ದಕ್ಷಿಣ ಕನ್ನಡ: ಮುಂದುವರಿದ ಭಾರೀ ಮಳೆ, ನಾಳೆ ಜುಲೈ 5 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ, ಕಟ್ಟೆಚ್ಚರಕ್ಕೆ ಸೂಚನೆ !

Mangalore: ಭಾರೀ ಮಳೆ ಮುಂದುವರಿದಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ (Mangalore)ಎಲ್ಲಾ ತಾಲೂಕುಗಳ ಶಾಲಾ ಕಾಲೇಜುಗಳಿಗೆ ಜುಲೈ 5 ಬುಧವಾರ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.

ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.

ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.

1. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 05.07,2023 ರಂದು ರಜೆಯನ್ನು ಘೋಷಿಸಲಾಗಿದೆ. 2. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.

3. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ. 4. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದ್ದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು

5.ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.

6. ಪ್ರವಾಸಿಗರು ಸಾರ್ವಜನಿಕರು ನದಿತೀರಕ್ಕೆ ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.

7. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು.

ಉಡುಪಿ ಜಿಲ್ಲೆಯಲ್ಲಿ:
ಅದೇ ರೀತಿ, ಕರಾವಳಿಯ, ಮಂಗಳೂರಿನ ಪಕ್ಕದ ಉಡುಪಿ ಜಿಲ್ಲೆಯಲ್ಲಿ ಪರಿಸ್ಥಿಯನ್ನು ನೋಡಿಕೊಂಡು ರಜೆ ನೀಡಲು ಆಯಾ ತಾಲೂಕುಗಳ ತಹಶೀಲ್ದಾರರುಗಳಿಗೆ ಸೂಚಿಸಲಾಗಿದೆ.

Leave A Reply

Your email address will not be published.