Accident: ಚಲಿಸುತ್ತಿದ್ದ ಬಸ್ ನಲ್ಲಿ ಏಕಾಏಕಿ ಬೆಂಕಿ! 25 ಮಂದಿ ಸಜೀವ ದಹನ!

latest news accident 25 people died in a bus accident in Maharashtra

Share the Article

ಮುಂಬೈ: ಮಹಾರಾಷ್ಟ್ರದ ಎಕ್ಸ್‌ಪ್ರೆಸ್‌ವೇಯಲ್ಲಿ ಬಸ್ಸಿನಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂವರು ಮಕ್ಕಳು ಸೇರಿದಂತೆ 25 ಜನರು ಮೃತಪಟ್ಟ ದುರ್ಘಟನೆ ನಡೆದಿದ್ದು, ಈ ಅವಘಡದಲ್ಲಿ ಎಂಟು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಮೃದ್ಧಿ-ಮಹಾಮಾರ್ಗ್ ಎಕ್ಸ್‌ಪ್ರೆಸ್‌ವೇಯಲ್ಲಿ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಬುಲ್ಧಾನಾ ಬಳಿ ಟೈರ್ ಬ್ಲಾಸ್ಟ್‌ ಆದ ಪರಿಣಾಮ ನಿಯಂತ್ರಣ ತಪ್ಪಿದ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ. ಈ ಅವಘಡದ ಪರಿಣಾಮ 25 ಜನರು ಸುಟ್ಟು ಕರಕಲಾಗಿದ್ದು, ಬಸ್ ಚಾಲಕ ಸೇರಿದಂತೆ ಇನ್ನುಳಿದ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ಬುಲ್ಧಾನದ ಪೊಲೀಸ್ ವರಿಷ್ಠಾಧಿಕಾರಿ ಸುನೀಲ್ ಕಡಸನೆಯವರು ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಅವಘಡ ಕ್ಕೀಡಾದ ಬಸ್‌ ಪುಣೆಗೆ ತೆರಳುತ್ತಿತ್ತು ಎನ್ನಲಾಗಿದೆ.ಈ ವೇಳೆ ಬಸ್ಸಿನಲ್ಲಿ ಸುಮಾರು 33 ಮಂದಿ ಪ್ರಯಾಣಿಕರಿದ್ದರು. ಈ ಪ್ರಕರಣದ ಕುರಿತು ಪೋಲಿಸರು ದೂರು ದಾಖಲಿಸಿಕೊಂಡು ತನಿಖೆ ಮಾಡುತ್ತಿದ್ದಾರೆ. ಶವಗಳ ಗುರುತು ಪತ್ತೆ ಹಚ್ಚಿದ ಬಳಿಕ ಕುಟುಂಬದ ಸದಸ್ಯರಿಗೆ ಶವವನ್ನು ಹಸ್ತಾಂತರಿಸಲು ಕ್ರಮಕೈಗೊಳ್ಳಲಾಗುತ್ತದೆ ಎಂದು ತಿಳಿದುಬಂದಿದೆ.

 

ಇದನ್ನು ಓದಿ: small savings schemes: ಬ್ಯಾಂಕ್ ಬಡ್ಡಿದರಗಳಲ್ಲಿ ಹೆಚ್ಚಳ, ಈ ಕ್ಷಣದಿಂದಲೇ ಜಾರಿ ಎಂದು ಕೇಂದ್ರ ಘೋಷಣೆ ! 

Leave A Reply