Gruha Lakshmi Scheme: ಮಹಿಳೆಯರಿಗೆ ಖುಷಿಯ ಸಂಗತಿ! ಜುಲೈ 14ರಿಂದ ಅರ್ಜಿ ಸಲ್ಲಿಕೆ ಪ್ರಾರಂಭ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ್ರು ಬಿಗ್ ಅಪ್ಡೇಟ್

Latest Karnataka news Congress guarantee Application registration for gruha lakshmi scheme from July 14th says minister Lakshmi hebbalkar

Gruha Lakshmi Scheme: ಈಗಾಗಲೇ ಕಾಂಗ್ರೆಸ್‌ ಸರ್ಕಾರದ ಗೃಹಲಕ್ಷ್ಮಿ (Gruha Lakshmi) ಯೋಜನೆಯ ಅರ್ಜಿ ಸಲ್ಲಿಕೆ ಕ್ಷಣಗಣನೆ ಆರಂಭವಾಗಿದ್ದು, ಗ್ರಾಹಕರು ನೋಂದಣಿ ಮಾಡಿಕೊಳ್ಳಲು ತಾ ಮುಂದು ತಾ ಮುಂದು ಎಂದು ಕಾಯುತ್ತಿದ್ದಾರೆ. ಇದೀಗ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಬಗ್ಗೆ ದೊಡ್ಡ ಅಪ್ಡೇಟ್ ಒಂದನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ್ದಾರೆ.

ಹೌದು, ಪ್ರತಿ ಮನೆಯ ಯಜಮಾನಿಗೆ 2000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ (Gruha Lakshmi Scheme) ಅರ್ಜಿ ಸಲ್ಲಿಸುವ ಪಕ್ರಿಯೆಯನ್ನು ಜುಲೈ 14ರಿಂದ ಆರಂಭಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಮಾತನಾಡಿದ ಹೆಬ್ಬಾಳ್ಕರ್ ಅವರು, ಜುಲೈ 3 ಅಥವಾ 4ರಂದು ಈ ಬಗ್ಗೆ ನಾವು ಘೋಷಣೆ ಮಾಡುತ್ತೇವೆ. ಆಗಸ್ಟ್‌ ತಿಂಗಳಿಂದ ಮನೆ ಯಜಮಾನಿ ಖಾತೆಗೆ 2 ಸಾವಿರ ರೂ. ಹಾಕುತ್ತೇವೆ. ರಾಜ್ಯದ ಜನರ ನಿರೀಕ್ಷೆಗೆ ತಕ್ಕ ಹಾಗೆ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ವೈಎಸ್‌ಟಿ ಸಂಗ್ರಹ ಮಾಡಲಾಗುತ್ತಿದೆ ಎಂಬ ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ ಆರೋಪ ವಿಚಾರವಾಗಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಅವರು ಕೂಡ ಸರ್ಕಾರ ನಡೆಸಿದಂತ ಅನುಭವ ಇದ್ದವರು. ಕುಮಾರಸ್ವಾಮಿ ಅಣ್ಣ ಹಿರಿಯರು, ಅವರು ಯಾವ ಅರ್ಥದಲ್ಲಿ ಮಾತನಾಡಿದ್ದಾರೆ ಗೊತ್ತಿಲ್ಲ ಎಂದರು.

ಅಲ್ಲದೆ, ಸರ್ಕಾರ ರಚನೆ ಆಗಿ ಈಗ ಒಂದು ತಿಂಗಳು, ಐದು ದಿನ ಆಗಿದೆ. ಸರ್ಕಾರಕ್ಕೆ ಕೆಲಸ ಮಾಡಲು ಬಿಡಿ. ಜನರು ಬಹಳಷ್ಟು ನಂಬಿಕೆ ಇಟ್ಟುಕೊಂಡು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ. ಈಗಲೇ ನೀವು ಈ ರೀತಿ ಮಾತನಾಡಲು ಶುರು ಮಾಡಿದರೆ ಅದು ತಪ್ಪಾಗುತ್ತದೆ. ಸ್ವಲ್ಪ ಅಮಯ ಕೊಡಿ ಎಂದರು.

ನಮಗೆ ಕೇಂದ್ರ ಸರ್ಕಾರ ಅಕ್ಕಿ ಕೊಡಲಿಲ್ಲ. ಆದರೂ ನಾವು ದುಡ್ಡು ಕೊಟ್ಟು ನಾವು ಕೊಟ್ಟ ಭಾಷೆಯನ್ನು ಉಳಿಸಿಕೊಳ್ಳುತ್ತಿದ್ದೇವೆ ಎಂದರು. ಈ ತಿಂಗಳಿಂದ ಗೃಹಜ್ಯೋತಿ, ಅನ್ನಭಾಗ್ಯ ಲಾಭ ಎಲ್ಲರಿಗೂ ಸಿಗುತ್ತದೆ. ಮುಂದಿನ ಆಗಸ್ಟ್‌ನಿಂದ ಗೃಹಲಕ್ಷ್ಮೀ ಯೋಜನೆ ಮನೆಯ ಯಜಮಾನಿಗೆ ಸಿಗುತ್ತದೆ. ಕೊಟ್ಟ ಭಾಷೆ ಉಳಿಸಿಕೊಳ್ಳುತ್ತಿದ್ದೇವೆ. ಸರ್ಕಾರ ಚೆನ್ನಾಗಿ ಕೆಲಸ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಜನರ ನಿರೀಕ್ಷೆಗೆ ತಕ್ಕ ಹಾಗೇ ಕೆಲಸ ಮಾಡುತ್ತೇವೆ ಎಂದರು.

ಇದನ್ನೂ ಓದಿ: Flight Ticket: ಕೇವಲ 1499 ರೂ. ಬೆಲೆಯಲ್ಲಿ ವಿಮಾನಯಾನ! ಮಾನ್ಸೂನ್ ಸ್ಪೆಷಲ್ ಆಫರ್ ಘೋಷಣೆ

Leave A Reply

Your email address will not be published.