Mangalore: ಕರಾವಳಿಯಲ್ಲಿ ರೆಡ್ ಅಲರ್ಟ್: ಮಹಾ ಮಳೆಗೆ ಸಿಕ್ಕಿದೆ ದೊಡ್ಡ ಮುನ್ಸೂಚನೆ !

 

Mangalore: ಮಂಗಳೂರು: ಸೋಮವಾರ ಬೆಳಗ್ಗಿನಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಮಂಗಳೂರು ನಗರ ಪ್ರದೇಶದ ಹಲವೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿದೆ. ನಿನ್ನೆಯಿಂದ ಸುರಿಯುತ್ತಿರುವ ಧಾರಾಕಾರ ಮಳೆ ಮುಂದುವರಿದಿದ್ದು, ಕರಾವಳಿ (Mangalore) ಭಾಗದಲ್ಲಿ ಮುಂದಿನ ಕೆಲವು ಗಂಟೆಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಹಲವೆಡೆ ವರುಣ ಅರ್ಭಟ ಜೋರಾಗಿದ್ದು, ದ‌ಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಧಿಕ ಮಳೆಯಾಗುತ್ತಿದ್ದು, ನಿನ್ನೆ ಸುರಿದ ಭಾರೀ ಮಳೆಗೆ ಪಂಪ್ ವೆಲ್, ಕೊಟ್ಟಾರ ಚೌಕಿ, ಮಾಲೆಮಾರ್ ಪ್ರದೇಶ ಜಲಾವೃತವಾಗಿದ್ದು ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಪಂಪ್‌ವೆಲ್ ಮೇಲ್ಸೇತುವೆ ಕೆಳಗೆ ಮೊಣಕಾಲು ಎತ್ತರಕ್ಕೆ ನೀರು ನಿಂತಿದ್ದು ನಗರದ ಕಡೆ ಸಂಚರಿಸುವ ವಾಹನಗಳು ಜಂಕ್ಷನ್‌ನಲ್ಲಿ ಸಿಲುಕಿಕೊಂಡದ್ದು ಕೂಡ ಕಂಡುಬಂತು. ಈ ನಡುವೆ ಇಂದು ಕೂಡ ಮಳೆಯ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಇಂದು ಜಿಲ್ಲೆಯ ಐದು ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜುಲೈ 4ರಂದು ಮಧ್ಯಾಹ್ನದ ಬಳಿಕ ಬಲವಾದ ಮೇಲ್ಮೈ ಮಾರುತಗಳು ಬೀಸುವ ಜೊತೆಗೆ ಗುಡುಗು ಮತ್ತು ಮಿಂಚು ಒಳಗೊಂಡಂತೆ ಮಳೆಯ ಆರ್ಭಟ ಜೋರಾಗಿರಲಿದ್ದು, ಈ ಹಿನ್ನೆಲೆಯಲ್ಲಿ ಕರಾವಳಿ ಭಾಗಗಳಲ್ಲಿ ಜುಲೈ 5 ರ ಬೆಳಗ್ಗೆ 8.30 ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಧಾರಾಕಾರ ಮಳೆ ಮುಂದುವರಿದರೆ ನಾಳೆ ಕೂಡ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡುವ ಸಾಧ್ಯತೆ ಇದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

Leave A Reply

Your email address will not be published.