ಬರೊಬ್ಬರಿ 10 ಸಾವಿರ ಜ್ವರದ ಕೇಸ್​ಗಳು ದಾಖಲಾಗುತ್ತಿದೆ. ಇದರ ಬೆನ್ನಲ್ಲೇ ಕೇರಳದ ಗಡಿಭಾಗದ ಜಿಲ್ಲೆಗಳಾದ ಬೆಂಗಳೂರು ಸೇರಿದಂತೆ ಮಂಗಳೂರು, ಮಡಿಕೇರಿ, ಕಾಸರಗೋಡು, ಉಡುಪಿ, ಚಾಮರಾಜನಗರ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ರಾಜ್ಯದ ಶಾಲಾ ಮಕ್ಕಳಿಗೆ ಸೋಂಕು ತಗುಲದಂತೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಇನ್ನು ಈ ಕುರಿತು ಈಗಾಗಲೇ ಸರ್ಕಾರಿ ಶಾಲೆ ವಿಜ್ಞಾನ ಶಿಕ್ಷಕರಿಗೆ ಸ್ಪೆಷಲ್ ಟ್ರೈನಿಂಗ್ ನೀಡಲಾಗಿದೆ. ಫೀವರ್ ಹೇಗೆ ಪತ್ತೆ ಹಚ್ಚಬೇಕು? ಮಗುವಿಗೆ ಜ್ವರ ಬಂದರೆ ಏನು ಮಾಡಬೇಕು? ಎಂಬ ಸಂಪೂರ್ಣ ಮಾಹಿತಿಯನ್ನು ನೀಡುತ್ತಿದ್ದಾರೆ. ಅಲ್ಲದೆ, ಈ ಬಗ್ಗೆ ವಿದ್ಯಾರ್ಥಿಗಳಿಗೂ ಅರಿವು ಮೂಡಿಸಲು ತಿಳಿಸಲಾಗಿದೆ.

ಸದ್ಯ ಕೇರಳದಲ್ಲಿ 898 ಡೆಂಗ್ಯೂ ಪ್ರಕರಣಗಳು, 78 ಹೆಪಟೈಟಿಸ್ , 24 ಮಲೇರಿಯಾ, 11 ಟೈಫೆಡ್ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯಕ್ಕೂ ಕೇರಳ ಜ್ವರದ ಆತಂಕ ಶುರುವಾಗಿದೆ. ಕರ್ನಾಟಕದಲ್ಲಿ 2180 ಡೆಂಗ್ಯೂ ಕೇಸ್​ಗಳು, 534 ಚಿಕನ್ ಗುನ್ಯಾ ಸೇರಿದಂತೆ 84ಮಲೇರಿಯಾ ಪ್ರಕರಣಗಳು ಪತ್ತೆಯಾಗಿದೆ. ಮಳೆಯ ಕಾರಣದಿಂದಾಗಿ ಜ್ವರ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಯಿದ್ದು, ಮುಂಜಾಗೃತ ಕ್ರಮವಹಿಸಲು ಈಗಾಗಲೇ ರಾಜ್ಯ ಆರೋಗ್ಯ ಇಲಾಖೆಯು ಎಚ್ಚರಿಕೆಯನ್ನು ನೀಡಿದೆ.

 

ಇದನ್ನು ಓದಿ: ಕರ್ನಾಟಕದ ಶಾಲಾ-ಕಾಲೇಜುಗಳಿಗೆ ಆರೋಗ್ಯ ಇಲಾಖೆ ಅಲರ್ಟ್ ಘೋಷಣೆ ! 

Leave A Reply

Your email address will not be published.